Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ
Team Udayavani, Jul 23, 2024, 7:23 AM IST
ಸಕಲೇಶಪುರ: ಮಳೆ ಬಿಡುವು ಕೊಟ್ಟಿರುವುದರಿಂದ ರಾಷ್ಟ್ರೀಯ ಹೆದ್ದಾರಿ- 75ರ ಶಿರಾಡಿ ಘಾಟಿ ಮಾರ್ಗದಲ್ಲಿ ವಾಹನಗಳ ಸಂಚಾರ ಪುನರಾರಂಭವಾಗಿದೆ.
ಸಕಲೇಶಪುರ ಸಮೀಪ ದೊಡ್ಡತಪ್ಪಲು ಬಳಿ ಮತ್ತು ಶಿರಾಡಿ ಘಾಟಿಯಲ್ಲಿ ರಸ್ತೆ ಮೇಲೆ ಭೂ ಕುಸಿತ ಸಂಭವ ಹಿನ್ನೆಲೆಯಲ್ಲಿ ಸಕಲೇಶಪುರದಿಂದ ಮಂಗಳೂರು, ಧರ್ಮಸ್ಥಳದ ನಡುವೆ ರಾತ್ರಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಆದರೆ ರವಿವಾರ ಸಂಜೆಯಿಂದ ಮಳೆ ಅಬ್ಬರ ಕಡಿಮೆಯಾಗುತ್ತ ಬಂದಿದ್ದು, ಸೋಮವಾರ ಮಳೆ ಬಿಡುವು ಕೊಟ್ಟಿರುವುದರಿಂದ ಶಿರಾಡಿ ಘಾಟಿ ಮಾರ್ಗದಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ದಿನದ 24 ತಾಸು ಕೂಡ ವಾಹನ ಸಂಚಾರ ಸೋಮವಾರದಿಂದಲೇ ಆರಂಭವಾಗಿದೆ.
ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ
ಸುಳ್ಯ: ಭಾರೀ ಮಳೆಗೆ ಮಣ್ಣು ಕುಸಿತ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಸಂಪಾಜೆ-ಮಡಿಕೇರಿ ನಡುವೆ ರಾತ್ರಿ ಹೇರಲಾಗಿದ್ದ ನಿರ್ಬಂಧ ಸೋಮವಾರ ಬೆಳಗ್ಗೆ ಮುಕ್ತಾಯಗೊಂಡಿದ್ದು, ಸೋಮವಾರ ರಾತ್ರಿ ಮತ್ತೆ ಸಂಚಾರ ಪುನರಾರಂಭಗೊಂಡಿದೆ.
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಕರ್ತೋಜಿ ಎಂಬಲ್ಲಿ ಭೂಕುಸಿತವಾಗುವ ಸಾಧ್ಯತೆ ಇದ್ದುದರಿಂದ ಮುಂಜಾಗ್ರತೆ ಕ್ರಮವಾಗಿ ಜು. 19ರಿಂದ ಜು. 22ರ ವರೆಗೆ ರಾತ್ರಿ 8ರಿಂದ ಬೆಳಗ್ಗೆ 6ರ ವರೆಗೆ ಎಲ್ಲ ರೀತಿಯ ವಾಹನ ಸಂಚಾರ ನಿರ್ಬಂಧಿಸಿ ಕೊಡಗು ಜಿಲ್ಲಾಧಿಕಾರಿ ಆದೇಶಿಸಿದ್ದರು. ಸೋಮವಾರ ರಾತ್ರಿ ವಾಹನ ಸಂಚಾರ ಪುನರಾರಂಭಗೊಂಡಿದೆ. ಕರ್ತೋಜಿಯಲ್ಲಿ ಮಣ್ಣು ಕುಸಿತವಾದ ಪ್ರದೇಶದಲ್ಲಿ ಮುಂಜಾಗ್ರತೆ ಮುಂದುವರಿಸಲಾಗಿದ್ದು, ಪೊಲೀಸ್ ನಿಯೋಜಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.