ಟೆಂಡರ್ ಪ್ರಕ್ರಿಯೆ ಆರಂಭ; ಜ್ಞಾನಪೀಠ ಪುರಸ್ಕೃತರು ಕಲಿತ ಶಾಲೆಗೆ ಅಭಿವೃದ್ಧಿ ಭಾಗ್ಯ
Team Udayavani, Feb 14, 2022, 6:05 AM IST
ಸಾಂದರ್ಭಿಕ ಚಿತ್ರ.
ಕೋಟ: ರಾಜ್ಯದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿಗಳು ಶಿಕ್ಷಣ ಪಡೆದ ಶಾಲೆಗಳನ್ನು ಸರ್ವತೋಮುಖವಾಗಿ ಅಭಿವೃದ್ಧಿಗೊಳಿಸುವ ಯೋಜನೆಯೊಂದನ್ನು ಸರಕಾರ ಈ ಹಿಂದೆ ಜಾರಿಗೊಳಿಸಿತ್ತು. ಆದರೆ ಇದರ ಅನುಷ್ಠಾನ ವಿಳಂಬವಾಗಿ ಹಳ್ಳಹಿಡಿಯುವ ಆತಂಕ ಎದುರಾಗಿತ್ತು. ಈಗ ಆ ಎಲ್ಲ ಶಾಲೆಗಳ ಕಾಮಗಾರಿ ಟೆಂಡರ್‌ಗೆ ಅನುಮೋದನೆ ನೀಡ ಲಾಗಿದ್ದು, ಹಲವು ಕಡೆ ಟೆಂಡರ್ ಪೂರ್ಣಗೊಂಡಿದೆ ಹಾಗೂ ಹಂತಹಂತವಾಗಿ ಕಾಮಗಾರಿ ನಡೆಯಲಿದೆ ಎಂದು ಶಿಕ್ಷಣ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.
ರಾಜ್ಯದ ಎಂಟು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿಗಳು ಶಿಕ್ಷಣ ಪಡೆದ 11 ಸರಕಾರಿ ಶಾಲೆಗಳನ್ನು 16.88 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳಿಸುವ ಯೋಜನೆಯನ್ನು ರಾಜ್ಯ ಸರಕಾರ 2021ರ ಬಜೆಟ್‌ನಲ್ಲಿ ಘೋಷಿಸಿತ್ತು. ಅನಂತರ ಇದಕ್ಕಾಗಿ ಅನುದಾನ ಮೀಸಲಿರಿಸಿ, 2021-22ನೇ ಆರ್ಥಿಕ ವರ್ಷ ಕೊನೆಗೊಳ್ಳುವುದರೊಳಗೆ ಅನುಷ್ಠಾನಗೊಳಿಸುವಂತೆ 2021 ಜು. 17ರಂದು ಮರು ಆದೇಶ ನೀಡಿತ್ತು. ಆದರೆ ಹಲವು ತಿಂಗಳು ಕಳೆದರೂ ಕಾಮಗಾರಿ ಆರಂಭವಾಗಿರಲಿಲ್ಲ. ಈ ಬಗ್ಗೆ ಉದಯವಾಣಿ 2021 ಡಿ. 26ರಂದು “ಜ್ಞಾನಪೀಠ ಪುರಸ್ಕೃತರು ಕಲಿತ ಶಾಲೆಗಳಿಗೆ ಇನ್ನೂ ಕೈಗೂಡದ ಅಭಿವೃದ್ಧಿ ಭಾಗ್ಯ’ ಎನ್ನುವ ವಿಶೇಷ ವರದಿ ಪ್ರಕಟಿಸಿತ್ತು. ಈಗ ಕಾಮಗಾರಿ ಟೆಂಡರ್ ಪ್ರಕ್ರಿಯೆ ನಡೆಯುತ್ತಿದ್ದು, ಯೋಜನೆ ಶೀಘ್ರದಲ್ಲಿ ಕೈಗೂಡಲಿದೆ.
11 ಶಾಲೆಗಳ ಪೈಕಿ ಈಗಾಗಲೇ ಹಲವು ಶಾಲೆಗಳ ಅಭಿವೃದ್ಧಿ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಮುಗಿದಿದೆ. ಬಾಕಿ ಉಳಿದವುಗಳ ಬಗ್ಗೆ ಕೆಲವೇ ದಿನದಲ್ಲಿ ಟೆಂಡರ್ ಮುಗಿಸಿ ಕಾಮಗಾರಿ ಆರಂಭಿಸಲಾಗುತ್ತದೆ. ಆಯಾಯ ಜಿ.ಪಂ. ಸಿಇಒಗೆ ಕಾಮಗಾರಿಯ ಕಾರ್ಯಾನುಷ್ಠಾನದ ಹೊಣೆಗಾರಿಕೆ ನೀಡಲಾಗಿದ್ದು, ಯಾವುದಾದರು ಶಾಲೆಯ ಕಾಮಗಾರಿಗೆ ಹಿನ್ನಡೆಯಾದಲ್ಲಿ ಸಿಇಒ ಗಮನಕ್ಕೆ ತರಬಹುದು.
-ಡಾ| ವಿಶಾಲ್ ಆರ್., ಆಯುಕ್ತರು,
ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.