ಶಿರಹಟ್ಟಿ : ಈಜಲು ಹೋದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು
Team Udayavani, Jan 15, 2022, 9:31 PM IST
ಶಿರಹಟ್ಟಿ : ಮಕರ ಸಂಕ್ರಾಂತಿಯ ನಿಮಿತ್ತ ಶಿರಹಟ್ಟಿ ತಾಲ್ಲೂಕಿನ ಹೊಳೆ ಇಟಗಿ ಗ್ರಾಮದ ಪಕ್ಕದಲ್ಲಿರುವ ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ಹೋದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಶನಿವಾರ ಮಧ್ಯಾಹ್ನ 2 ಘಂಟೆಯ ಸುಮಾರಿಗೆ ಹೊಳೆ ಇಟಗಿ ಗ್ರಾಮಕ್ಕೆ ಹೊಂದಿಕೊಂಡಿರುವ ತುಂಗಭದ್ರಾ ನದಿಯಲ್ಲಿ ಸಂಕ್ರಮಣ ನಿಮಿತ್ತ ಸ್ನಾನಕ್ಕಾಗಿ ಹೋಗಿದ್ದು ನದಿ ಆಳವಾಗಿದ್ದ ಪರಿಣಾಮ ಮುಳಗಿ ಸೂರಣಗಿ ಗ್ರಾಮದ ಪ್ರಜ್ವಲ್ ಬಸವರಾಜ ಮಾಸ್ತಮ್ಮನವರ (14 ವರ್ಷ) ಹಾಗೂ ಹೊಳೆ ಇಟಗಿ ಗ್ರಾಮದ ನಾಗರಾಜ ಕರಬಸಪ್ಪ ಬುರಡಿ (13 ವರ್ಷ) ಮೃತಪಟ್ಟಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ನದಿ ಪಾತ್ರಕ್ಕೆ ತೆರಳಿ ಈಜುಗಾರರ ಸಹಾಯದಿಂದ ಮೃತ ದೇಹಗಳನ್ನು ಹೊರ ತೆಗೆದಿದ್ದಾರೆ.
ಮುಗಿಲು ಮುಟ್ಟಿದ ಪಾಲಕರ ಆಕ್ರಂದನ
ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬಂದ ಮೃತ ಬಾಲಕರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.
ಸೂಕ್ತ ಪರಿಹಾರ ನೀಡಲಿ :
ಈ ವೇಳೆ ಸ್ಥಳೀಯ ಮುಖಂಡ ಮಂಜುನಾಥ್ ಶಂಕಿನದಾಸರ ಘಟನೆ ಕುರಿತು ಮಾತನಾಡಿ, ಕೂಲಿ ಮಾಡಿ ಜೀವನ ನಡೆಸುತ್ತಿರವಂತಹ ಕುಟುಂಬಗಳ ಬಾಲಕರು ನದಿಯಲ್ಲಿ ಬಿದ್ದು ಸಾವನ್ನಪ್ಪಿದ್ದು ಆದ್ದರಿಂದ ಮೇಲಧಿಕಾರಿಗಳು ಬಡ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.
ಘಟನಾ ಸ್ಥಳಕ್ಕೆ ತಹಸೀಲ್ದಾರ್ ಜೆ. ಬಿ. ಮಜ್ಜಗಿ, ಸಿಪಿಐ ವಿಕಾಸ್ ಲಮಾಣಿ, ಪಿಎಸ್ಐ ನವೀನ್ ಕುಮಾರ್ ಜಕ್ಕಲಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.