ಕ್ರಿಕೆಟಿಗ ಶಾಹಿದ್ ಅಫ್ರಿದಿಗೂ ಕೋವಿಡ್ ಕಾಟ
Team Udayavani, Jun 14, 2020, 3:26 PM IST
ಇಸ್ಲಾಮಾಬಾದ್: ಪಾಕಿಸ್ಥಾನದಲ್ಲಿ ಕೋವಿಡ್ ಸೋಂಕಿನ ಸಂಖ್ಯೆ ಇನ್ನಷ್ಟು ತೀವ್ರಗೊಂಡಿದ್ದು, ಹಲವು ರಾಜಕಾರಣಿಗಳು ಸೋಂಕಿಗೆ ತುತ್ತಾದ ಬೆನ್ನಲ್ಲೇ ಈಗ ಪ್ರಸಿದ್ಧ ಕ್ರಿಕೆಟಿಗ ಶಾಹಿದ್ ಅಫ್ರಿದಿ ಅವರೂ ಸೋಂಕಿಗೆ ತುತ್ತಾಗಿದ್ದಾರೆ.
ಪಾಕ್‌ನ ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಆಟಗಾರ ತೌಫೀಕ್ ಉಮರ್ ಬಳಿಕ ಕೋವಿಡ್ ಸೋಂಕಿಗೆ ಈಡಾಗುತ್ತಿರುವ ಎರಡನೇ ಕ್ರಿಕೆಟಿಗ ಅಫ್ರಿದಿ ಅವರಾಗಿದ್ದಾರೆ. ಈ ವಿಚಾರವನ್ನು ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಗುರುವಾರದಿಂದ ನನಗೆ ಹುಷಾರಿರಲಿಲ್ಲ. ಬಳಿಕ ನಾನು ಪರೀಕ್ಷೆಗೆ ಒಳಗಾಗಿದ್ದು, ಕೋವಿಡ್ ಪೊಸೆಟಿವ್ ಬಂದಿದೆ. ಶೀಘ್ರ ಗುಣಮುಖರಾಗಲು ನಿಮ್ಮ ಪ್ರಾರ್ಥನೆ ಇರಲಿ ಎಂದು ಬರೆದುಕೊಂಡಿದ್ದಾರೆ.
ಕೋವಿಡ್ ಪ್ರಕರಣಗಳು ಕಾಣಿಸಿಕೊಂಡ ಬಳಿಕ ಅಫ್ರಿದಿ ಅವರು ಸಾಮಾಜಿಕ ಸೇವಾ ಚಟವಟಿಕೆಗಳಲ್ಲಿ ಭಾಗಿಯಾಗಿದ್ದರು. ಇದೇ ವೇಳೆ ಪಾಕಿಸ್ಥಾನದಲ್ಲೂ ನಡೆಯಬೇಕಿದ್ದ ಪಾಕಿಸ್ಥಾನ್ ಸೂಪರ್ ಲೀಗ್ (ಪಿಎಸ್‌ಎಲ್)ರದ್ದಾಗಿತ್ತು. ಭಾರತದ ಐಪಿಎಲ್ ಮಾದರಿಯಲ್ಲೇ ಪಾಕ್‌ನಲ್ಲೂ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗುತ್ತದೆ. ಪಾಕಿಸ್ಥಾನದಲ್ಲಿ ಸದ್ಯ 1.32 ಲಕ್ಷಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ಕಂಡು ಬಂದಿದ್ದು, 2551 ಸಾವು ಸಂಭವಿಸಿದೆ. ಕಳೆದ ಕೆಲವು ವಾರಗಳಲ್ಲಿ ಆ ದೇಶದಲ್ಲಿ ಸೋಂಕಿತರ ಸಂಖ್ಯೆ ಇನ್ನಿಲ್ಲದಷ್ಟು ಏರಿಕೆ ಕಾಣುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ
MUST WATCH
ಹೊಸ ಸೇರ್ಪಡೆ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.