ರಂಗೋಲಿಯಲ್ಲಿ ಅರಳಿತು ಹೃದಯ, ಮೆದುಳು : ಇದು ಸರಕಾರಿ ಶಾಲೆಯ ವಿಜ್ಞಾನ ದಿನಾಚರಣೆಯ ವಿಶೇಷ
Team Udayavani, Mar 9, 2022, 3:54 PM IST
ಹುಣಸೂರು : ತಾಲೂಕಿನ ನೇರಳಕುಪ್ಪೆ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ವಿಜ್ಞಾನ ವಿಷಯಗಳ ನಾನಾ ಮಾದರಿಗಳನ್ನು ರಚಿಸಿ, ಪ್ರದರ್ಶನ ಮಾಡುವ ಮೂಲಕ ವಿಜ್ಞಾನ ದಿನಾಚರಣೆ ಆಚರಿಸಿದರು.
ಶಾಲಾ ಆವರಣದಲ್ಲಿ ನಡೆದ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಲಾಮುಖ್ಯ ಶಿಕ್ಷಕ ಕುಮಾರಸ್ವಾಮಿ, ಇಂದು ಜಗತ್ತಿಗೆ ವಿಜ್ಞಾನ ಅನಿವಾರ್ಯವಾಗಿದ್ದು, ಅತೀ ವೇಗದಲ್ಲಿ ಬಲಾಢ್ಯವಾಗಿ ಬೆಳೆಯುತ್ತಿದೆ. ಪ್ರತಿಯೊಬ್ಬ ವ್ಯಕ್ತಿಯ ನಿತ್ಯದ ಜೀವನದಲ್ಲಿ ವಿಜ್ಞಾನಕ್ಕೆ ಜೋತು ಬಿದ್ದಿರುವುದರಿಂದಾಗಿ ವಿಜ್ಞಾನ ಅತೀ ವೇಗವಾಗಿ ಬೆಳೆಯುತ್ತಿದೆ ಎಂದು ತಿಳಿಸಿದರು.
ವಿಜ್ಞಾನ ಮಾದರಿಗಳ ಪ್ರದರ್ಶನ;
ಶಾಲೆಯ ವಿಜ್ಞಾನ ಶಿಕ್ಷಕಿಯರಾದ ಉಮಾಕುಮಾರಿ ಹಾಗೂ ಪ್ರೀತಿ ಯವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ರಂಗೋಲಿಯಲ್ಲಿ ಜೀವಶಾಸ್ತ್ರ, ರಸಾಯನ ಶಾಸ್ತ್ರ ಹಾಗೂ ಭೌತಶಾಸ್ತ್ರಕ್ಕೆ ಸಂಬಂಧಿಸಿದ ಚಿತ್ರಗಳನ್ನು ಶಾಲೆಯ ಕಾರಿಡಾರ್‌ನಲ್ಲಿ ಬಿಡಿಸಿ, ಅದಕ್ಕೆ ಬಣ್ಣ ತುಂಬಿ ಪ್ರತಿಯೊಂದು ರಂಗೋಲಿಯ ಚಿತ್ತಾರಕ್ಕೂ ವಿಜ್ಞಾನದ ವಿವರಣೆಗಳನ್ನು ನೀಡಿದರು.
ರಂಗೋಲಿಯಲ್ಲಿ ಹೃದಯ, ಮೆದುಳು, ಅಮಿಬಾ, ಜೀರ್ಣಾಂಗ ವ್ಯೂಹ, ವಿಸರ್ಜನಾಂಗ ವ್ಯೂಹ, ಹೆಣ್ಣು ಭ್ರೂಣ ಹತ್ಯೆ, ಶ್ವಾಸಕೋಶ, ಮೀನು, ತಾಪದಿಂದ ಘನವಸ್ತುಗಳ ಹಿಗ್ಗುವಿಕೆ, ದ್ರವ್ಯದ ಮೂರು ಸ್ಥಿತಿಗಳು ಹಾಗೂ ಟಾರ್ಚ್, ಸೌರಮಂಡಲ, ಬಲ್ಬು, ಬೆಳಕು ಸರಳರೇಖೆಯಲ್ಲಿ ಚಲಿಸುವಿಕೆಯ ಬಗ್ಗೆ ಮಾದರಿಗಳನ್ನು ತಯಾರಿಸಿ ಪ್ರದರ್ಶಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಶಾಲೆಯ ಶಿಕ್ಷಕರಾದ ಸಿದ್ದೇಶ್, ಲಕ್ಷಣ್, ಉಮೇಶ್ ಸೇರಿದಂತೆ ಇತರರು ಇದ್ದರು.
ಇದನ್ನೂ ಓದಿ : ಕೇಂದ್ರ ಸಚಿವ ಶೇಖಾವತ್ ಹೇಳಿಕೆ ಖಂಡಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ಸಿದ್ದರಾಮಯ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Kadalekai Parishe: ಇಂದಿನಿಂದ ಬಸವನಗುಡಿ ಕಡಲೆಕಾಯಿ ಪರಿಷೆ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.