ಪರಿಶಿಷ್ಟ ಎಡಗೈ ಗಡುವು- ನ್ಯಾ| ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಹೆಚ್ಚಿದ ಒತ್ತಡ
Team Udayavani, Nov 6, 2023, 10:48 PM IST
ಬೆಂಗಳೂರು: ಕಾಂತರಾಜ ಆಯೋಗದ ವರದಿ ಜಾರಿ ವಿಚಾರದಲ್ಲಿ ಪರ ಮತ್ತು ವಿರೋಧದ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಈಗ ನ್ಯಾ| ಸದಾಶಿವ ಆಯೋಗದ ವರದಿ ಜಾರಿಯಾಗಬೇಕೆಂಬ ಕೂಗು ಎದ್ದಿದೆ.
ಮುಂದಿನ ತಿಂಗಳು ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲೇ ರಾಜ್ಯ ಸರಕಾರ ಸದಾಶಿವ ಆಯೋಗದ ವರದಿ ಮಂಡಿಸಿ ಜಾರಿಗೊಳಿಸಬೇಕು. ಇಲ್ಲದೆ ಇದ್ದಲ್ಲಿ ಬೀದಿಗೆ ಇಳಿದು ಹೋರಾಟ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರಕ್ಕೆ ಗಡುವು ನೀಡಲಾಗಿದೆ.
ಸಿದ್ದರಾಮಯ್ಯ ಸಂಪುಟದಲ್ಲಿ ಹಿರಿಯ ಸಚಿವರೂ ಆಗಿರುವ ಹಾಗೂ ಪರಿಶಿಷ್ಟ ಎಡಗೈ ಗುಂಪಿಗೆ ಸೇರಿದ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ನೇತೃತ್ವದಲ್ಲೇ ಕರ್ನಾಟಕ ಆದಿಜಾಂಬವರ ಸಾಂಸ್ಕೃತಿಕ ಸಮಿತಿ ಸಭೆ ಸೇರಿ ಈ ಎಚ್ಚರಿಕೆ ಸಂದೇಶ ರವಾನಿಸಿದೆ. ಸಭೆಯಲ್ಲಿ ಪಾಲ್ಗೊಂಡಿದ್ದ ಆದಿ ಜಾಂಬವ ಸಮುದಾಯದ ಕಾಂಗ್ರೆಸ್ ಶಾಸಕರು ಮತ್ತು ಪರಿಷತ್ತಿನ ಸದಸ್ಯರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರೂ ಎಚ್ಚರಿಕೆ ನೀಡಿರುವುದು ಸರಕಾರಕ್ಕೆ ಬಿಸಿತಪ್ಪವಾಗಿ ಪರಿಣಮಿಸುವ ಸಾಧ್ಯತೆಯಿದೆ.
ಸೋಮವಾರ ಬೆಂಗಳೂರಿನ ರಾಜ್ಯ ಮಾದಿಗ ಸಮುದಾಯದ ರಾಜಕೀಯ ಮುಖಂಡರ ಸಭೆ ನಡೆಯಿತು. ಸದಾಶಿವ ಆಯೋಗದ ವರದಿ ಜಾರಿಗೆ ಸರಕಾರದ ಮೇಲೆ ಒತ್ತಡ ಹೇರುವ ಸಂಬಂಧ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಹೋರಾಟ ತೀವ್ರಗೊಳಿಸಬೇಕು ಎಂದು ಹಿರಿಯ ಸಚಿವ ಕೆ.ಎಚ್. ಮುನಿಯಪ್ಪ ಸಲಹೆ ನೀಡಿದ್ದಾರೆ. ಈ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮತ್ತು ಆಯಾ ಕ್ಷೇತ್ರದ ಶಾಸಕರಿಗೂ ಬಿಸಿ ಮುಟ್ಟಿಸಬೇಕು. ಪ್ರತಿಭಟನೆ, ಧರಣಿ ಮತ್ತು ಹೋರಾಟಗಳ ಸಂಬಂಧ ಮುಂದಿನ 15 ದಿನಗಳಲ್ಲಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ವರದಿ ಸರಕಾರದ ಕೈ ಸೇರಬೇಕು. ಆ ಮಟ್ಟದಲ್ಲಿ ನಮ್ಮ ಹೋರಾಟ ಇರಬೇಕು ಎಂದು ಇಡೀ ಮಾದಿಗ ಸಮುದಾಯಕ್ಕೆ ಕರೆ ನೀಡುವ ಮೂಲಕ ಸರಕಾರದ ವಿರುದ್ಧವೇ ಸಚಿವರು ಹೋರಾಟಕ್ಕೆ ಕರೆ ನೀಡಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.