ಪ್ರತ್ಯೇಕ ಪ್ರಕರಣ: ನೀರಿನಲ್ಲಿ ಮುಳುಗಿ ನಾಲ್ವರು ಸಾವು
Team Udayavani, Aug 6, 2023, 8:10 PM IST
ಚಿಕ್ಕಮಗಳೂರು/ ಶ್ರೀರಂಗಪಟ್ಟಣ: ಪ್ರತ್ಯೇಕ ಮೂರು ಪ್ರಕರಣದಲ್ಲಿ ನೀರಿನಲ್ಲಿ ಮುಳುಗಿ ಓರ್ವ ಯುವಕ ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಹಾಗೂ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಪ್ರವಾಸಿ ತಾಣ ಬಲಮುರಿಯಲ್ಲಿ ನಡೆದಿದೆ.
ಮೂಡಿಗೆರೆ ಪಟ್ಟಣ ಸಮೀಪದ ಹ್ಯಾಂಡ್‌ಪೊಸ್ಟ್ ಬಳಿ ಇರುವ ರಿಯಾಜ್ ಎಂಬುವವರ ತೋಟದ ಕೆರೆಯಲ್ಲಿ ಶನಿವಾರ ರಾತ್ರಿ ಮೀನು ಹಿಡಿಯಲು ಹೋಗಿದ್ದ ಮೂವರು ಬಾಲಕರಲ್ಲಿ ಮೂಡಿಗೆರೆ ಹ್ಯಾಂಡ್‌ಪೋಸ್ಟ್‌ನ ತನ್ಮಯಿ (17) ಹಾಗೂ ಕಿಶೋರ್ (12) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ರಾತ್ರಿಯಾಗಿದ್ದರಿಂದ ಮೂವರು ಬಾಲಕರು ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದ್ದಾರೆ. ಮತ್ತೋರ್ವ ಬಾಲಕ ಈಜಿಕೊಂಡು ದಡ ಸೇರಿ ಪ್ರಾಣಾಪಾಯದಿಂದ ಪಾರಾಗಿದ್ದು, ಪೋಷಕರಿಗೆ ವಿಷಯ ತಿಳಿಸಿದ್ದಾನೆ. ಸ್ಥಳಕ್ಕೆ ಬಂದ ಪೊಲೀಸರು, ಪೋಷಕರು ಹಾಗೂ ಮುಳುಗು ತಜ್ಞರು ಕಿಶೋರ್, ತನ್ಮಯಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದ ಸರ್ಕಾರಿ ಕಟ್ಟಡದ ಬಳಿ ನಿರ್ಮಿಸಲಾಗಿದ್ದ ನೀರಿನ ಗುಂಡಿಗೆ 7 ವರ್ಷದ ಬಾಲಕ ಬಿದ್ದು ಮೃತಪಟ್ಟಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಜನ್ನಾಪುರ ಗ್ರಾಮದ ಸುನೀಲ್ ಎಂಬುವರ ಪುತ್ರ ಆಶಿರ್ ಡಿ. ಕುನ್ನಾ ಮೃತಪಟ್ಟ ಬಾಲಕ. ಆಶಿರ್ ಶನಿವಾರ ಸಂಜೆ ವೇಳೆ ಸ್ನೇಹಿತರೊಂದಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡದ ಬಳಿ ಆಟವಾಡಲು ತೆರಳಿದ್ದು, ಕಟ್ಟಡದ ಬಳಿ ನೀರು ಸಂಗ್ರಹ ಮಾಡಲು ನಿರ್ಮಿಸಿದ್ದ ಗುಂಡಿಗೆ ಬಿದ್ದು, ಮುಳುಗಿ ಮೃತಪಟ್ಟಿದ್ದಾನೆ. ಗುತ್ತಿಗೆದಾರನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಇನ್ನು ಶ್ರೀರಂಗಪಟ್ಟಣ ತಾಲೂಕಿನ ಪ್ರವಾಸಿ ತಾಣ ಬಲಮುರಿಯ ಕಾವೇರಿ ನದಿಯಲ್ಲಿ ಮುಳುಗಿ ಕೋಲಾರ ಕೆಜಿಎಫ್ ಮೂಲದ ಯಶ್ವಂತ್ (25) ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ. ಯಶ್ವಂತ್ ತಂದೆ ಕೆಜಿಎಫ್ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕೆಆರ್‌ಎಸ್ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಈಜುಗಾರರ ಸಹಾಯದಿಂದ ಶವವನ್ನು ಮೇಲೆತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.