Cauvery: ಸರ್ವಪಕ್ಷ ಮೊರೆ- ಕಾವೇರುತ್ತಿರುವ ಕಾವೇರಿ ವಿವಾದ- ಸರ್ವಪಕ್ಷ ಸಭೆ ಕರೆಯಲು ನಿರ್ಧಾರ

Team Udayavani, Aug 20, 2023, 10:33 PM IST

dam

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವ ವಿಚಾರ ಕಾವು ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಸರ್ಕಾರವು ಆ. 23ರಂದು ಸರ್ವಪಕ್ಷಗಳ ಸಭೆ ಕರೆಯಲು ನಿರ್ಧರಿಸಿದೆ. ಇದು ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಮೊದಲ ಸರ್ವಪಕ್ಷ ಸಭೆ ಆಗಲಿದೆ.

ಕಾವೇರಿ ಮತ್ತು ಮಹದಾಯಿ, ಕೃಷ್ಣಾ ಮತ್ತಿತರ ಜಲವಿವಾದಗಳು, ರಾಜ್ಯದ ಜಲಾಶಯಗಳಲ್ಲಿ ನೀರಿನ ಪರಿಸ್ಥಿತಿ ಕುರಿತು ಚರ್ಚಿಸಲು ಆ. 23ರಂದು ಸರ್ವಪಕ್ಷಗಳ ಸಭೆ ಕರೆದಿದ್ದು, ಕೆಲವು ಸಂಸದರಿಗೂ ಆಹ್ವಾನ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಕೆಪಿಸಿಸಿ ಕಚೇರಿ ಬಳಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ. 21ರಂದು ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸಲಾಗುತ್ತದೆ. ಮತ್ತೂಂದೆಡೆ ನೀರು ಹರಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಪ್ರಾಧಿಕಾರಕ್ಕೆ ಮನವಿ ಮಾಡಲಾಗಿದೆ. ರೈತರ ಹಿತ ಕಾಯಬೇಕು ಹಾಗೂ ಕೋರ್ಟ್‌ ನಿರ್ಧಾರಕ್ಕೂ ಆದ್ಯತೆ ನೀಡಬೇಕು. ಇದೆಲ್ಲವನ್ನೂ ಗಮನದಲ್ಲಿ ಇರಿಸಿಕೊಂಡು ಸರ್ವಪಕ್ಷಗಳ ಸಭೆ ಕರೆಯಲಾಗಿದೆ ಎಂದರು.

ಈ ವರ್ಷ ಸರಿಯಾದ ಪ್ರಮಾಣದಲ್ಲಿ ಮಳೆ ಬಿದ್ದಿಲ್ಲ. ಹೀಗಾಗಿ ರಾಜ್ಯದ ಜನರ ಹಾಗೂ ರೈತರ ಹಿತ ಕಾಯುವುದು ನಮ್ಮ ಕರ್ತವ್ಯ. ರಾಜ್ಯದಲ್ಲಿನ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕುಸಿದಿದೆ. ನ್ಯಾಯಾಲಯದ ಆದೇಶ ಪಾಲನೆಯ ಜತೆಗೆ ರೈತರ ಹಿತ ಕಾಯುವ ಮುಂದಿನ ನಡೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು. ಕಾನೂನು ಹೋರಾಟ ಹೇಗೆ ಮಾಡಬೇಕು ಎಂಬುದನ್ನು ಅಡ್ವೊಕೇಟ್‌ ಜನರಲ್‌ ಅವರಿಗೆ ಬಿಟ್ಟಿದ್ದೇವೆ ಎಂದರು.

ಆ. 21ರಂದು ಬೆಂಗಳೂರು-ಮೈಸೂರು ಎಕ್ಸ್‌ಪ್ರಸ್‌ ಹೆದ್ದಾರಿ ತಡೆದು ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬಗ್ಗೆ ಕೇಳಿದಾಗ, ಅದು ಅವರದ್ದೇ ರಸ್ತೆ ಅಲ್ಲವೇ? ಅಲ್ಲಿ ಅನೇಕ ಜೀವಗಳು ಬಲಿಯಾಗಿವೆ. ಅವರು ಹೋರಾಟ ಮಾಡಲಿ ಎಂದು ತೀಕ್ಷ್ಣವಾಗಿ ಹೇಳಿದರು.

ಸರಕಾರದ ವಿರುದ್ಧ ವಿಪಕ್ಷಗಳ ಸಮರ

ಒಂದೆಡೆ ಮಳೆ ಕೊರತೆಯಿಂದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದೆ. ಈ ಸಂದರ್ಭದಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸಿದ್ದು ತೀವ್ರ ವಿರೋಧಕ್ಕೆ ಕಾರಣವಾಗಿದೆ. ಬಿಜೆಪಿ ಮತ್ತು ಜೆಡಿಎಸ್‌ ಸರಕಾರದ ನಡೆಯನ್ನು ಖಂಡಿಸಿವೆ.

ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಸರಕಾರದ ಮೌನವನ್ನು ಪ್ರಶ್ನಿಸಿದ್ದಾರೆ. ಸರಕಾರ ಈ ವಿಷಯವನ್ನು ಲಘುವಾಗಿ ಪರಿಗಣಿಸಿದೆ. ಪ್ರತೀ ವರ್ಷ ತನ್ನ ಸಾಗುವಳಿ ಭೂಮಿಯನ್ನು ತಮಿಳುನಾಡು ವಿಸ್ತರಿಸುತ್ತಿದೆ. ನ್ಯಾಯಮಂಡಳಿಯು ತಮಿಳುನಾಡಿಗೆ ಒಂದು ಲಕ್ಷ ಹೆಕ್ಟೇರ್‌ ಸಾಗುವಳಿ ನೀರನ್ನು ನೀಡಿದೆ. ಆದರೆ ನಾಲ್ಕು ಲಕ್ಷ ಹೆಕ್ಟೇರ್‌ ಭೂಮಿಗೆ ನೀರು ಪೂರೈಸುವುದು ಆ ರಾಜ್ಯದ ಬೇಡಿಕೆಯಾಗಿದೆ. ಇದನ್ನು ನಾವು ಪ್ರತಿಭಟಿಸಬೇಕಿದೆ ಎಂದರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ತತ್‌ಕ್ಷಣ ನಿಲ್ಲಿಸಬೇಕು ಹಾಗೂ ಸುಪ್ರೀಂಕೋರ್ಟ್‌ಗೆ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು. ಆ ಮೂಲಕ ರೈತರ ಹಿತ ಕಾಯಬೇಕು. ತಮಿಳುನಾಡು ಕುರುವೈ ಬೆಳೆಗೆ ಎರಡು ಪಟ್ಟು ನೀರು ಬಳಕೆ ಮಾಡಿದೆ. ರಾಜ್ಯ ಸರಕಾರ ಇದನ್ನು ಪ್ರತಿಭಟಿಸದೆ, ಸುಪ್ರೀಂ ಕೋರ್ಟ್‌ನಲ್ಲಿ ತಮಿಳುನಾಡು ಸರಕಾರ ಅರ್ಜಿ ಹಾಕಿದ ಕೂಡಲೇ ನೀರು ಬಿಡುಗಡೆ ಮಾಡಿರುವುದು ಖಂಡನೀಯ ಎಂದಿದ್ದಾರೆ.

ಇಂದು ಬಿಜೆಪಿ, ರೈತ ಸಂಘಗಳ ಪ್ರತಿಭಟನೆ

ತಮಿಳುನಾಡಿಗೆ ನೀರು ಹರಿಸಿರುವ ರಾಜ್ಯ ಸರಕಾರದ ನಡೆಯನ್ನು ಖಂಡಿಸಿ ಸೋಮವಾರ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿ ಬಂದ್‌ಗೆ ಬಿಜೆಪಿ ಕರೆ ನೀಡಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೂ ಆಹ್ವಾನ ನೀಡಲಾಗಿದೆ. ಜತೆಗೆ ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ಆಟೋ, ಟ್ಯಾಕ್ಸಿ ಮಾಲಕರ ಸಂಘಗಳಿಗೂ ಮನವಿ ಮಾಡಲಾಗಿದೆ. ಈ ಎಲ್ಲ ಒತ್ತಡಗಳಿಗೆ ಮಣಿದ ಸರಕಾರವು ಸರ್ವಪಕ್ಷಗಳ ಸಭೆ ಕರೆದಿದೆ.

ಇಂದು ಸುಪ್ರೀಂ ವಿಚಾರಣೆ

ತಮಿಳುನಾಡು ಸಲ್ಲಿಸಿರುವ ಅರ್ಜಿಯು ಆ. 21ರಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ. ನಮ್ಮ ರಾಜ್ಯದಿಂದಲೂ ಮನವಿ ಸಲ್ಲಿಸಲಾಗುವುದು ಎಂದು ಸರಕಾರ ಹೇಳಿದೆ.

ತಮಿಳುನಾಡು ಸಲ್ಲಿಸಿದ ಅರ್ಜಿ ಸೋಮವಾರ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ನಿಗದಿಯಾಗಿದೆ. ಕರ್ನಾಟಕವನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ. ನಮ್ಮ ವಾದಕ್ಕೆ ಕಾಲಾವಕಾಶ ಕೇಳಲಾಗುವುದು.

– ಕೆ. ಶಶಿಕಿರಣ್‌ ಶೆಟ್ಟಿ, ಅಡ್ವೊಕೇಟ್‌ ಜನರಲ್‌

ಕಾವೇರಿ ನದಿ ನೀರು ವಿಚಾರದಲ್ಲಿ ಪ್ರತಿಭಟನೆ ಮಾಡುವ ಯಾವುದೇ ನೈತಿಕ ಹಕ್ಕು ಬಿಜೆಪಿಗಿಲ್ಲ. ಹಿಂದೆ ಅವರ ಸರಕಾರ ಇದ್ದಾಗಲೇ ತಮಿಳುನಾಡಿಗೆ ಸಾಕಷ್ಟು ನೀರು ಬಿಟ್ಟಿದ್ದಾರೆ.

– ಸಿದ್ದರಾಮಯ್ಯ, ಸಿಎಂ

ಅಧಿಕಾರಕ್ಕೆ ಬರುವುದಕ್ಕೆ ಮುನ್ನ ಮೇಕೆದಾಟು ಯೋಜನೆಗಾಗಿ ಹೋರಾಟ ಮಾಡಿದವರು ಈಗ ಏನು ಮಾಡುತ್ತಿದ್ದಾರೆ?

– ಎಚ್‌.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ

ಟಾಪ್ ನ್ಯೂಸ್

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.