District in-charge minister ಸೆ. 25: ಉಭಯ ಜಿಲ್ಲೆಗಳಲ್ಲಿ ಜನತಾ ದರ್ಶನ
Team Udayavani, Sep 22, 2023, 10:28 PM IST
ಮಂಗಳೂರು/ಉಡುಪಿ: ಸರಕಾರದ ನಿರ್ದೇಶನದಂತೆ ಸೆ.25ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನೇತೃತ್ವದಲ್ಲಿ ಬೆಳಗ್ಗೆ 10.30ಕ್ಕೆ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಜನತಾ ದರ್ಶನ ಕಾರ್ಯಕ್ರಮವು ನಡೆಯಲಿದೆ.
ಸಾರ್ವಜನಿಕರು ಸರಕಾರಿ ಕೆಲಸ ಸಂಬಂಧ ತಮ್ಮ ಅಹವಾಲು ಏನೇ ಇದ್ದರೂ ಖುದ್ದಾಗಿ ಭಾಗವಹಿಸಿ, ಸಲ್ಲಿಸಬಹುದಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ| ವಿದ್ಯಾ ಕುಮಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ದ.ಕ.ದಲ್ಲಿ ನಡೆಯುವ ಜನತಾದರ್ಶನ ಕಾರ್ಯಕ್ರಮದಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದವಿಲ್ಲದಂತೆ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್‌ನಿಂದ ವ್ಯವಸ್ಥಿತವಾದ ಸಿದ್ದತೆ ಮಾಡಿಕೊಳ್ಳಲಾಗಿದೆ. ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರು ಈ ದಿಸೆಯಲ್ಲಿ ಅಗತ್ಯ ಕ್ರಮವಹಿಸಬೇಕು ಎಂದು ಜಿ.ಪಂ. ಸಿಇಒ ಡಾ| ಆನಂದ್ ಅವರು ತಿಳಿಸಿದರು.
ಈ ಬಗ್ಗೆ ನಡೆದ ಪೂರ್ವ ಸಿದ್ಧತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಅಹವಾಲು ಸಲ್ಲಿಸಲು ಬರುವವರಿಗೆ ಅನುಕೂಲ ಕಲ್ಪಿಸಲು ಮೂರು ಹಂತದ ಸಿದ್ದತೆ ಮಾಡಲಾಗಿದೆ. ಹೆಲ್ಪ್ಡೆಸ್ಕ್ ತೆರೆಯಲಾಗುವುದು. ಸಾರ್ವಜನಿಕರಿಗೆ ತಾವು ಸಲ್ಲಿಸುವ ಅಹವಾಲು ಯಾವ ಇಲಾಖೆಗೆ ಸಂಬಂಧಿಸಿದ್ದು ಎಂಬುದನ್ನು ಅಲ್ಲಿ ನಿಯೋಜಿಸಲಾಗಿರುವ ಸಿಬಂದಿ ತಿಳಿಸಿಕೊಡುವರು. ಸಾರ್ವಜನಿಕರು ನೀಡಿದ ಅರ್ಜಿಯನ್ನು ಪಡೆಯಲು ವಿವಿಧ ಇಲಾಖೆಗಳಿಗಾಗಿ ತೆರೆಯಲಾದ ಕೌಂಟರ್‌ಗಳಿಗೆ ಕಳುಹಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.