Mangalore: ಆಸ್ಪತ್ರೆಯಿಂದ ಸ್ಕ್ಯಾನಿಂಗ್ ಯಂತ್ರ ವಶಕ್ಕೆ
Team Udayavani, Dec 28, 2023, 11:47 PM IST
ಮಂಗಳೂರು: ನಿಯಮಾನುಸಾರ ನೋಂದಣಿ ಮಾಡದೆ ಖಾಸಗಿ ಆಸ್ಪತ್ರೆಯಲ್ಲಿ ಬಳಕೆ ಮಾಡುತ್ತಿದ್ದ ಸ್ಕ್ಯಾನಿಂಗ್ ಯಂತ್ರವನ್ನು ಆರೋಗ್ಯ ಇಲಾಖೆ ವಶಪಡಿಸಿಕೊಂಡಿದೆ.
ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ತಪಾಸಣೆ ನಡೆಸಿದ ವೇಳೆ ನೋಂದಣಿ ಮಾಡದೆ ಬಳಕೆ ಮಾಡುತ್ತಿದ್ದ ಸ್ಕ್ಯಾನಿಂಗ್ ಯಂತ್ರ ಕಂಡುಬಂದಿದೆ. ಸ್ಕ್ಯಾನಿಂಗ್ ಯಂತ್ರವನ್ನು ಬಳಸಲು ನಿಯಮಾನುಸಾರ ಆರೋಗ್ಯ ಇಲಾಖೆಯಲ್ಲಿ ನೊಂದಣಿ ಮಾಡದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಸ್ಕ್ಯಾನಿಂಗ್ ಯಂತ್ರವನ್ನು ವಶಪಡಿಸಿಕೊಂಡು ಜಪ್ತಿ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ| ದೀಪಾ ಪ್ರಭು ಮತ್ತಿತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಮುಂದಿನ ದಿನಗಳಲ್ಲಿ ಅಕ್ರಮವಾಗಿ ಸ್ಕ್ಯಾನಿಂಗ್ ಯಂತ್ರ ಬಳಕೆ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸುವುದಾಗಿ ಜಿಲ್ಲಾ ಆರೋಗ್ಯ ಅಧಿಕಾರಿ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Mangalore: ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ವಿವಿಯಲ್ಲಿ ಎಬಿವಿಪಿ ಪ್ರತಿಭಟನೆ
Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್ ಅರ್ಜಿ ತಿರಸ್ಕೃತ
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.