ಕಾಂಗ್ರೆಸ್ ಮಾಜಿ ಶಾಸಕ, ಹಿರಿಯ ನ್ಯಾಯವಾದಿ ಲೈಕುದ್ದೀನ್ ಸಾಹಬ್ ನಿಧನ
Team Udayavani, Apr 30, 2021, 10:16 PM IST
ಬೀದರ್ : ಕಾಂಗ್ರೆಸ್ ಮಾಜಿ ಶಾಸಕ, ಹಿರಿಯ ನ್ಯಾಯವಾದಿ ಲೈಕುದ್ದೀನ್ ಸಾಹಬ್ (85) ಶುಕ್ರವಾರ ನಿಧನರಾಗಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಲೈಕುದ್ದೀನ್ ಅವರು ಬೀದರ್ ನ ಓಲ್ಡ್ ಸಿಟಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ.
ನಾಲ್ಕು ದಿನಗಳ ಹಿಂದೆಯಷ್ಟೇ ಅವರ ಪತ್ನಿ ಸಾವನ್ನಪ್ಪಿದ್ದು, ಇದರಿಂದ ನೊಂದಿದ್ದರು. ಮೃತರು ಇಬ್ಬರು ಗಂಡು, ಮೂರು ಹೆಣ್ಣು ಮಕ್ಕಳು ಸೇರಿ ಅಪಾರ ಬಳಗವನ್ನು ಬಿಟ್ಟು ಅಗಲಿದ್ದಾರೆ. ನಗರದ ಚಿದ್ರಿ ರಸ್ತೆಯ ದರ್ಗಾದಲ್ಲಿ ಅವರ ಅಂತ್ಯಕ್ರಿಯೆ ನೆರವೇರಿತು.
1985ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಲೈಕುದ್ದೀನ್ ಅವರು ಒಟ್ಟು ಮೂರು ಬಾರಿ ಸ್ಪರ್ಧಿಸಿದ್ದರು. ರಾಜ್ಯ ಮತ್ತು ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷರಾಗಿ ಹಾಗೂ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
ಇದನ್ನೂ ಓದಿ :ದೆಹಲಿಯಲ್ಲಿ ನಕಲಿ ರೆಮಿ ಡೆಸಿವಿರ್ ಮಾರಾಟ ಮಾಡುತ್ತಿದ್ದ ಏಳು ಜನರ ಬಂಧನ..!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.