SC: ಕಾಂಗ್ರೆಸ್ ಸರಕಾರದಿಂದ 34 ಸಾವಿರ ಕೋ. ರೂ. ಮೀಸಲು: ಸಿದ್ದರಾಮಯ್ಯ
ವಾಲ್ಮೀಕಿ ಜಯಂತಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿಎಂ
Team Udayavani, Oct 28, 2023, 11:26 PM IST
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಮೀಸಲಿಟ್ಟು ಖರ್ಚು ಮಾಡಲು ನಾವು ಕಾನೂನು ಮಾಡಿದರೂ ಹಿಂದಿನ ಸರಕಾರ ಸಮರ್ಪಕವಾಗಿ ಪಾಲಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ನಮ್ಮ ಸರಕಾರ ಕಾಯ್ದೆ ಜಾರಿಗೊಳಿಸುವ ಮೂಲಕ ಈ ಸಮುದಾಯಗಳ ಅಭಿವೃದ್ಧಿಗೆ 6 ಸಾವಿರ ಕೋಟಿ ರೂ. ಖರ್ಚಾಗುತ್ತಿತ್ತು. 2013ರಲ್ಲಿ ಎಸ್‌ಸಿಪಿ-ಟಿಎಸ್‌ಪಿ ಕಾಯ್ದೆ ಜಾರಿಗೊಳಿಸಿದ್ದರ ಪರಿಣಾಮ 30 ಸಾವಿರ ರೂ.ವರೆಗೆ ಖರ್ಚು ಮಾಡಲು ಅನುವು ಮಾಡಿಕೊಡಲಾಗಿತ್ತು. ನಾವು ಅಧಿಕಾರದಲ್ಲಿದ್ದ 5 ವರ್ಷದಲ್ಲಿ 88 ಸಾವಿರ ಕೋ. ರೂ.ಗ ಖರ್ಚು ಮಾಡಿತ್ತು. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರದಿಂದ ಹಿಡಿದು ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಸಿಎಂ ಇದ್ದಾಗ ಕೇವಲ 24 ಸಾವಿರ ಕೋಟಿ ರೂ. ಖರ್ಚು ಮಾಡಿದ್ದು, ಈ ಸಮುದಾಯಗಳ ಅಭಿವೃದ್ಧಿಯಲ್ಲಿ ಹಿನ್ನಡೆಯಾಗುವಂತೆ ಮಾಡಿದ್ದರು. ನಾವೀಗ ಬಜೆಟ್‌ನಲ್ಲಿ 34 ಸಾವಿರ ಕೋಟಿ ರೂ.ಗಳ ಅನುದಾನ ತೆಗೆದಿರಿಸಿದ್ದೇವೆ ಎಂದರು.
ಪ್ರಶಸ್ತಿ ಪ್ರದಾನ
ಹೈಕೋರ್ಟ್ ನಿವೃತ್ತ ನ್ಯಾ| ಎನ್.ವೈ. ಹನುಮಂತಪ್ಪ (ನ್ಯಾಯಾಂಗ), ಮಹಾದೇವಮ್ಮ (ಧಾರ್ಮಿಕ), ರಾಮಣ್ಣ ಮಹಾದೇವ ಗಸ್ತಿ (ಶಿಕ್ಷಣ), ಜಿ.ಒ. ಮಹಾಂತಪ್ಪ (ಸಮಾಜ ಸೇವೆ), ಸೋಮಣ್ಣ (ಸಾಮಾಜಿಕ ಸಂಘಟನೆ), ಶಾರದಾ ಪ್ರಭು ಹುಲಿನಾಯಕ (ವೈದ್ಯಕೀಯ), ಸುಕನ್ಯಾ ಮಾರುತಿ (ಸಾಹಿತ್ಯ), ಸುಜಾತಮ್ಮ (ರಂಗಭೂಮಿ) ಅವರಿಗೆ ತಲಾ 5 ಲಕ್ಷ ರೂ. ಹಾಗೂ 20 ಚಿನ್ನದ ಪದಕ ಮತ್ತು ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ರಾಜನಹಳ್ಳಿ ಮಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಸಚಿವ ರಾದ ಡಾ| ಎಚ್.ಸಿ. ಮಹದೇವಪ್ಪ, ಕೆ.ಎನ್. ರಾಜಣ್ಣ, ಸತೀಶ್ ಜಾರಕಿ ಹೊಳಿ, ಸಿಎಂ ರಾಜಕೀಯ ಕಾರ್ಯ ದರ್ಶಿ ಗೋವಿಂದರಾಜು, ಮಾಜಿ ಸಚಿವ ಎಚ್. ಆಂಜನೇಯ, ಮಾಜಿ ಸಂಸದ ಎನ್.ಚಂದ್ರಪ್ಪ, ಶಾಸಕ ನರೇಂದ್ರಸ್ವಾಮಿ, ಉಗ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.
ಎಸ್‌ಟಿ ಸಚಿವಾಲಯ
ಬ್ಯಾಂಕ್ವೆಟ್ ಸಭಾಂಗಣದ ಕಾರ್ಯಕ್ರಮಕ್ಕೂ ಮುನ್ನ ಶಾಸಕರ ಭವನದ ಬಳಿಯಿರುವ ವಾಲ್ಮೀಕಿ ಪ್ರತಿಮೆಗೆ ಗಣ್ಯರು ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸಿದರು. ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಬಳಿಕ ವಿಕಾಸಸೌಧದಲ್ಲಿ ಪರಿಶಿಷ್ಟ ಪಂಗಡಗಳ ಸಚಿವಾಲಯವನ್ನು ಉದ್ಘಾಟಿಸಲಾಯಿತು.
ಪ್ರತ್ಯೇಕ ಸಚಿವಾಲಯಕ್ಕೆ ಸಿಎಂ ಸ್ಪಂದನೆ: ನಾಗೇಂದ್ರ
ನಮ್ಮ ಸಮಾಜದ ಶ್ರೇಯೋಭಿ ವೃದ್ಧಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕೆಂಬ ಸಮುದಾಯದ ಬೇಡಿಕೆಗೆ ಸಿಎಂ ಸ್ಪಂದಿಸಿದ್ದಾರೆ. ಸರಕಾರಕ್ಕೆ ಸಮುದಾಯದ 70 ಲಕ್ಷ ಜನರು ಹಾಗೂ 14 ಶಾಸಕರು ಅಭಿನಂದನೆ ಸಲ್ಲಿಸುತ್ತೇವೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.