Sea Bird ನೌಕಾನೆಲೆ: 2013ರ ಭೂಸ್ವಾಧೀನ ಕಾಯ್ದೆಯಂತೆ ಪರಿಹಾರ?
Team Udayavani, Oct 21, 2023, 10:26 PM IST
ಬೆಂಗಳೂರು: ಕಾರವಾರದಲ್ಲಿ ನೌಕಾನೆಲೆ ವಿಸ್ತರಿಸಿ, ಸಿವಿಲ್ ಎನ್‌ಕ್ಲೇವ್ ನಿರ್ಮಿಸುವ ಸೀಬರ್ಡ್ ನೌಕಾನೆಲೆಯ 2ನೇ ಹಂತದ ಕಾಮಗಾರಿಗೆ 2013ರ ಭೂಸ್ವಾಧೀನ ಕಾಯ್ದೆಯನ್ವಯ ಪರಿಹಾರ ನೀಡುವ ಕುರಿತಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಏಷ್ಯಾದಲ್ಲಿ ಅತಿ ದೊಡ್ಡ ನೌಕಾನೆಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕಾರವಾರದ ಐಎನ್‌ಎಸ್ ಕದಂಬ ನೌಕಾನೆಲೆಯನ್ನು ವಿಸ್ತರಿಸಿ, ಸಿವಿಲ್ ಎನ್‌ಕ್ಲೇವ್ ನಿರ್ಮಿಸುವ 2ನೇ ಹಂತದ ಕಾಮಗಾರಿಯನ್ನು ಸೀಬರ್ಡ್ ನೌಕಾನೆಲೆ ಕೈಗೊಂಡಿದೆ. ವಿಮಾನ ನಿಲ್ದಾಣಕ್ಕಾಗಿ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆ ಹಾಗೂ ಪರಿಹಾರ ನೀಡಿಕೆಯಲ್ಲಿ ತಾರತಮ್ಯ ನಡೆದಿರುವುದಕ್ಕೆ ಸಂಬಂಧಿಸಿದಂತೆ ಶನಿವಾರ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಭೆ ನಡೆಸಿದರು.
ಪರಿಹಾರ ನಿಗದಿಯಲ್ಲಿ ತಾರತಮ್ಯ ಆಗಿದೆ. ಭೂಮಿಗೆ ತಕ್ಕಷ್ಟು ಪರಿಹಾರ ನಿಗದಿಯಾಗಿಲ್ಲ. ಇದರಿಂದ ಗ್ರಾಮದಲ್ಲಿನ ರೈತರಿಗೆ ಅನ್ಯಾಯ ಆಗುತ್ತಿದೆ. ಈ ಬಗ್ಗೆ ಗಮನ ಹರಿಸಬೇಕು ಎಂದು ಜನಪ್ರತಿನಿಧಿಗಳು ಮನವರಿಕೆ ಮಾಡಿಕೊಟ್ಟರು. ತಾರತಮ್ಯವಿರುವುದನ್ನು ಗಮನಿಸಿದ ಸಿಎಂ, 2013 ರ ಭೂಸ್ವಾಧೀನ ಕಾಯ್ದೆಯನ್ವಯ ಇದನ್ನು ನಿವಾರಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಮೂರು ಗ್ರಾಮಗಳ ನಿರಾಶ್ರಿತ ಕುಟುಂಬಗಳು ಮಾಡಿಕೊಂಡ ಮನವಿಗೆ ಸ್ಪಂದಿಸಿದ ಸಿಎಂ, ವೈಜ್ಞಾನಿಕವಾಗಿ ಹಾಗೂ ನಿಯಮಬದ್ಧವಾಗಿ ಪರಿಹಾರ ಕೊಡುವ ದಿಕ್ಕಿನಲ್ಲಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಮುಖ್ಯ ಕಾರ್ಯದರ್ಶಿಗಳು ಮತ್ತು ಸಂಬಂಧಿಸಿದ ಇತರ ಹಿರಿಯ ಅಧಿಕಾರಿಗಳೊಂದಿಗೆ ಭೂಸ್ವಾಧೀನ ಪರಿಹಾರ ನಿಗದಿ, ಭೂಮಿ ಕಳೆದುಕೊಂಡವರಿಗೆ ಉದ್ಯೋಗ ನೀಡುವ ಕುರಿತು ಹಾಗೂ ಸೂಕ್ತ ನಿವೇಶನ ನೀಡುವ ಕುರಿತಂತೆ ಸಭೆ ನಡೆಸಿ ಚರ್ಚಿಸುವಂತೆ ಮೂಲಸೌಕರ್ಯ ಆಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರಿಗೆ ನಿರ್ದೇಶನ ನೀಡಿದರು.
ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕ ಸತೀಶ್ ಸೈಲ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಸಿಎಂ ಕಾರ್ಯದರ್ಶಿ ಜಿಯಾವುಲ್ಲಾ, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್, ಮೂಲಸೌಕರ್ಯ ಇಲಾಖೆ ಜಂಟಿ ಕಾರ್ಯದರ್ಶಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ನೌಕಾನೆಲೆಯು ಎರಡನೇ ಹಂತದಲ್ಲಿ ವಿಸ್ತರಣೆಗೊಳ್ಳುತ್ತಿದೆ. ಯೋಜನೆಗಾಗಿ ಭೂಮಿ ಕೊಟ್ಟವರಿಗೆ ಸೂಕ್ತ ಪರಿಹಾರ ಸಿಗಬೇಕು. ಜತೆಗೆ ಸೀಬರ್ಡ್ ಮೊದಲ ಹಂತದ ಯೋಜನೆ ಅಡಿ ಭೂಮಿ ಕಳೆದುಕೊಂಡವರ ಕುಟುಂಬದವರಿಗೂ ಉದ್ಯೋಗ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು.
ಸಿದ್ದರಾಮಯ್ಯ, ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.