Politics: ಶಾಸಕರೊಂದಿಗೆ ಪ್ರವಾಸ ಹೊರಟಿದ್ದ ಸತೀಶ್‌ ಜಾರಕಿಹೊಳಿಗೆ ಹೈಕಮಾಂಡ್‌ ಬ್ರೇಕ್‌

Team Udayavani, Oct 16, 2023, 11:43 PM IST

sathish jarakiholi

ಬೆಂಗಳೂರು: ಬಹುಮತದೊಂದಿಗೆ ಸರಕಾರ ರಚಿಸಿದ್ದರೂ ಕಾಂಗ್ರೆಸ್‌ನ ಒಳಬೇಗುದಿ ಮಾತ್ರ ತಣ್ಣಗಾಗುತ್ತಿಲ್ಲ. ಆಗಾಗ ಸಚಿವರ ವಿರುದ್ಧ ಶಾಸಕರು ಸಮರ ಸಾರಿದರೆ, ಈ ಬಾರಿ ಸಚಿವರೇ ದಂಡು ಕಟ್ಟಲು ಮುಂದಾಗಿ ಹೈಕಮಾಂಡ್‌ ಮಧ್ಯಪ್ರವೇಶದಿಂದ ಹಿಂದೆ ಸರಿದಿದ್ದಾರೆ.

ಲೋಕೋಪಯೋಗಿ ಸಚಿವರೂ ಆಗಿರುವ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ದಸರಾ ನೆಪದಲ್ಲಿ ಜಿಲ್ಲೆಯ 20ಕ್ಕೂ ಹೆಚ್ಚು ಶಾಸಕರನ್ನು ಮೈಸೂರಿನತ್ತ ಕರೆದೊಯ್ಯಲು ಬಸ್‌ ಸಿದ್ಧಪಡಿಸಿಕೊಂಡಿದ್ದರು. ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಅವರ ಕಾರ್ಯತಂತ್ರವೀಗ ಕುತೂಹಲಕ್ಕೆ ಕಾರಣವಾಗಿದೆ.

ಸದ್ಯಲ್ಲೇ ಪಕ್ಷ ಸಂಘಟನೆ ಪುನಾರಚನೆ ಆಗುವ ಸಾಧ್ಯತೆಗಳಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ಕೈತಪ್ಪಿ ಹೋಗುವ ಗುಮಾನಿ ಇದೆ. ಅಲ್ಲದೆ, ಪಕ್ಷದ ಪದಾಧಿಕಾರಿಗಳ ಮರುವಿಂಗಡಣೆ ಸಹಿತ ಯಾವುದೇ ಪ್ರಕ್ರಿಯೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಿಲ್ಲ, ವಿಶ್ವಾಸಕ್ಕೆ ಪಡೆಯುತ್ತಿಲ್ಲ ಎನ್ನುವ ಅಸಮಾಧಾನಗಳೂ ಇವರಲ್ಲಿವೆ. ಇದನ್ನೇ ಸಕಾಲ ಎಂದುಕೊಂಡಿರುವ ಸತೀಶ್‌, ತಾವು ಉಪಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿದ್ದರಿಂದ ಈ ಬಗ್ಗೆ ಹೈಕಮಾಂಡ್‌ಗೆ ಸಂದೇಶ ರವಾನಿಸುವ ಇರಾದೆಯೂ ಇತ್ತು ಎನ್ನಲಾಗಿದೆ.

ಕುಡಿಯೊಡೆದ ಬಣ ರಾಜಕಾರಣ
ಸಿಎಂ ಮತ್ತು ಡಿಸಿಎಂ ನಡುವೆ ಎಲ್ಲವೂ ಸರಿ ಇಲ್ಲ ಎಂಬುದು ಹಲವು ಸಂದರ್ಭಗಳಲ್ಲಿ ಸಾಬೀತಾಗಿದ್ದರೂ ಅನುಸರಿಸಿಕೊಂಡು ಹೋಗಲಾಗುತ್ತಿದೆ. ಇದರೊಂದಿಗೆ ಇತ್ತೀಚೆಗಷ್ಟೇ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸುವ ವಿಚಾರದಲ್ಲಿ ಸಚಿವರಲ್ಲೇ ಪರ-ವಿರೋಧದ ಚರ್ಚೆಗಳಾಗಿದ್ದವು. ಸಚಿವರು ತಮಗೆ ಸ್ಪಂದಿಸುತ್ತಿಲ್ಲ, ಶಾಸಕಾಂಗ ಸಭೆ ಕರೆಯಿರಿ ಎಂದು ಸಿಎಂಗೆ ದೂರು ಸಲ್ಲಿಸಿದ್ದರು. ಈಗ ಮತ್ತೂಮ್ಮೆ ಕಾಂಗ್ರೆಸ್‌ನೊಳಗೆ ಬಣ ರಾಜಕಾರಣ ಕುಡಿಯೊಡೆದಂತಿದ್ದು, ಇದಕ್ಕೆ ಸಚಿವ ಸತೀಶ್‌ ಮುನ್ನುಡಿ ಬರೆದಿದ್ದಾರೆ.

ಹೈಕಮಾಂಡ್‌ ಹಿತವಚನ
ಶಾಸಕರ ಮೈಸೂರು ಪ್ರವಾಸದ ವಿಷಯ ತಿಳಿಯುತ್ತಿದ್ದಂತೆ ಮಧ್ಯಪ್ರವೇಶಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಗುಂಪು ಕಟ್ಟಿಕೊಂಡು ಎಲ್ಲೂ ಹೋಗದಂತೆ ಬುದ್ಧಿ ಮಾತು ಹೇಳಿದ್ದಾರೆ. ಒಂದೆಡೆ ಬರಗಾಲವಿದೆ, ಇನ್ನೊಂದೆಡೆ ಪಂಚರಾಜ್ಯಗಳ ಚುನಾವಣೆ ಇದೆ. ಇಂಥ ಸಂದರ್ಭದಲ್ಲಿ ಗುಂಪಾಗಿ ಹೋಗುವುದು ಅನಾವಶ್ಯಕವಾಗಿ ವಿಪಕ್ಷದವರಿಗೆ ಆಹಾರ ಕೊಟ್ಟಂತಾಗುತ್ತದೆ. ಹೀಗಾಗಿ ಎಲ್ಲೂ ಹೋಗಬೇಡಿ ಎಂದು ತಾಕೀತು ಮಾಡಿದ್ದಾರೆ.

ಪ್ರವಾಸ ರದ್ದಾಗಿಲ್ಲ, ಮುಂದೂಡಿದ್ದೇವೆ
ಎಲ್ಲಿಯಾದರೂ ಪ್ರವಾಸ ಹೋಗಬೇಕೆಂದು ಶಾಸಕರೊಂದಿಗೆ ಮಾತುಕತೆ ಮಾಡಲಾಗಿತ್ತು. ದಸರಾ ಹಿನ್ನೆಲೆಯಲ್ಲಿ ಮೈಸೂರಿಗೆ ಬರುವಂತೆ ಅಲ್ಲಿನ ಶಾಸಕರಿಂದ ಆಹ್ವಾನವಿತ್ತು. ಹಾಗಾಗಿ ವಿಶೇಷ ಸಂದರ್ಭ ಎಂಬ ಕಾರಣದಿಂದ ನಮ್ಮ ಕೆಲವು ಸಮಾನಮನಸ್ಕ ಶಾಸಕರು ಮೈಸೂರಿಗೆ ತೆರಳುವ ಯೋಜನೆ ಹಾಕಿಕೊಂಡಿದ್ದೆವು. ಎಲ್ಲರೂ ಒಟ್ಟಾಗಿದ್ದೇವೆ. ಪ್ರವಾಸ ರದ್ದಾಗಿಲ್ಲ, ಸದ್ಯಕ್ಕೆ ಮುಂದೂಡಿದ್ದೇವಷ್ಟೇ. ನಮ್ಮಲ್ಲಿ ಬಣ ರಾಜಕಾರಣ ಇಲ್ಲ. ಸಿಎಂ ಹಾಗೂ ಅಧ್ಯಕ್ಷರ ಗಮನಕ್ಕೆ ತಂದು ಮುಂದಿನ ದಿನಗಳಲ್ಲಿ ಪ್ರವಾಸ ಮಾಡುತ್ತೇವೆ ಎಂದು ಸತೀಶ್‌ ಜಾರಕಿಹೊಳಿ ಅವರೇ ಸ್ಪಷ್ಟನೆ ನೀಡಿದ್ದಾರೆ.

ದುಬಾೖಗೆ ಹಾರಿದ ಕೆಲವು ಶಾಸಕರು?
ಇದೆಲ್ಲದರ ಮಧ್ಯೆ ಸಚಿವ ಸತೀಶ್‌ಜಾರಕಿಹೊಳಿ ಅವರ ಅಣತಿಯಂತೆ ಕೆಲವು ಶಾಸಕರು ಮುಂದಾಲೋಚನೆಯಿಂದ ದುಬಾೖಗೆ ತೆರಳಿರುವ ಮಾಹಿತಿ ಇದ್ದು, ಪಕ್ಷದಲ್ಲಿ ಯಾರಿಗೂ ಅನುಮಾನ ಬರಬಾರದು ಹಾಗೂ ತಪ್ಪು ಸಂದೇಶ ಹೋಗ ಬಾರದೆನ್ನುವ ಕಾರಣಕ್ಕೆ ದಸರಾ ನೆಪ ಒಡ್ಡಿದ್ದರು. ಬೆಳಗಾವಿಯಿಂದ ಮೈಸೂರಿಗೆ ಹೋಗಿ, ಅಲ್ಲಿಂದ ಮಂಗಳೂರು ಅಥವಾ ಬೆಂಗಳೂರಿನ ಮೂಲಕ ಉಳಿದವರೆಲ್ಲರೂ ದುಬಾೖಗೆ ತೆರಳುವ ಮಹಾಯೋಜನೆ ರೂಪಿಸಲಾಗಿತ್ತು. ಎಲ್ಲದಕ್ಕೂ ಹೈಕಮಾಂಡ್‌ ತಣ್ಣೀರೆರಚಿ ದಂತಾಗಿದೆ ಎಂದು ಮೂಲಗಳು ಹೇಳಿವೆ.

ಟಾಪ್ ನ್ಯೂಸ್

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

1

Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.