ಕರಾವಳಿಯಲ್ಲಿ ಮಳೆಗಾಲದಲ್ಲೂ ಸೆಕೆ!
Team Udayavani, Aug 6, 2023, 12:56 AM IST
ಮಂಗಳೂರು: ಕರಾವಳಿ ಭಾಗದಲ್ಲಿ ಕೆಲವು ದಿನಗಳಿಂದ ಮಳೆಯ ತೀವ್ರತೆ ಕಡಿಮೆಯಾಗಿದ್ದು, ಮಳೆಗಾಲದಲ್ಲೂ ಸೆಕೆಯ ಅನುಭವ ಹೆಚ್ಚಾಗುತ್ತಿದೆ. ಹವಾಮಾನದಲ್ಲಾದ ಬದಲಾವಣೆಯ ಪರಿಣಾಮ ಕಳೆದ ಒಂದು ವಾರದಿಂದ ದಿನವಿಡೀ ಸೆಕೆಯ ವಾತಾವರಣ ಇದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.
ಸದ್ಯ ಮುಂಗಾರು ದುರ್ಬಲಗೊಂಡಿದೆ. ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳ ಪ್ರಕಾರ ಸದ್ಯಕ್ಕೆ ಭಾರೀ ಮಳೆಯಾ ಗುವ ಮುನ್ಸೂಚನೆಯಿಲ್ಲ. ಇದೇ ಕಾರಣಕ್ಕೆ ಗರಿಷ್ಠ ಉಷ್ಣಾಂಶಲ್ಲಿ ವಾಡಿಕೆಗಿಂತ 2ರಿಂದ 3 ಡಿ.ಸೆ. ಏರಿಕೆಯಾಗಬಹುದು. ಕನಿಷ್ಠ ಉಷ್ಣಾಂಶದಲ್ಲಿಯೂ ಏರಿಳಿತ ಉಂಟಾಗುವ ಸಾಧ್ಯತೆ ಇದೆ. ಮಂಗಳೂರಿನಲ್ಲಿ ಶನಿವಾರ ಗರಿಷ್ಠ ಉಷ್ಣಾಂಶ 29.8 ಡಿ.ಸೆ. ಮತ್ತು ಕನಿಷ್ಠ 23.2 ಡಿ.ಸೆ. ಇತ್ತು. ಗರಿಷ್ಠ ಉಷ್ಣಾಂಶದಲ್ಲಿ ವಾಡಿಕೆಗಿಂತ 1 ಡಿ.ಸೆ. ಹೆಚ್ಚು ಇತ್ತು.
ಈ ವರ್ಷ ಕಡಿಮೆ ಮಳೆ
ಕರಾವಳಿ ಭಾಗದಲ್ಲಿ ಕಳೆದ ವರ್ಷ ಮುಂಗಾರು ಮಳೆ ಉತ್ತಮವಾಗಿ ಸುರಿದಿತ್ತು. 2022ರ ಆ. 8ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ. 10 ಮತ್ತು ಉಡುಪಿ ಜಿಲ್ಲೆಯಲ್ಲಿ ಶೇ. 6ರಷ್ಟು ಸೇರಿ ಕರಾವಳಿ ಭಾಗದಲ್ಲಿ ಶೇ. 3ರಷ್ಟು ಮಳೆ ಪ್ರಮಾಣ ಹೆಚ್ಚಾಗಿತ್ತು. ಆದರೆ ಈ ವರ್ಷ ಮುಂಗಾರು ಆಗಮನವೇ ತಡವಾಗಿದೆ. ಕೆಲವು ದಿನ ಭಾರೀ ಮಳೆಯಾಗಿತ್ತೇ ವಿನಾ ಸದ್ಯ ಮುಂಗಾರು ದುರ್ಬಲಗೊಂಡಿದೆ. 2023ರ ಆ. 8ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ. 19 ಮತ್ತು ಉಡುಪಿ ಜಿಲ್ಲೆಯಲ್ಲಿ ಶೇ. 13 ಸೇರಿದಂತೆ ಕರಾವಳಿ ಭಾಗದಲ್ಲಿ ಶೇ. 9ರಷ್ಟು ಮಳೆ ಕೊರತೆ ಇದೆ.
ಎಲ್ ನಿನೋ ಪ್ರಭಾವ
ರಾಜ್ಯದಲ್ಲಿ ಈ ಬಾರಿ ವಾಡಿಕೆಯಂತೆ ಮಳೆ ಸುರಿಯಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ಈ ಹಿಂದೆ ಅಂದಾಜಿಸಿದ್ದರು. ಆದರೆ ಸದ್ಯದ ಮುನ್ಸೂಚನೆಯಂತೆ ಎಲ್ ನಿನೋ ಪ್ರಭಾವದಿಂದ ಹಿಂದೂ ಮಹಾಸಾಗರದಲ್ಲಿ ಮೋಡ ಗಳ ಸೃಷ್ಟಿ ಕಡಿಮೆಯಾಗಲಿದೆ. ಮೋಡಗಳ ಸೃಷ್ಟಿಯೇ ಕಡಿಮೆಯಾದರೆ ಮಳೆ ಸುರಿ ಯುವ ಪ್ರಮಾಣವೂ ಕಡಿಮೆಯಾಗುವ ಸಾಧ್ಯತೆಯಿದೆ. ಇದರ ಪರಿಣಾಮ ರಾಜ್ಯದಲ್ಲಿ ನಿರೀಕ್ಷೆಯಂತೆ ವಾಡಿಕೆ ಮುಂಗಾರು ಮಳೆ ಯಾಗುವ ಸಾಧ್ಯತೆ ಕಡಿಮೆ ಎಂದು ಸದ್ಯಕ್ಕೆ ಅಂದಾಜಿಸಬಹುದು.
ಕರಾವಳಿ ಭಾಗದಲ್ಲಿ ಕೆಲವು ದಿನಗಳಿಂದ ಮುಂಗಾರು ದುರ್ಬಲಗೊಂಡಿದೆ. ಮುನ್ಸೂಚನೆ ಪ್ರಕಾರ ಸದ್ಯಕ್ಕೆ ಭಾರೀ ಮಳೆಯ ಸಾಧ್ಯತೆ ಇಲ್ಲ. ಇದೇ ಕಾರಣಕ್ಕೆ ಉಷ್ಣಾಂಶದಲ್ಲಿಯೂ ಏರಿಳಿತವಾಗುತ್ತಿದೆ. ಮುಂದಿನ ಕೆಲವು ದಿನಗಳ ಕಾಲ ಸೆಕೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದ್ದು ಗರಿಷ್ಠ ಉಷ್ಣಾಂಶ 2ರಿಂದ 3 ಡಿ.ಸೆ. ಏರಿಕೆಯಾಗುವ ನಿರೀಕ್ಷೆ ಇದೆ.
– ಪ್ರಸಾದ್, ಭಾರತೀಯ ಹವಾಮಾನ ಇಲಾಖೆ ಅಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!
Christmas: ಸಿಲಿಕಾನ್ ಸಿಟಿಯಲ್ಲಿ ಕಳೆಗಟ್ಟಿದ ಕ್ರಿಸ್‌ಮಸ್ ಸಂಭ್ರಮ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.