ನಿರ್ಬಂಧ ಮಧ್ಯೆಯೂ ಸವದತ್ತಿ ಯಲ್ಲಮ್ಮನತ್ತ ಭಕ್ತರ ಹೆಜ್ಜೆ


Team Udayavani, Oct 14, 2020, 4:13 PM IST

ನಿರ್ಬಂಧ ಮಧ್ಯೆಯೂ ಸವದತ್ತಿ ಯಲ್ಲಮ್ಮನತ್ತ ಭಕ್ತರ ಹೆಜ್ಜೆ

ಸವದತ್ತಿ: ಕೊರೊನಾ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರದ ಸೂಚನೆಯಂತೆ ಯಲ್ಲಮ್ಮ ದೇವಸ್ಥಾನದಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಿದ್ದರೂ ಭಕ್ತರ ಆಗಮನ ಮಾತ್ರ ನಿಂತಿಲ್ಲ. ದಸರಾಕ್ಕೆ ಕ್ಷಣಗಣನೆ ಆರಂಭವಾಗಿರುವ ಈ ಸಂದರ್ಭದಲ್ಲಿ ಕ್ಷೇತ್ರದತ್ತ ಭಕ್ತರ ಹರಿವೂ ಹೆಚ್ಚಿದೆ.

ದಸರಾ ವೇಳೆ ಯಲ್ಲಮ್ಮ ದೇವಸ್ಥಾನಕ್ಕೆ ಮಹಾರಾಷ್ಟ್ರ ಸೇರಿದಂತೆ ಹೊರ ರಾಜ್ಯಗಳಿಂದ ಹೆಚ್ಚು ಭಕ್ತರು ಬರುವ ನಿರೀಕ್ಷೆಯಿಂದ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ಅ. 31ರ ವರೆಗೆ ಸಾರ್ವಜನಿಕ ದರ್ಶನದ ನಿರ್ಬಂಧ ಮುಂದುವರಿಸಿ ಆದೇಶ ಹೊರಡಿಸಿದ್ದಾರೆ.

ಸವದತ್ತಿ-ಯಲ್ಲಮ್ಮಗುಡ್ಡದ ಎರಡು ಮಾರ್ಗಗಳಲ್ಲಿ ಮತ್ತು ಉಗರಗೋಳ ಮಾರ್ಗದಲ್ಲಿ ಬ್ಯಾರಿಕೇಡ್‌ ಹಾಕಿ ದೇವಸ್ಥಾನಕ್ಕೆ ಬರದಂತೆ ತಡೆಯಲಾಗಿದೆ. ಆದರೂ ಸಹ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ವ್ಯಾಪಾರಕ್ಕೆಂದು ಸ್ಥಳಿಕರು ಹೋಗುತ್ತಿರುವುದು ತಪ್ಪುತ್ತಿಲ್ಲ. ಮಂಗಳವಾರ ಮತ್ತು ಶುಕ್ರವಾರ ಹಾಗೂ ಘಟ್ಟದ ದಿನಗಳಂದು ಭಕ್ತರು ಸಾಗರೋಪಾದಿಯಲ್ಲಿ ಬರುತ್ತಿದ್ದಾರೆ

ಇದನ್ನೂ ಓದಿ :ಮಹಾ ಮಳೆಯಿಂದ ಬೆಳೆ ಹಾನಿ: ತುರ್ತಾಗಿ ವಿಶೇಷ ಪ್ಯಾಕೇಜ್ ಘೋಷಿಸಲು ಸಿದ್ದರಾಮಯ್ಯ ಆಗ್ರಹ

ಹೊಸ ಪದ್ಧತಿ ಮುನ್ನೆಲೆಗೆ
ಲಾಕ್‌ಡೌನ್‌ ಸಡಿಲಿಕೆ ಬಳಿಕ ಕ್ಷೇತ್ರದತ್ತ ಭಕ್ತರ ಆಗಮನ ಪ್ರಾರಂಭವಾಗಿದ್ದು, ದೇವಸ್ಥಾನಕ್ಕೆ ಪ್ರವೇಶ ನಿರ್ಬಂಧ ಹಿನ್ನೆಲೆಯಲ್ಲಿ ಮಹಾದ್ವಾರದ ಮುಂದಿನ ರಸ್ತೆ ಮೇಲೆ ಹಣ್ಣು-ಕಾಯಿ ಮಾಡುತ್ತಿದ್ದರು. ಆದರೆ ಇದೀಗ ದೇವಸ್ಥಾನದ ಸುತ್ತಲಿನ 3-4 ಕಿಮೀ ಆಚೆಗೆ ಎಲ್ಲ ರಸ್ತೆಗಳನ್ನು ಬ್ಯಾರಿಕೇಡ್‌ಗಳಿಂದ ಬಂದ್‌ ಮಾಡಿದ್ದರೂ ಬ್ಯಾರಿಕೇಡ್‌ ಮುಂದೆ, ರಸ್ತೆ ಬದಿ, ಬಯಲು ಪ್ರದೇಶಗಳಲ್ಲಿ ಧಾರ್ಮಿಕ ಕಾರ್ಯಗಳನ್ನು ನಡೆಸುವ ಪದ್ಧತಿ ಆಚರಣೆ ಬಂದಿದೆ.

ಸರ್ಕಾರದ ಕಟ್ಟುಪಾಡು ಕೇಳುವವರಿಲ್ಲ
ಸುತ್ತಲಿನ ಗ್ರಾಮಗಳ ಬೀದಿ ವ್ಯಾಪಾರಸ್ಥರು ಭಕ್ತರ ಆಗಮನ ಕಂಡು ಸಾಗಿಬರುತ್ತಿದ್ದಾರೆ. ಜೋಗುತಿಯರು ಭಕ್ತರಿಂದ ಪಡ್ಡಲಗಿ ತುಂಬಿಸುವ ಕಾರ್ಯಕ್ಕೆ ಮುಂದಾಗುತ್ತಿದ್ದಾರೆ. ಆರ್ಥಿಕ ಪರಿಸ್ಥಿತಿ ತೀವ್ರ ಹದಗೆಟ್ಟಿದೆ. ಕೊರೊನಾ ಬಂದರೂ ಸರಿಯೇ
ವ್ಯಾಪಾರ ಮಾಡಿ ಹೊಟ್ಟೆ ತುಂಬಿಸಿಕೊಳ್ಳುತ್ತೇವೆ ಎಂಬ ಮಾತುಗಳು ವ್ಯಾಪಾರಸ್ಥರದ್ದಾಗಿದೆ. ಸರ್ಕಾರದ ಕಟ್ಟುಪಾಡುಗಳನ್ನು ಜನ ಗಾಳಿಗೆ ತೂರಿದ್ದು, ಪೊಲೀಸ್‌ ಸಿಬ್ಬಂದಿ ಏನೇ ಕ್ರಮಗಳನ್ನು ಜರುಗಿಸಿದರೂ ತಲೆಕೆಡಿಸಿಕೊಳ್ಳದೆ ತಮ್ಮದೇ ಪ್ರಪಂಚದಲ್ಲಿ ತಲ್ಲೀನರಾಗಿದ್ದಾರೆ. ದೇವಸ್ಥಾನದ ಸುತ್ತಮುತ್ತಲಿನ ಗ್ರಾಪಂಗಳಿಂದ ಧ್ವನಿವರ್ಧಕಗಳ ಮೂಲಕ ಎಷ್ಟೇ ಜಾಗೃತಿ ಅಭಿಯಾನ ಕೈಗೊಂಡರೂ ಭಕ್ತರಾಗಲಿ, ವ್ಯಾಪಾರಸ್ಥರಾಗಲಿ ಸಾಮಾಜಿಕ ಅಂತರ, ಮಾಸ್ಕ್ ಧಾರಣೆ ಸೇರಿದಂತೆ ಯಾವ ಮುನ್ನೆಚ್ಚರಿಕಾ
ಕ್ರಮಗಳನ್ನೂ ಪಾಲಿಸುತ್ತಿಲ್ಲ.

ಟಾಪ್ ನ್ಯೂಸ್

prithvi shaw

Mumbai Cricket: ಸಚಿನ್‌ ತೆಂಡೂಲ್ಕರ್‌ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

prithvi shaw

Mumbai Cricket: ಸಚಿನ್‌ ತೆಂಡೂಲ್ಕರ್‌ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.