ಶಿರ್ವ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಓಡಾಡುತ್ತಿದ್ದವನ ಬಂಧನ
Team Udayavani, Mar 11, 2023, 2:22 PM IST
ಶಿರ್ವ: ಇಲ್ಲಿನ ಪೊಲೀಸ್ ಠಾಣೆಯ ವ್ಯಾಪ್ತಿಯ ಕುರ್ಕಾಲು ಮತ್ತು ಬಂಟಕಲ್ಲಿನಲ್ಲಿ 2020ರಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಬಾಗಲಕೋಟೆಯ ಬಿಲ್ಕೆನೂರು ಜುಮ್ಮಾ ಮಸೀದಿ ಬಳಿಯ ನಿವಾಸಿ ವಿಜಯ ಹುಲಗಪ್ಪ ವಡ್ಡರ್ ಪ್ರೊಕ್ಲಮೇಶನ್ ವಾರೆಂಟ್ ಅಸಾಮಿಯನ್ನು ಶಿರ್ವ ಪೊಲೀಸ್ ಉಪನಿರೀಕ್ಷಕರಾದ ರಾಘವೇಂದ್ರ ಸಿ. (ಕಾನೂನು ಮತ್ತು ಸುವ್ಯವಸ್ಥೆ) ಹಾಗೂ ಅನಿಲ್ ಕುಮಾರ್ ಟಿ. ನಾಯ್ಕ(ತನಿಖೆ) ಅವರ ಮಾರ್ಗದರ್ಶನದಂತೆ ಎಎಸ್‌ಐ ವಿವೇಕಾನಂದ ಮತ್ತು ಪಿಸಿಗಳಾದ ರಘು ಮತ್ತು ಮಂಜುನಾಥ ನಾಯ್ಕ ಮಾ. 10 ರಂದು ಕಾರವಾರದಲ್ಲಿ ಬಂಧಿಸಿ ಕರೆತಂದಿದ್ದಾರೆ.
ಹೆಡ್‌ಕಾನ್‌ಸ್ಟೇಬಲ್ ಭಾಸ್ಕರ್ ಮತ್ತು ಪಿಸಿ ವಿನೋದ್ ಆರೋಪಿಯನ್ನು ಮಾ. 11 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ಮಾ. 13 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯನ್ನು ಹಿರಿಯಡ್ಕ ಕಾರಾಗೃಹಕ್ಕೆ ಕಳುಹಿಸಲಾಗಿದೆ.
ಈತನ ಮೇಲೆ ಶಿರ್ವ, ಕಾಪು, ವೇಣೂರು, ಮೂಡುಬಿದಿರೆ, ಕಾವೂರು, ಅಂಕೋಲಾ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗಿವೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.