ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

2 ಮೂಳೆಗಳು ಲಭ್ಯವಾಗಿದ್ದು, ಅದನ್ನು ಡಿಎನ್‌ಎ ಪರೀಕ್ಷೆಗೆ ಒಳಪಡಿಸಿದ್ದಾರೆ.

Team Udayavani, Oct 18, 2024, 6:13 PM IST

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಉದಯವಾಣಿ ಸಮಾಚಾರ
ಗೋಕರ್ಣ: ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 9 ಜನರ ಶವ ಪತ್ತೆಯಾಗಿದ್ದು, ಇನ್ನಿಬ್ಬರ ಶವ ಪತ್ತೆಯಾಗಬೇಕಿದೆ. ಆದರೆ ಈ ಹಿಂದಿನಿಂದಲೂ ಪ್ರತ್ಯಕ್ಷದರ್ಶಿಗಳ ಪ್ರಕಾರ 15 ಜನರಿಗಿಂತಲೂ ಅಧಿಕ ವ್ಯಕ್ತಿಗಳು ಇಲ್ಲಿ ಸಿಲುಕಿದ್ದಾರೆ ಎಂಬ ಶಂಕೆ ವ್ಯಕ್ತಪಡಿಸಿದ್ದರು.

ಹಾಗೇ ಸೆ.30 ರಂದು ಕಾರ್ಯಾಚರಣೆಯಲ್ಲಿ ಸಿಕ್ಕ 2 ಮೂಳೆಗಳನ್ನು ಡಿಎನ್‌ಎ ಪರೀಕ್ಷೆಗೆ ಒಳಪಡಿಸಿದರೂ ಇನ್ನುವರೆಗೂ ಅದರ ವರದಿ ಬಾರದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಈ ಪ್ರಕರಣದಲ್ಲಿ ನಾಪತ್ತೆಯಾಗಿರುವವರ ಕುರಿತು 11 ಜನರ ಕುರಿತು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ 9 ಶವಗಳು ಈಗಾಗಲೇ ಪತ್ತೆಯಾಗಿವೆ. ಯಾವುದೇ ಮಹತ್ವದ ಕಾರ್ಯಾಚರಣೆ ನಡೆಸದೇ ಇದ್ದಾಗಲೇ 7 ಶವಗಳು ಪತ್ತೆಯಾಗಿದ್ದವು. ಇನ್ನು ಕೇರಳದ ಅರ್ಜುನ ಚಲಾಯಿಸುತ್ತಿದ್ದ ಭಾರತ್‌ ಬೆಂಜ್‌ ಲಾರಿ ಹಾಗೂ ಆತ ನಾಪತ್ತೆಯಾಗಿದ್ದ. ಕೇರಳ ಸರಕಾರ
ನ್ಯಾಯಾಲಯದ ಮೊರೆ ಹೋಗಿದ್ದರಿಂದಾಗಿ ಜಿಲ್ಲಾಡಳಿತಕ್ಕೆ ಹಾಗೇ ರಾಜ್ಯಕ್ಕೆ ಕಾರ್ಯಾಚರಣೆ ನಡೆಸುವುದು ಅನಿವಾರ್ಯವಾಗಿತ್ತು.

ಗೋವಾದಿಂದ ಬಂದ ಕೋಟಿವೆಚ್ಚದ ಡ್ರೆಜ್ಜಿಂಗ್‌ ಯಂತ್ರ ಸತತವಾಗಿ ಕಾರ್ಯಾಚರಣೆ ನಡೆಸಿ ಲಾರಿ ಹಾಗೂ ಆತನ ಕಳೆಬರ ಪತ್ತೆಹಚ್ಚಲು ಯಶಸ್ವಿಯಾಗಿದ್ದರು. ಆದರೆ ಈಗ ನಾಪತ್ತೆಯಾದ ಜಗನ್ನಾಥ ನಾಯ್ಕ ಹಾಗೂ ಲೋಕೇಶ ನಾಯ್ಕ ಪರವಾಗಿ ಧ್ವನಿ ಎತ್ತುವವರು ಇಲ್ಲದಿದ್ದರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.

ಸೆ.30 ರಂದು 2 ಮೂಳೆಗಳು ಲಭ್ಯವಾಗಿದ್ದು, ಅದನ್ನು ಡಿಎನ್‌ಎ ಪರೀಕ್ಷೆಗೆ ಒಳಪಡಿಸಿದ್ದಾರೆ. ಆದರೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಸ್ಥಳೀಯ ವೈದ್ಯರು ಹೆಚ್ಚಿನ ರಾಸಾಯನಿಕ ಬಳಸಿದ್ದರಿಂದಾಗಿ ಅವರ ಡಿಎನ್‌ಎ ಪರೀಕ್ಷೆ ನಡೆಸಲು ಸಾಧ್ಯವಾಗಿಲ್ಲ.

ಇನ್ನು 10 ದಿನಗಳ ನಂತರ ವರದಿ ಬರಲಿದೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಆದರೆ ಇದುವರೆಗೂ ಯಾವುದೇ ವರದಿ ಬಾರದಿರುವುದು ಜನರಲ್ಲಿ ಅನುಮಾನ ಹುಟ್ಟುಹಾಕಿದೆ. ಆರಂಭದಲ್ಲಿಯೇ 15 ಜನರಿಗಿಂತ ಹೆಚ್ಚು ಜನರು ಈ ದುರ್ಘ‌ಟನೆಯಲ್ಲಿ ನೀರು ಪಾಲಾಗಿದ್ದಾರೆ ಎಂದು ಹೇಳಲಾಗುತ್ತಿತ್ತು. ಹೀಗೆ ಸೂಕ್ಷ್ಮವಾಗಿ ಗಮನಿಸಿದರೆ 11 ಜನರ ಬದಲಿಗೆ ಈಗ ಸಿಕ್ಕಿರುವ ಮೂಳೆಗಳು 12 ಅಥವಾ 13ನೇ ವ್ಯಕ್ತಿಗಳದ್ದಾ ಎಂಬ ಅನುಮಾನಗಳು ಮೂಡತೊಡಗಿವೆ. ಈ ಕುರಿತು ಜಿಲ್ಲಾಡಳಿತ ಜನರ ಮುಂದೆ ಸ್ಪಷ್ಟನೆ ನೀಡಬೇಕಾಗಿದೆ.

ಜು.16 ರಂದು ನಡೆದ ಘಟನೆಯಲ್ಲಿ ನಮ್ಮ ಸಹೋದರ ನಾಪತ್ತೆಯಾಗಿದ್ದಾನೆ. ಇದುವರೆಗೂ ಆತನ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಕಾರ್ಯಾಚರಣೆ ಸಂದರ್ಭದಲ್ಲಿ ನಾವು ಸ್ಥಳದಲ್ಲಿಯೇ ಇದ್ದರೂ ಕೂಡ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಆದರೆ ನಮ್ಮ ಸಹೋದರ ಲೋಕೇಶ ನಾಯ್ಕರ ಅವಶೇಷಗಳು ನಮಗೆ ಲಭ್ಯವಾಗಬೇಕು. ಇಲ್ಲದಿದ್ದರೆ ಮುಂದೆ ನಡೆಯುವ ಹೋರಾಟಗಳಲ್ಲಿ ನಾನು ಭಾಗವಹಿಸುತ್ತೇನೆ.
ವಿನೋದ ನಾಯ್ಕ, ನಾಪತ್ತೆಯಾದ
ಲೋಕೇಶನ ಸಹೋದರ

ಟಾಪ್ ನ್ಯೂಸ್

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

12

Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ

Weightlifting: ಏಷ್ಯನ್‌ ವೇಟ್‌ ಲಿಫ್ಟಿಂಗ್‌; ಭಾರತಕ್ಕೆ ಎರಡು ಬೆಳ್ಳಿ

Weightlifting: ಏಷ್ಯನ್‌ ವೇಟ್‌ ಲಿಫ್ಟಿಂಗ್‌; ಭಾರತಕ್ಕೆ ಎರಡು ಬೆಳ್ಳಿ

15

Junior World Cup shooting: ಭಾರತದ ಆತಿಥ್ಯದಲ್ಲಿ ಜೂ. ವಿಶ್ವಕಪ್‌ ಶೂಟಿಂಗ್‌

1

Udupi: ಕುದ್ರು ನೆಸ್ಟ್‌ ರೆಸಾರ್ಟ್‌ನಲ್ಲಿ ಬೆಂಕಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.