ನ್ಯೂಯಾರ್ಕ್: ಸದ್ಯಕ್ಕೆ ಶಾಲೆ, ಕಾಲೇಜು ತೆರೆಯುವುದಿಲ್ಲ
Team Udayavani, May 4, 2020, 5:14 PM IST
ನ್ಯೂಯಾರ್ಕ್: ಕೋವಿಡ್-19ನಿಂದ ಕಂಗೆಟ್ಟಿರುವ ವಿಶ್ವದ ದೊಡ್ಡಣ್ಣ ಅಮೆರಿಕದ ರಾಜ್ಯಗಳು ಜೀವ ಕೈಯಲ್ಲಿಟ್ಟುಕೊಂಡು ಹೋರಾಡುತ್ತಿವೆ. ರಾಷ್ಟ್ರದಲ್ಲಿಯೇ ಅತಿ ಹೆಚ್ಚು ಸೋಂಕು ಪ್ರಕರಣಗಳನ್ನು ಹೊಂದಿರುವ ನ್ಯೂಯಾರ್ಕ್ ಕೂಡಾ ಸೋಂಕು ಹರಡದಂತೆ ತಡೆಯಲು ಪ್ರತಿನಿತ್ಯ ಒಂದಲ್ಲ ಒಂದು ನಿಯಮ ಜಾರಿ ಮಾಡುತ್ತಲೇ ಇದೆ. ಇದೀಗ ಈ ರಾಜ್ಯದಿಂದ ಮತ್ತೂಂದು ವಿಷಯ ಹೊರಬಿದ್ದಿದ್ದು, ರಾಜ್ಯದಲ್ಲಿ ಶೈಕ್ಷಣಿಕ ವರ್ಷದ ಉಳಿದ ದಿನಗಳಲ್ಲೂ ಶಾಲೆಗಳನ್ನು ಮುಚ್ಚಲು ಸ್ಥಳೀಯ ಸರಕಾರ ನಿರ್ಧರಿಸಿದೆ ಎಂದು ಗವರ್ನರ್ ಆಂಡ್ರ್ಯೂ ಕ್ಯುಮೊ ಅಧಿಕೃತ ಘೋಷಣೆ ಮಾಡಿದ್ದಾರೆ.
ಸುಮಾರು 4.2 ದಶಲಕ್ಷ ವಿದ್ಯಾರ್ಥಿಗಳನ್ನು ಒಳಗೊಂಡಿರುವ ರಾಜ್ಯ ಸೋಂಕು ನಿಯಂತ್ರಣಕ್ಕಾಗಿ ಶಾಲೆ-ಕಾಲೇಜುಗಳಿಗೆ ಮಾ.18 ರಿಂದ ಅನಿರ್ದಿಷ್ಟಾವಧಿ ರಜೆ ಘೋಷಿಸಿತ್ತು. ಇದೀಗ ಸದ್ಯದ ಪರಿಸ್ಥಿತಿಯಲ್ಲಿ ಶಾಲೆಗಳನ್ನು ತೆರೆಯುವುದು ಸುರಕ್ಷಿತವಲ್ಲ ಎಂಬ ಅಭಿಪ್ರಾಯವನ್ನು ಹೊರಹಾಕಿರುವ ಸರಕಾರ, ಶೈಕ್ಷಣಿಕ ವರ್ಷವಿಡೀ ಶಾಲಾ-ಕಾಲೇಜುಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಜತೆಗೆ ಮಾಸ್ಕ್ ಧರಿಸಿ ಶಾಲೆಗೆ ಬರುವ ಅನಿವಾರ್ಯತೆ ಇದೆ. ಸಾಮೂಹಿಕ ಪ್ರಾರ್ಥನೆ, ಆಟ-ಪಾಠಕ್ಕೆ ಅವಕಾಶವಿಲ್ಲದ ವಾತಾವರಣ ಇದೆ. ಕಡಿಮೆ ಸಂಖ್ಯೆಯ ವಿದ್ಯಾರ್ಥಿಗಳೊಂದಿಗೆ ಸಾರ್ವಜನಿಕ ಸಾರಿಗೆ ಕಾರ್ಯಾಚರಿಸಬೇಕಿದೆ. ಹೀಗಿರುವಾಗ ಉಳಿದಿರುವ ಶೈಕ್ಷಣಿಕ ವರ್ಷದ ಅವಧಿಯಲ್ಲಿ ಆಟ, ಪಾಠಗಳನ್ನು ಹೇಗೆ ತಾನೆ ವ್ಯವಸ್ಥೆಗೊಳಿಸಲು ಸಾಧ್ಯ ಎಂಬ ಪ್ರಶ್ನೆ ಎದುರಾಗಿದೆ. ಈ ನಿಟ್ಟಿನಲ್ಲಿ ಮೇ ಕೊನೆಯ ವಾರದಲ್ಲಿ ಬೇಸಗೆೆ ರಜಾವಧಿಯ ಕಾರ್ಯಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
MUST WATCH
ಹೊಸ ಸೇರ್ಪಡೆ
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.