Save Malaprabha: ನೀರಿನ ಬಳಕೆ ಹಕ್ಕು- ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

28 ಸಂಸದರಿರುವ ರಾಜ್ಯ ಅನ್ಯಾಯ ಅನುಭವಿಸುತ್ತಿದೆ ಎಂಬ ಅಸಮಾಧಾನ, ಆಕ್ರೋಶ ರೈತದ್ದಾಗಿದೆ.

Team Udayavani, Sep 5, 2024, 12:09 PM IST

Save Malaprabha: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

ಉದಯವಾಣಿ ಸಮಾಚಾರ
ಹುಬ್ಬಳ್ಳಿ: ನಾಲ್ಕು ದಶಕಗಳಿಂದ ಹೋರಾಟ ಮಾಡಿದರೂ ಹನಿ ನೀರು ಸಿಗದೆ ರಾಜಕೀಯ ಗಾಳಕ್ಕೆ ಸಿಲುಕಿ ಒದ್ದಾಡುತ್ತಿರುವ ಮಹದಾಯಿ, ಕಳಸಾ-ಬಂಡೂರಿ ನಾಲಾ ಯೋಜನೆಯ ಗೊಡವೆಯೇ ಬೇಡವೆಂದು, ಪರ್ಯಾಯವಾಗಿ ಮಲಪ್ರಭಾ ಬಚಾವೋ ಆಂದೋಲನಕ್ಕೆ ಗಂಭೀರ ಯತ್ನಗಳು ನಡೆದಿವೆ. ಎಲ್ಲವೂ ಅಂದುಕೊಂಡಂತಾದರೆ ಅಕ್ಟೋಬರ್‌ 2 ಗಾಂಧಿ ಜಯಂತಿ ದಿನದಂದು ಆಂದೋಲನ ಘೋಷಣೆ ಸಾಧ್ಯತೆ ಇದೆ.

ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಲಪ್ರಭಾ ಬಚಾವೋ ಆಂದೋಲನ ಮೊಳಗಿಸಲು ರೈತರು ನಿರ್ಧರಿಸಿದ್ದಾರೆ. ಕಳಸಾ-ಬಂಡೂರಿ ನಾಲಾ ಕುಡಿಯುವ ನೀರಿನ ಯೋಜನೆಗೆ ಹೋರಾಟ ಮಾಡಿದ್ದು ರೈತರೇ ವಿನಃ ಅದರ ಫಲಾನಭವಿಗಳಲ್ಲ. ಇದರ ಬದಲು ಮಲಪ್ರಭಾ ನೀರು ನೀರಾವರಿಗೆ ಹೆಚ್ಚು ಬಳಕೆಗೆ ಹೋರಾಟ ಮಾಡೋಣ ಎನ್ನುವುದು ಹಲವು ರೈತರ ಅನಿಸಿಕೆಯಾಗಿದೆ.

ರಾಜಕೀಯ ಗಾಳಕ್ಕೆ ಸಿಲುಕಿದ ಮಹದಾಯಿ:
ಮಹದಾಯಿ ಕುರಿತಾಗಿ 1976ರಿಂದಲೇ ಧ್ವನಿ ಮೊಳಗಿದ್ದರೆ, ಕಳಸಾ-ಬಂಡೂರಿ ನಾಲಾ ಯೋಜನೆ 2000 ಇಸ್ವಿಯಿಂದ ಇಂದು-ನಾಳೆ ಜಾರಿ ಎನ್ನುತ್ತಲೇ ಸಾಗಿದೆ. ಮಹದಾಯಿ, ಕಳಸಾ-ಬಂಡೂರಿ ನಾಲಾ ಯೋಜನೆ ವಿಚಾರದಲ್ಲಿ ಗೋವಾದ ನಿಲುವುಗಳೇ ಜಾರಿ-ಯಶಸ್ವಿಯಾಗುತ್ತಿವೆ. ಇಬ್ಬರು ಸಂಸದರು ಮೇಲುಗೈ ಸಾಧಿಸುತ್ತಿದ್ದರೆ, 28 ಸಂಸದರಿರುವ ರಾಜ್ಯ ಅನ್ಯಾಯ ಅನುಭವಿಸುತ್ತಿದೆ ಎಂಬ ಅಸಮಾಧಾನ, ಆಕ್ರೋಶ ರೈತದ್ದಾಗಿದೆ.

ಮಹದಾಯಿ ನ್ಯಾಯಾಧಿಕರಣ ಕರ್ನಾಟಕಕ್ಕೆ 13.42 ಟಿಎಂಸಿ ಅಡಿಯಷ್ಟು ನೀರು ಹಂಚಿಕೆ ಮಾಡಿದ್ದು, ಇದರಲ್ಲಿ 8 ಟಿಎಂಸಿ ಅಡಿ ವಿದ್ಯುತ್‌ ಉತ್ಪಾದನೆಯದ್ದಾಗಿದೆ. ಉಳಿದ 5.42 ಟಿಎಂಸಿ ಅಡಿಯಷ್ಟು ನೀರು ಎಂದಿದ್ದರೂ, ವಾಸ್ತವವಾಗಿ ಬಳಕೆಗೆ ಸಿಗುವುದು ಕೇವಲ 3-4 ಟಿಎಂಸಿ ಅಡಿಯಷ್ಟು ಮಾತ್ರ. ಹುಬ್ಬಳ್ಳಿ-ಧಾರವಾಡ ಮಹಾನಗರ ಸೇರಿದಂತೆ ವಿವಿಧ ಕಡೆಗೆ ಕುಡಿಯುವ ನೀರಿನ ಉದ್ದೇಶದ ಹೆಸರಲ್ಲಿಯೇ 2000 ಇಸ್ವಿಯಲ್ಲಿ ಆರಂಭಗೊಂಡ ಕಳಸಾ-ಬಂಡೂರಿ ನಾಲಾ ಯೋಜನೆ ತ್ರಿಶಂಕು ಸ್ಥಿತಿಗೆ ತಲುಪಿದೆ.

ಮಹದಾಯಿ, ಕಳಸಾ-ಬಂಡೂರಿ ನಾಲಾ ಯೋಜನೆಗಾಗಿ ರೈತರು ಧರಣಿ, ಪಾದಯಾತ್ರೆ, ಉಪವಾಸ, ರಸ್ತೆ -ರೈಲು ತಡೆ ಹೀಗೆ ವಿವಿಧ ಸ್ವರೂಪದ ಹೋರಾಟ ಮೂಲಕ ಲಾಠಿ-ಗುಂಡಿನೇಟು ತಿಂದಿದ್ದಾರೆ. ಜೈಲು ಸೇರಿದ್ದಾರೆ, ಕೇಸ್‌ಗಳಿಗಾಗಿ ಕೋರ್ಟ್‌ಗಳಿಗೆ ಅಲಿಯುತ್ತಿದ್ದಾರೆ, ಇಷ್ಟಾದರೂ ಹನಿ ನೀರು ಮಾತ್ರ ಬಂದಿಲ್ಲ. ಕೃಷಿಗೆ ವರವಾದ ಮಲಪ್ರಭಾ ನದಿ ಹಾಗೂ ನೀರಾವರಿ ಆದ್ಯತೆಯೊಂದಿಗೆ ನಿರ್ಮಾಣಗೊಂಡ ಮಲಪ್ರಭಾ ಜಲಾಶಯ ನೀರು ಸಂರಕ್ಷಣೆ, ಕೃಷಿ ಬಳಕೆಗೆ ಒತ್ತು ನೀಡುವ ಆಂದೋಲನಕ್ಕೆ ಮುಂದಾಗೋಣ ಎಂಬುದು ರೈತರು ನಿರ್ಧಾರವಾಗಿದೆ.

ರೂಪ ಪಡೆಯುತ್ತಿದೆ ಆಂದೋಲನ: ಮಲಪ್ರಭಾ ಜಲಾಶಯದ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಸಂಗ್ರಹಿಸಲು, ಬಳಸಲು ನಮ್ಮ ವಿರೋಧವಿಲ್ಲ. ಆದರೆ ಕುಡಿಯುವ ನೀರಿನ ನೆಪದೊಂದಿಗೆ ಅಗತ್ಯಕ್ಕಿಂತ ಹೆಚ್ಚಿನ ನೀರು ಸಂಗ್ರಹ ಹಾಗೂ ನೀರಾವರಿಗೆ ಇಲ್ಲವಾಗಿಸಿ ಉದ್ಯಮಗಳಿಗೆ ನೀರು ನೀಡುವುದಕ್ಕೆ ನಮ್ಮ ವಿರೋಧವಿದೆ. ಮಲಪ್ರಭಾ ಬಚಾವೋ ಆಂದೋಲನ ಈ ವಿಚಾರವನ್ನೇ ಪ್ರಮುಖವಾಗಿಟ್ಟುಕೊಂಡು ಹೋರಾಟಕ್ಕೆ ಮುಂದಾಗುವ ಎಂಬ ಅನಿಸಿಕೆ ರೈತರದ್ದಾಗಿದೆ.

ಮಲಪ್ರಭಾ ಜಲಾಶಯ ವ್ಯಾಪ್ತಿಯಲ್ಲಿಯೇ ನಾಲ್ಕು ಜಿಲ್ಲೆಗಳ ರೈತರು ನೀರಾವರಿ ಶುಲ್ಕ ಭರಿಸುತ್ತಿದ್ದಾರೆ. ಆದರೆ ಕುಡಿಯುವ ನೀರು ನೆಪದಲ್ಲಿ 14-15 ಟಿಎಂಸಿ ಅಡಿಯಷ್ಟು ನೀರು ಸಂಗ್ರಹಿಸಿ ನೀರಾವರಿಗೆ ನೀರಿಲ್ಲವೆನ್ನುವುದನ್ನು ರೈತರು ಒಪ್ಪಲು ಸಾಧ್ಯವಿಲ್ಲ. ಮಲಪ್ರಭಾ ಜಲಾಶಯ ಸಂಪೂರ್ಣ ಕುಡಿಯುವ ನೀರಿನ ಉದ್ದೇಶವೆಂದು ಘೋಷಣೆ ಮಾಡಿ ಅದರ ವ್ಯಾಪ್ತಿಯ ಎಲ್ಲ ಕೃಷಿ ಭೂಮಿಯನ್ನು ನೀರಾವರಿ ರಹಿತ ಪ್ರದೇಶವೆಂದು ಘೋಷಿಸಲಿ, ಇಲ್ಲವೆ ನಮಗೆ ಸಮರ್ಪಕ ನೀರು ಕೊಡಲಿ ಎಂಬ ಹಕ್ಕೊತ್ತಾಯ ರೈತರದ್ದಾಗಿದೆ.

ಮಹದಾಯಿ, ಕಳಸಾ-ಬಂಡೂರಿ ಹೋರಾಟ ಬದಲು ಮಲಪ್ರಭಾ ಬಚಾವೋ ಆಂದೋಲನ ಗಂಭೀರ ಚಿಂತನೆ ನಿಜ. ಮಹದಾಯಿ, ಕಳಸಾ-ಬಂಡೂರಿ ನಾಲಾ ಯೋಜನೆಗೆ ಎಷ್ಟೇ ಹೋರಾಟ ಮಾಡಿದರೂ ರಾಜಕೀಯ ಇಚ್ಚಾಶಕ್ತಿ ಕೊರತೆಯಿಂದ ಹನಿ ನೀರು ದೊರೆಯದಾಗಿದ್ದು, ಆ ಹೋರಾಟಕ್ಕಾಗಿ ನಮ್ಮ ಶ್ರಮ ವ್ಯಯ-ವ್ಯರ್ಥದ ಬದಲು ಮಲಪ್ರಭಾ ಬಚಾವೋಕ್ಕೆ ಮುಂದಾಗುವುದು ಸೂಕ್ತ ಎಂಬ ನಿರ್ಧಾರಕ್ಕೆ ಬಂದಿದ್ದೇವೆ. ಕಾನೂನಾತ್ಮಕ ಹೋರಾಟಕ್ಕೂ ಮುಂದಾಗಿದ್ದೇವೆ.
*ಶಂಕರಪ್ಪ ಅಂಬಲಿ, ರೈತ ಮುಖಂಡ.

*ಅಮರೇಗೌಡ ಗೋನವಾರ

ಟಾಪ್ ನ್ಯೂಸ್

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

state-news

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

9

Udupi: ವಾಹನ ದಟ್ಟಣೆ ನಿಯಂತ್ರಣ ಕ್ರಮ ಎಷ್ಟು ಫ‌ಲಪ್ರದ?

Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ

Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ

8

Udupi: ವಾರಾಹಿ ನೀರು ನಗರಕ್ಕೆ ಇನ್ನೂ ಬಂದಿಲ್ಲ, ಅಗೆಯುವುದೂ ನಿಂತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.