ದ್ವಿತೀಯ ಪಿಯು ಪರೀಕ್ಷೆ: ಶುಲ್ಕ ಪಾವತಿ ಅವಧಿ ವಿಸ್ತರಣೆ
Team Udayavani, Mar 9, 2022, 10:45 PM IST
ಬೆಂಗಳೂರು: 2022ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳು ಹಾಗೂ ಅನುತ್ತೀರ್ಣವಾಗಿರುವ ಮತ್ತು ಫಲಿತಾಂಶ ತಿರಸ್ಕರಿಸಿರುವ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಸಂದಾಯ ಮಾಡಲು ಪದವಿಪೂರ್ವ ಶಿಕ್ಷಣ ಇಲಾಖೆಯು ಕೊನೆಯ ಅವಕಾಶ ನೀಡಿದೆ.
ಪರೀಕ್ಷಾ ಶುಲ್ಕದ ಜೊತೆಗೆ 500 ರೂ. ದಂಡಶುಲ್ಕ, 700 ರೂ. ವಿಶೇಷ ಶುಲ್ಕ ಮತ್ತು 1,320 ರೂ.ಗಳ ಮತ್ತೂಂದು ವಿಶೇಷ ಶುಲ್ಕವನನ್ನು ಮಾ.12ರೊಳಗೆ ಪಾವತಿಸಲು ಅವಕಾಶ ನೀಡಲಾಗಿದೆ. ಕಾಲೇಜಿನವರು ಶುಲ್ಕವನ್ನು ಖಜಾನೆಗೆ ಸಂದಾಯ ಮಾಡಲು ಮಾ.14, ಸ್ಯಾಟ್ಸ್ ಪೋರ್ಟಲ್ನಲ್ಲಿ ಭರ್ತಿ ಮಾಡಲು ಮಾ.15 ಮತ್ತು ಜಿಲ್ಲಾ ಉಪನಿರ್ದೇಶಕರ ಕಚೇರಿಗೆ ಸಲ್ಲಿಸಲು ಮಾ.16 ಕೊನೆಯ ದಿನವಾಗಿದೆ ಎಂದು ತಿಳಿಸಿದೆ.
ಪರೀಕ್ಷಾ ಶುಲ್ಕ ಪಾವತಿಸಲು ಈ ವರೆಗೆ ಜ.31 ಕೊನೆಯ ದಿನವಾಗಿತ್ತು. ಇದೀಗ ಪರೀಕ್ಷಾ ದಿನಾಂಕ ವಿಸ್ತರಣೆಯಾಗಿರುವ ಹಿನ್ನೆಲೆಯಲ್ಲಿ ಹಾಗೂ ವಿದ್ಯಾರ್ಥಿಗಳಿಂದ ಪರೀಕ್ಷಾ ಶುಲ್ಕ ಪಾವತಿಸಲು ಅವಕಾಶ ನೀಡುವಂತೆ ಮನವಿಗಳು ಬಂದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಮತ್ತೊಂದು ಅವಕಾಶ ಮಾಡಿಕೊಡಲಾಗಿದೆ ಎಂದು ಪಿಯು ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.