ಏಳನೇ ತರಗತಿ ಪಬ್ಲಿಕ್ ಪರೀಕ್ಷೆ ಅನುಮಾನ
ಸರಕಾರದಿಂದ ಹೊರಡದ ಅಧಿಕೃತ ಆದೇಶ; ಶಿಕ್ಷಣ ಇಲಾಖೆಯಲ್ಲೂ ಯಾವುದೇ ಸಿದ್ಧತೆ ಇಲ್ಲ
Team Udayavani, Nov 8, 2019, 10:18 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಏಳನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ರಾಜ್ಯ ಸರಕಾರದ ಚಿಂತನೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಅನುಷ್ಠಾನ ಅನುಮಾನ.
ಏಳನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆ ಸಲು ಬೇಕಾದ ಯಾವುದೇ ಸಿದ್ಧತೆ ಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಸರಕಾರ ಇನ್ನೂ ಮಾಡಿ ಕೊಂಡಿಲ್ಲ. ಈ ಸಂಬಂಧ ಸರಕಾರದಿಂದ ಅಧಿಕೃತ ಆದೇಶ ಅಥವಾ ನಿರ್ದೇ ಶನವೂ ಸಾರ್ವಜನಿಕ ಶಿಕ್ಷಣ ಇಲಾಖೆಗೆ ತಲು ಪಿಲ್ಲ . ಪರೀಕ್ಷೆಗೆ ಕೇವಲ 4 ತಿಂಗಳಿದ್ದು ಈ ಹಂತದಲ್ಲಿ ಹೊಸ ಪದ್ಧತಿ ಅನುಷ್ಠಾನ ಗೊಂದಲಕ್ಕೆ ಕಾರಣ ವಾಗ ಬಹುದು ಎಂಬ ಅಭಿಪ್ರಾಯ ಕೇಳಿಬರುತ್ತಿದೆ.
ಪಬ್ಲಿಕ್ ಪರೀಕ್ಷೆಗೂ ಮುನ್ನ ಸಾಕಷ್ಟು ಸಿದ್ಧತೆ ಮಾಡಿ ಕೊಳ್ಳುವ ಜತೆಗೆ ವಿದ್ಯಾರ್ಥಿಗಳನ್ನು ಇದಕ್ಕೆ ಸಜ್ಜು ಮಾಡ ಬೇಕಾಗುತ್ತದೆ. ಜತೆಗೆ ಶಿಕ್ಷಕರು ಅನೇಕ ರೀತಿಯಲ್ಲಿ ಸಿದ್ಧ ರಾಗ ಬೇಕಾಗುತ್ತದೆ. ಇದು ಯಾವುದೂ ನಡೆದಿಲ್ಲ. ಅಲ್ಲದೆ, ಪಬ್ಲಿಕ್ ಪರೀಕ್ಷೆ ನಡೆಯಲಿದೆಯೇ ಇಲ್ಲವೇ ಎಂಬ ಸ್ಪಷ್ಟ ಸಂದೇಶವೂ ಬಂದಿಲ್ಲ ಎಂದು ಉಪನಿರ್ದೇಶಕರೋರ್ವರು ತಿಳಿಸಿದರು.
34 ಶೈಕ್ಷಣಿಕ ಜಿಲ್ಲೆಗಳ ಉಪನಿರ್ದೇಶಕರಿಗೂ ಈ ಸಂಬಂಧ ಯಾವುದೇ ಮಾಹಿತಿ ಇಲಾಖೆಯಿಂದ ನೀಡಿಲ್ಲ. ಆಡಳಿತಾತ್ಮಕವಾಗಿ ಪರೀಕ್ಷಾ ಸಿದ್ಧತೆ, ಪರೀಕ್ಷಾ ಕೇಂದ್ರ ಸಹಿತ ಇತರ ಕೆಲಸಗಳಿಗಾಗಿ ಜಿಲ್ಲಾಡಳಿತದೊಂದಿಗೆ ಜಿಲ್ಲಾ ಉಪ ನಿರ್ದೇಶಕರು ಮಾತುಕತೆ ನಡೆಸಬೇಕಾಗುತ್ತದೆ. ಆದೇಶವೇ ಹೊರಡದಿರುವುದರಿಂದ ಜಿಲ್ಲಾ ಉಪನಿರ್ದೇಶಕರು ಅಥವಾ ಶಾಲೆಗಳ ಮುಖ್ಯ ಶಿಕ್ಷಕರು ಈ ಬಗ್ಗೆ ಚಿಂತಿಸಿಲ್ಲ.
ಮಾಹಿತಿ ಸಂಗ್ರಹ
ಏಳನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ಮಾಡಲು ಕಾನೂ ನಾತ್ಮಕವಾಗಿ ಅವಕಾಶ ಇದೆಯೇ ಎಂಬುದರ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿ ಗಳು, ಕಾನೂನು ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ಆರಂಭಿಸಿದ್ದಾರೆ. ಈಗಾಗಲೇ 1ರಿಂದ 9ನೇ ತರಗತಿವರೆಗೆ ಅನುತ್ತೀರ್ಣ ಮಾಡಬಾರದು ಎಂಬ ನಿಯಮವಿದೆ. ಹೊಸ ಶಿಕ್ಷಣ ನೀತಿ ಬಂದ ಅನಂತರ ಈಗಿನ ವ್ಯವಸ್ಥೆ ಬದಲಾಗುವ ಸಾಧ್ಯತೆಯಿದೆ. ಹೀಗಾಗಿ ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದರಿಂದ ಆಗಬಹುದಾದ ಅನುಕೂಲ ಮತ್ತು ಅನನುಕೂಲದ ಬಗ್ಗೆಯೂ ಚರ್ಚೆಗಳು ನಡೆದಿವೆ.
ರಾಜ್ಯದ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಏಳನೇ ತರಗತಿಯಲ್ಲಿ ಎಷ್ಟು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಅವರಲ್ಲಿ ರಾಜ್ಯ ಪಠ್ಯ ಕ್ರಮದ, ಸಿಬಿಎಸ್‌ಇ ಹಾಗೂ ಐಸಿಎಸ್‌ಇ ವಿದ್ಯಾರ್ಥಿಗಳು ಎಷ್ಟಿದ್ದಾರೆ ಎಂಬಿತ್ಯಾದಿ ಮಾಹಿತಿಯನ್ನು ಇಲಾಖೆಯಿಂದ ಇನ್ನೂ ಪಡೆದು ಕೊಂಡಿಲ್ಲ. ಒಟ್ಟಾರೆಯಾಗಿ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪಾಲಕ-ಪೋಷಕರು ಈ ವಿಚಾರದಲ್ಲಿ ಗೊಂದಲಕ್ಕೆ ಸಿಲುಕಿದ್ದಾರೆ.
ಪ್ರಶ್ನೆಪತ್ರಿಕೆಯೂ ಸಿದ್ಧವಾಗಿಲ್ಲ
ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ಮತ್ತು ಅದರ ಫಲಿತಾಂಶ ಪ್ರಕಟನೆ ಕುರಿತು ಚಿಂತನೆ ನಡೆಸಿ ಕ್ರಮ ತೆಗೆದು ಕೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಈ ಹಿಂದೆ ಹೇಳಿಕೆ ನೀಡಿದ್ದರು. ಆದರೆ ಇದುವರೆಗೆ ಪ್ರಶ್ನೆ ಪತ್ರಿಕೆ ತಯಾರಿಕೆಗಾಗಿ ಇಲಾಖೆಯ ಅಧಿಕಾರಿಗಳಿಗೆ ಯಾವುದೇ ಸ್ಪಷ್ಟ ನಿರ್ದೇಶನ ಹೋಗಿಲ್ಲ ಎಂದು ಮೂಲಗಳು ಖಚಿತಪಡಿಸಿವೆ.
ಪಬ್ಲಿಕ್ ಪರೀಕ್ಷೆ ಸಂಬಂಧ ಸರಕಾರ ದಿಂದ ಯಾವುದೇ ಆದೇಶ ಆಗಿಲ್ಲ ಮತ್ತು ಇಲಾಖೆಗೂ ಯಾವುದೇ ನಿರ್ದೇಶನ ಬಂದಿಲ್ಲ.
– ಉಮಾಶಂಕರ್, ಪ್ರಧಾನ ಕಾರ್ಯದರ್ಶಿ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ
-ರಾಜು ಖಾರ್ವಿ ಕೊಡೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.