2 ವರ್ಷದ ಬಳಿಕ ಶಾಲಾ-ಕಾಲೇಜು ಆರಂಭ

ಶಾಲೆ ಆರಂಭಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳ ಸಿದ್ಧತೆ: ಆ.23ರಿಂದ ತರಗತಿಗಳ ಆರಂಭಕ್ಕೆ ಕ್ರಮ

Team Udayavani, Aug 22, 2021, 3:34 PM IST

2 ವರ್ಷದ ಬಳಿಕ ಶಾಲಾ-ಕಾಲೇಜು ಆರಂಭ

ದೇವನಹಳ್ಳಿ: ಕೋವಿಡ್‌ ಭೀತಿಗೆ ಶಾಲೆ ಬಂದ್‌ ಮಾಡಿ ಆನ್‌ಲೈನ್‌ ಶಿಕ್ಷಣ ನಡೆಸಲಾಗುತ್ತಿತ್ತು. ಇದೀಗ 3ನೇ ಅಲೆ ಮುಂಜಾಗ್ರತೆಯೊಂದಿಗೆ ಜಿಲ್ಲೆಯಾದ್ಯಂತ ಪ್ರೌಢಶಾಲೆ, ಪಿಯು ಕಾಲೇಜುಗಳು ಆ.23ರಿಂದ ಪ್ರಾರಂಭವಾಗುತ್ತಿದ್ದು ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಕಾಲೇಜು ಇಲಾಖೆ ಸಿದ್ಧತೆ ಮಾಡಿಕೊಂಡಿದೆ.

ಕೋವಿಡ್‌ ಮೊದಲ ಅಲೆ ಪ್ರಾರಂಭಗೊಂಡಾಗ ಶಾಲಾಕಾಲೇಜು ಮುಚ್ಚಲಾಗಿತ್ತು.ಜಿಲ್ಲೆಯಲ್ಲಿ ಶಾಲೆಗಳು ಬಂದ್‌ ಆಗಿದ್ದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಶಿಕ್ಷಣ ತಲೆನೋವಾಗಿ ಪರಿಣಮಿಸಿತ್ತು. ಸೋಮವಾರದಿಂದ ಶಾಲೆಗಳು ಆರಂಭವಾಗುತ್ತಿದ್ದು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಕೋವಿಡ್‌ ಮಾರ್ಗಸೂಚಿ ಅನ್ವಯ ಶಾಲಾ ಕಾಲೇಜುಗಳಿಗೆ ಸ್ಯಾನಿ ಟೈಸ್‌ ಮಾಡಿದ್ದು, ಎಲ್ಲ ಕೊಠಡಿಗಳನ್ನು ಸ್ವಚ್ಛ  ಗೊಳಿಸಲಾಗಿದೆ. ಜಿಲ್ಲೆಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಕೋವಿಡ್‌ ಆರ್ಭಟ ಇಳಿದ ಬಳಿಕ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾ ಗಿದ್ದಾರೆ. ದಾಖಲಾತಿಗೆ ಅನುಗುಣವಾಗಿ ಶಿಕ್ಷಕರ ವ್ಯವಸ್ಥೆ ಮಾಡುವುದು ಅತ್ಯವಶ್ಯಕವಾಗಿದೆ. ಆದರೇ ಶಿಕ್ಷಕರಕೊರತೆಯಿದೆ. ಜೊತೆಗೆ ಗ್ರೂಪ್‌ ಡಿ-ನೌಕರರು ಕೆಲ ಶಾಲೆಗಳಲ್ಲಿ ಇಲ್ಲದೆ ಶಾಲೆ ಸ್ವಚ್ಛತೆ ಸಮಸ್ಯೆಎದುರಾಗಿದೆ.

ಇದನ್ನೂ ಓದಿ:ಚುನಾವಣಾ ಪ್ರಚಾರಕ್ಕೆ ಫೇಸ್ ಮಾಸ್ಕ್ ಧರಿಸುವುದು ಕಡ್ಡಾಯ: ಡಿಸಿ ಆದೇಶ

ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯ, ಕೊಠಡಿ, ಪ್ರಯೋಗಾಲಯ, ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಇಲಾಖೆ ಅಧಿಕಾರಿಗಳುಸೂಚಿಸಿದ್ದಾರೆ. ಜಿಲ್ಲೆಯಲ್ಲಿ 76 ಪಿಯು ಕಾಲೇಜುಗಳು, 256 ಪ್ರೌಢಶಾಲೆಗಳಲ್ಲಿ ಮುನ್ನೆಚರಿಕೆ ‌c ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರುಗಳಿಗೆ ಲಸಿಕೆ ಕಡ್ಡಾಯ ಮಾಡಲಾಗಿದೆ. ಪಠ್ಯೇತರ ಸಿಬ್ಬಂದಿಗಳಿಗೂ ಸಹ ಲಸಿಕೆ ವ್ಯವಸ್ಥೆ ಮಾಡಲಾಗಿದೆ.ಪ್ರೌಢ ಶಾಲೆಗಳಲ್ಲಿ ಅರ್ಧದಿನಕ್ಕೆ ಮಾತ್ರ ತರಗತಿ ನಡೆಯಲಿದೆ. 9 ಮತ್ತು 10ನೇ ತರಗತಿಗಳು ಕಾರ್ಯಾರಂಭಗೊಳ್ಳಲಿವೆ. ಉಳಿದಂತೆ 8ನೇ ತರಗತಿ ಗಳಿಗೆ ಆನ್‌ಲೈನ್‌ ತರಗತಿ ಮುಂದುವರೆಯಲಿವೆ. ಜಿಲ್ಲೆಯಲ್ಲಿ 8ನೇ ತರಗತಿಗೆ ನೇರ ತರಗತಿ ಪ್ರಾರಂಭಗೊಳ್ಳದ ಹಿನ್ನೆಲೆ ಹೆಚ್ಚಿನ ತರಗತಿ ಲಭ್ಯವಿದೆ. ಈ ಹಿನ್ನೆಲೆ ಪ್ರತಿ ತರಗತಿಗೆ 15-20 ಮಂದಿಯನ್ನುಕೂರಿಸಲು ಸೂಚಿಸಲಾಗಿದೆ. ಸೋಂಕಿತರು ಕಂಡು ಬಂದರೆ ಆಯಾ ಶಾಲೆಗೆ ರಜೆ ಘೋಷಿಸಲಾಗುತ್ತದೆ. ಪಿಯುಸಿ ಮಟ್ಟದಲ್ಲಿ ಕೋವಿಡ್‌ ಸೋಂಕಿತರು ಕಂಡು ಬಂದರೆ ಅವರನ್ನು ಕೋವಿಡ್‌ ಕೇರ್‌ ಸೆಂಟರ್‌ಗೆ ಕಳುಹಿಸಿ ಕೊಡಬೇಕು. ಪ್ರತಿ ವಿದ್ಯಾರ್ಥಿಗಳು ನೆಗೆಟೀವ್‌ ವರದಿ ತರಬೇಕು. ಜಿಲ್ಲೆಯಾ ದ್ಯಂತ ಕೋವಿಡ್‌ ಇಳಿಮುಖವಾಗಿದೆ. ತಾಲೂಕಿನಲ್ಲೂ ಒಂದಂಕಿ ಗಳಿರುವ ಕೋವಿಡ್‌ ಪಾಸಿಟಿವಿಟಿ ದರ ಶೇ.1 ಕ್ಕಿಂತ ಕಡಿಮೆ ಇದೆ. ಆದ್ದರಿಂದ ಶಾಲೆ ಪ್ರಾರಂಭಕ್ಕೆ ಅನುಮತಿ ನೀಡಲಾಗಿದೆ.

ಪಿಯು ದಾಖಲಾತಿ ಪ್ರಗತಿ
9ನೇ ತರಗತಿ ಮತ್ತು10ನೇ ತರಗತಿಗಳಿಗೆ 30,636 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. 9ನೇ ತರಗತಿಗೆ 15,499 ವಿದ್ಯಾರ್ಥಿ ಗಳು ನೋಂದಣೆಯಾಗಿದೆ. ಎಸ್ಸೆಸ್ಸೆಲ್ಸಿಗೆ 15,464 ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ. ಇನ್ನು ಪ್ರಥಮ ಪಿಯುಸಿಗೆ ದಾಖಲಾತಿ ಪ್ರಗತಿ ಯಲ್ಲಿದ್ದು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪಾಳಿ ಮಾದರಿಯಲ್ಲಿ ತರಗತಿ ನಡೆಸಲು ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆ ಸಕಲ ರೀತಿಯ ಸಿದ್ಧತೆಕೈಗೊಂಡಿದೆ.

ಮಕ್ಕಳಿಗೆ ಬಸ್‌ ಸಮಸ್ಯೆ
ಗ್ರಾಮೀಣ ಭಾಗದ ಅನೇಕ ವಿದ್ಯಾರ್ಥಿಗಳು ಶಿಕ್ಷಣಕ್ಕೆ ನಗರವನ್ನು ಅವಲಂಬಿಸಿದ್ದಾರೆ.ಕೋವಿಡ್‌ ಹಿನ್ನೆಲೆ ಗ್ರಾಮೀಣ ಭಾಗದಲ್ಲಿ ಸ್ಥಗಿತಗೊಂಡಿದ್ದ ಬಸ್‌ ಸೇವೆ ಪ್ರಾರಂಭವಾಗಿಲ್ಲ. ಪದವಿಪೂರ್ವ ತರಗತಿಗಳು ಈಗಾಗಲೇ ಪ್ರಾರಂಭವಾಗಿದ್ದು ಸರ್ಕಾರಿ ಬಸ್‌ಗಳಲ್ಲಿ ಪಾಸ್‌ ಪಡೆದು ಓಡಾಡುತ್ತಿದ್ದ
ವಿದ್ಯಾರ್ಥಿಗಳಿಗೆ ಬಸ್‌ ಸಮಸ್ಯೆ ಎದುರಾಗಿದೆ.9 ರಿಂದ12ನೇ ತರಗತಿಗಳು ಪ್ರಾರಂಭವಾಗಲಿದ್ದು, ಗ್ರಾಂ.ಸಾರಿಗೆ ಸೌಲಭ್ಯಕ್ಕಾಗಿ ಸ್ಥಳೀಯರು
ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೋವಿಡ್‌ 2ನೇ ಅಲೆ ಬಳಿಕ ಆ.23ರಿಂದ ಆರಂಭವಾಗುತ್ತಿರುವ ಶಾಲಾ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಕೋವಿಡ್‌ ಲಸಿಕೆ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲಾಗುತ್ತಿದೆ.
– ಎಂಟಿಬಿ ನಾಗರಾಜ್‌,
ಜಿಲ್ಲಾ ಉಸ್ತುವಾರಿ ಸಚಿವ

ಜಿಲ್ಲೆಯ ಎಲ್ಲಾ ಶಾಲೆಗಳ ತರಗತಿಗಳಿಗೆ ಸ್ಯಾನಿಟೈಸ್‌ ಮಾಡಲಾಗಿದೆ. ವಿದ್ಯಾರ್ಥಿಗಳು ಯಾವುದೇ ಭಯ, ಆತಂಕವಿಲ್ಲದೆ ತರಗತಿಗಳಿಗೆ ಹಾಜರಾಗಬೇಕು. ಶಾಲೆಯಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.
– ಗಂಗಮಾರೇಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆ
ಜಿಲ್ಲಾ ಉಪನಿರ್ದೇಶಕ

ಈಗಾಗಲೇ ಶಿಕ್ಷಣ ಇಲಾಖೆ ಮುಖಾಂತರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಕೋವಿಡ್‌ ನಿಯಮ ಪಾಲಿಸಿಕೊಂಡು,
ಮುಂಜಾಗ್ರತಾ ಕ್ರಮಕೈಗೊಂಡು ಶಾಲಾ-ಕಾಲೇಜುಗಳನ್ನುಆರಂಭಿಸಲಾಗಿದೆ.
– ಕೆ. ಶ್ರೀನಿವಾಸ್‌, ಜಿಲ್ಲಾಧಿಕಾರಿ

ಆ.23ರಿಂದ ಕಾಲೇಜುಗಳು ಪ್ರಾರಂಭವಾಗುತ್ತಿದ್ದು, ಎಲ್ಲಾ ಕೊಠಡಿಗಳಿಗೆ ಸ್ಯಾನಿಟೈಸ್‌ ಮಾಡಿಸಲಾಗಿದೆ.ಕೋವಿಡ್‌  ಮಾರಿ, ಮುನ್ನೆಚ್ಚರಿಕೆಕ್ರಮ ಹೇಗೆ ಕೈಗೊಳ್ಳಬೇಕು ಎಂಬುವುದರ ಬಗ್ಗೆ ಅರಿವು ಮೂಡಿಸಬೇಕು.
-ಬಾಲಾಜಿ,ಉಪನಿರ್ದೇಶಕರು,
ಪಿಯು ಇಲಾಖೆ

ಕೋವಿಡ್‌ ಸಾಂಕ್ರಾಮಿಕ ರೋಗದಿಂದ ಕಳೆದ 2 ವರ್ಷಗಳಿಂದ ಮಕ್ಕಳು ಮನೆಯಲ್ಲಿಯೇ ಇದ್ದು ಮಂಕಾಗಿದ್ದಾರೆ. ಶಿಕ್ಷಣದೊಂದಿಗೆ ಪಠ್ಯೇತರ ವಿಷಯಗಳ ಕಲಿಕೆ, ತರಗತಿಗಳ ಪ್ರಾರಂಭ ಸಹಕಾರಿಯಾಗಲಿದೆ.
-ಶ್ರೀನಿವಾಸ್‌, ಪೋಷಕರ

ಕೋವಿಡ್‌ ಬಂದನಂತರ ಆನ್‌ಲೈನ್‌ ಶಿಕ್ಷಣದಲ್ಲಿ ಸರಿಯಾಗಿ ಕಲಿಯಲುಕಷ್ಟವಾಗುತ್ತಿತ್ತು. ಈಗ ಶಾಲೆ ಆರಂಭವಾಗುತ್ತಿರುವುದು ಸಂತಸ ತಂದಿದೆ.
– ವಿನಯ್‌, ಕಾರ್ಮಲ್‌ ಆಂಗ್ಲ ಶಾಲೆಯ 9ನೇ ತರಗತಿ ವಿದ್ಯಾರ್ಥಿ

– ಎಸ್‌.ಮಹೇಶ್‌

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.