“ಶಾಲಾ ಶುಲ್ಕ ಪಾವತಿ ಒತ್ತಡ ಹೇರಿದರೆ ಕ್ರಮ’
Team Udayavani, Jun 13, 2020, 8:15 AM IST
ಉಡುಪಿ/ ಮಂಗಳೂರು: ಸರಕಾರದ ಸುತ್ತೋಲೆಯಂತೆ ಶಾಲಾ ಫೀಸು ಪಾವತಿಸಲು ಸಾಧ್ಯವಿಲ್ಲದ ಅಥವಾ ಪಾವತಿಸಲು ನಿರಾಕರಿಸುವ ಪೋಷಕರಿಂದ ಮುಂದಿನ ಆದೇಶದ ವರೆಗೆ ಯಾವುದೇ ಕಾರಣಕ್ಕೂ ಶುಲ್ಕ ವಸೂಲು ಮಾಡುವಂತಿಲ್ಲ. ಈ ವಿಚಾರದಲ್ಲಿ ವಿದ್ಯಾರ್ಥಿ ಪೋಷಕರಿಗೆ ಶಾಲೆಗಳು ಯಾವುದೇ ರೀತಿಯ ಒತ್ತಡ ಹೇರಬಾರದು ಎಂದು ಉಡುಪಿ, ದ.ಕ. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಖಾಸಗಿ ಶಾಲೆಗಳಿಗೆ ಎಚ್ಚರಿಸಿದ್ದಾರೆ.
ಶುಲ್ಕವನ್ನು ಪಾವತಿಸದ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಹಾಕಿರುವ ಕುರಿತು ದೂರುಗಳು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಶಿಕ್ಷಣ ಹಕ್ಕು ಕಾಯಿದೆಯಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಖುದ್ದಾಗಿ ದೂರು ನೀಡಿ
ಕೆಲವು ಖಾಸಗಿ ಶಾಲೆಯವರು ಶಾಲಾ ಶುಲ್ಕವನ್ನು ವಸೂಲು ಮಾಡುತ್ತಿರುವ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಪೋಷಕರಿಂದ ದೂರವಾಣಿ ಮೂಲಕ ದೂರುಗಳು ಬರುತ್ತಿವೆ. ಶಾಲಾ ಶುಲ್ಕ ವಸೂಲಾತಿ ಕುರಿತಂತೆ ಪೋಷಕರಿಗೆ ಒತ್ತಡ ಹೇರುವಂತಿಲ್ಲ. ಮುಂದಿನ ದಿನಗಳಲ್ಲಿ ಪೋಷಕರು ಖುದ್ದಾಗಿ ಬಂದು ಶಾಲೆಯ ಹೆಸರು ಸಹಿತ ಲಿಖೀತ ದೂರು ನೀಡಿದ್ದಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಅಂತಹ ಶಾಲೆಗಳ ವಿರುದ್ಧ ಶಿಕ್ಷಣ ಹಕ್ಕು ಕಾಯಿದೆಯಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.