ಶಿವಮೊಗ್ಗ: ಹೆಚ್ಚಾದ ನಲ್ಲಿಗಳ ಕಳ್ಳತನ ಪ್ರಕರಣಗಳು


Team Udayavani, Dec 24, 2021, 6:58 PM IST

1-sdds

ಶಿವಮೊಗ್ಗ: 24 ಗಂಟೆ ನೀರು ಪೂರೈಕೆ ಮಾಡುವ ಮಹತ್ವಾಕಾಂಕ್ಷೆ ಯೋಜನೆಯ ನಲ್ಲಿಗಳ ಕಳ್ಳತನ ಪ್ರಕರಣಗಳು ಹೆಚ್ಚಾಗಿದೆ. ನೆಹರೂ ರಸ್ತೆಯಲ್ಲಿ ಅಂಗಡಿಗಳ ಮುಂದೆ ಅಳವಡಿಸಿದ್ದ ನಲ್ಲಿಗಳು ನಿತ್ಯ ಕಳವಾಗುತ್ತಿವೆ. ಬಹುತೇಕ ನಲ್ಲಿಗಳು ಕುಡುಕರ ಪಾಲಾಗುತ್ತಿವೆ.

ಶಿವಮೊಗ್ಗದಲ್ಲಿ 24 * 7 ಕುಡಿಯುವ ನೀರು ಪೂರೈಕೆ ಯೋಜನೆ ಕಾಮಗಾರಿ ಪ್ರಗತಿಯಲ್ಲಿದೆ. ಮನೆಗಳು, ಅಂಗಡಿಗಳಿಗೆ ಪ್ರತ್ಯೇಕ ನೀರಿನ ಪೈಪ್, ಮೀಟರ್ ಅಳವಡಿಸಲಾಗುತ್ತಿದೆ. ಶಿವಮೊಗ್ಗದ ನೆಹರೂ ರಸ್ತೆಯಲ್ಲೂ ನೀರಿನ ಪೈಪ್ ಅಳವಡಿಸಲಾಗಿದೆ. ಆದರೆ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ನಲ್ಲಿಗಳು ಕಣ್ಮರೆಯಾಗುತ್ತಿವೆ. ಈ ಬಗ್ಗೆ ಅಂಗಡಿ ಮಾಲೀಕರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ತಿಳಿಸಿದರೂ ಪ್ರಯೋಜನವಾಗಿಲ್ಲ.

ಒಂದು ತಿಂಗಳಿಂದ ಈಚೆಗೆ ಶಿವಮೊಗ್ಗದ ನೆಹರೂ ರಸ್ತೆಯಲ್ಲಿ ನಲ್ಲಿಗಳನ್ನು ಅಳವಡಿಸಲಾಗಿದೆ. ಆದರೆ ನಿತ್ಯ ಒಂದೊಂದು ಅಂಗಡಿ ಮುಂದಿನ ನಲ್ಲಿ ಕಳ್ಳತನವಾಗುತ್ತಿದೆ. ಬಹುತೇಕ ನಲ್ಲಿಗಳನ್ನು ಕುಡುಕರು ಕದಿಯುತ್ತಿದ್ದಾರೆ ಎಂಬ ಅಪಾದನೆ ಇತ್ತು. ಈಗ ವಿಡಿಯೋ ಸಾಕ್ಷಿಯು ಲಭ್ಯವಾಗಿದೆ.

ಅಂಗಡಿಗಳ ಬಾಗಿಲು ತೆಗೆಯುವ ಮೊದಲೆ ನಲ್ಲಿಗಳ ಕಳ್ಳತನವಾಗುತ್ತಿದೆ. ನಲ್ಲಿ ಕಳ್ಳತನ ಮಾಡುತ್ತಿರುವುದನ್ನು ಸ್ಥಳೀಯರೊಬ್ಬರು ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ಅಂಗಡಿಯೊಂದರ ಮುಂದೆ ಅಳವಡಿಸಿದ್ದ ನಲ್ಲಿಯನ್ನು ವ್ಯಕ್ತಿಯೊಬ್ಬ ಕಳಚಿಕೊಂಡು ಹೋಗುವ ದೃಶ್ಯ ಸೆರೆಯಾಗಿದೆ. ಸ್ವಲ್ಪ ಹೊತ್ತಿನಲ್ಲಿ ಸಂಪೂರ್ಣ ಪಾನಮತ್ತನಾಗಿ ಬರುವ ಆ ವ್ಯಕ್ತಿ, ನೆಹರೂ ರಸ್ತೆಯ ಡಿವೈಡರ್ ಮೇಲೆ ಬಂದು ಮಲಗುವುದು ದೃಶ್ಯದಲ್ಲಿ ಸೆರೆಯಾಗಿದೆ.

ನೆಹರೂ ರಸ್ತೆಯಲ್ಲಿ ನಿತ್ಯ ಇಂತಹ ಪ್ರಕರಣಗಳು ವರದಿಯಾಗುತ್ತಿವೆ ಎಂದು ಇಲ್ಲಿಯ ಅಂಗಡಿ ಮಾಲೀಕರು ಆರೋಪಿಸುತ್ತಾರೆ. ಇದು ಹೀಗೆ ಮುಂದುವರೆದರೆ ನೀರಿನ ಪೈಪ್‌ಗಳು ಕೂಡ ಕಳ್ಳತನವಾಗುವ ಸಾಧ್ಯತೆ ಇದೆ. ಈ ಬಗ್ಗೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕಿದೆ. ನಲ್ಲಿ ಕಳ್ಳತನದ ಬಗ್ಗೆ ಯಾರೊಬ್ಬರೂ ಪೊಲೀಸರಿಗೆ ದೂರು ನೀಡುವುದಿಲ್ಲ. ಇದೆ ಕಾರಣಕ್ಕೆ ನಲ್ಲಿ ಕಳ್ಳತನಕ್ಕೆ ತಡೆಯಿಲ್ಲದಂತೆ ಆಗಿದೆ.

ಟಾಪ್ ನ್ಯೂಸ್

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Hubli; Pig farmer assault case; Four arrested including sister’s husband

Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕ್ಮಸಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-road-mishap

Anandapura: ಬಸ್‌ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

Shimoga: ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್; ಬೈಕ್ ಸವಾರ ಸಾವು

Shimoga: ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್; ಬೈಕ್ ಸವಾರ ಸಾವು

9-shivamogga

Shivamogga: ಮುಂದುವರಿದ ಕರಡಿಗಳ ಹಾವಳಿ; ಸ್ಥಳೀಯರಲ್ಲಿ ತೀವ್ರ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

20-health

Bronchiolitis: ಮಕ್ಕಳಲ್ಲಿ ಬ್ರೊಂಕೊಲೈಟಿಸ್‌; ಹೆತ್ತವರು ತಿಳಿದಿರಬೇಕಾದ ಅಂಶಗಳು

19-health

Psychiatric ಚಿಕಿತ್ಸೆ; ಅನುಸರಣೆಯ ಅಗತ್ಯಗಳು, ನಿರ್ವಹಿಸುವ ವಿಧಾನಗಳು

6

Karkala: ಲೈಸೆನ್ಸ್‌ ಇಲ್ಲದ ವ್ಯಾಪಾರಕ್ಕೆ ಕಡಿವಾಣ

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

5

Kundapura: ಜಿಲ್ಲೆಯ ರೈತರಿಗೆ ಭಾರೀ ಆಸಕ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.