Guest Lecturer: ಅತಿಥಿ ಉಪನ್ಯಾಸಕರ ಆಯ್ಕೆ: ಇಂದಿನಿಂದ ಆನ್‌ಲೈನ್‌ನಲ್ಲಿ ಅರ್ಜಿ
Team Udayavani, Aug 24, 2023, 8:51 PM IST
ಬೆಂಗಳೂರು: 2023-24ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ಆಯ್ಕೆ ಮಾಡಿಕೊಳ್ಳುವ ಪ್ರಕ್ರಿಯೆ ಸಂಬಂಧ ಆ.25ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ತಿಳಿಸಿದೆ.
2023-24ನೇ ಶೈಕ್ಷಣಿಕ ಸಾಲಿನಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸಂಸ್ಕೃತ ಮತ್ತು ಚಿತ್ರಕಲಾ ಕಾಲೇಜುಗಳೂ ಸೇರಿ) ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ಬಳಿಕ ಉಳಿಕೆಯಾಗಿರುವ ಬೋಧನಾ ಕಾರ್ಯ ಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು (ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಬೋಧಕರು ಒಳಗೊಂಡಂತೆ) ಆನ್‌ಲೈನ್ ಕೌನ್ಸೆಲಿಂಗ್ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಿಕೊಳ್ಳುವ ಸಂಬಂಧ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುವುದು.
ಅರ್ಜಿ ಸಲ್ಲಿಸಲು ಸೆ.2 ಕೊನೆಯ ದಿನ. ಸೆ.4ರಂದು ರಾಜ್ಯವ್ಯಾಪಿ ಮೆರಿಟ್ ಪಟ್ಟಿ ಪ್ರಕಟಿಸಲಾಗುವುದು. ಸೆ.8ರಂದು ತಾತ್ಕಾಲಿಕ ಕಾರ್ಯಭಾರ ಹಾಗೂ ಕೌನ್ಸೆಲಿಂಗ್‌ಗಾಗಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು. ಸೆ.11ರಿಂದ 15ರ ವರೆಗೆ ಮೆರಿಟ್ ಪಟ್ಟಿ ಅನ್ವಯ ಕಾಲೇಜು ಆಯ್ಕೆ ಕೌನ್ಸೆಲಿಂಗ್ ನಡೆಸಲಾಗುವುದು. ಸೆ.16ರಂದು ಕೌನ್ಸೆಲಿಂಗ್‌ನಲ್ಲಿ ಕಾಲೇಜು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
E-Khata: ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ
MUDA CASE: ಸಿಎಂ ಆಪ್ತ, ಸಂಸದ ಇ.ಡಿ. ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
IPL 2025: ಸಾತಂತ್ರ್ಯ ನೀಡುವ ತಂಡವೇ ನನ ಆದ್ಯತೆ: ಕೆ.ಎಲ್.ರಾಹುಲ್
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
Sandalwood: ಮುಹೂರ್ತದಲ್ಲಿ ‘ದಿ ಟಾಸ್ಕ್’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.