Shivamogga: ಪ್ರಾಯೋಗಿಕ ಸ್ಫೋಟ: ಇಬ್ಬರ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್
ರಾಷ್ಟ್ರಧ್ವಜ ಸುಟ್ಟ ಪ್ರಕರಣ ಸಂಬಂಧ 3ನೇ ಪೂರಕ ಆರೋಪಪಟ್ಟಿ ಸಲ್ಲಿಕೆ
Team Udayavani, Sep 25, 2024, 5:35 PM IST
ಬೆಂಗಳೂರು: ಶಿವಮೊಗ್ಗದ ತುಂಗಾ ನದಿ ತೀರದಲ್ಲಿ ಐಸಿಸ್ ಉಗ್ರರು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಪ್ರಾಯೋಗಿಕ ಸ್ಫೋಟದ ವೇಳೆ ರಾಷ್ಟ್ರಧ್ವಜ ಸುಟ್ಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಇಬ್ಬರು ಶಂಕಿತರ ವಿರುದ್ಧ ಮಂಗಳವಾರ 3ನೇ ಪೂರಕ ಆರೋಪಪಟ್ಟಿ ಸಲ್ಲಿಸಿದೆ. ಈ ಮೂಲಕ ಇದೇ ಪ್ರಕರಣದಲ್ಲಿ 10 ಮಂದಿ ಶಂಕಿತರ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ.
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಅಬ್ದುಲ್ ಮತೀನ್ ತಾಹಾ ಹಾಗೂ ಮುಸಾವೀರ್ ಹುಸೇನ್ ಶಾಜೀಬ್ ಇಡೀ ಪ್ರಕರಣದ ಸಂಚುಕೋರರು. ಈ ಇಬ್ಬರು 2024ರ ಮಾರ್ಚ್ 1ರಂದು ನಡೆದ ಬೆಂಗಳೂರಿನ ಕುಂದಲಹಳ್ಳಿ ಸಮೀಪದ ರಾಮೇಶ್ವರಂ ಕೆಫೆ ಸ್ಫೋಟದ ರೂವಾರಿಗಳು ಎಂದು ಎನ್‌ಐಎ ತಿಳಿಸಿದೆ.
ಇವರು ಬೆಂಗಳೂರಿನ ಸುದ್ದಗುಂಟೆಪಾಳ್ಯದಲ್ಲಿ 2020ರಲ್ಲಿ ಐಸಿಸ್ ಪ್ರೇರಿತ ಅಲ್-ಹಿಂದ್ ಸಂಘಟನೆ ಸಂಬಂಧ ನಡೆದ ಸಭೆಯಲ್ಲಿ ಭಾಗಿಯಾಗಿದ್ದರು. ಜತೆಗೆ ಮುಸ್ಲಿಂ ಸಮುದಾಯದ ಕೆಲವು ಯುವಕರನ್ನು ಪ್ರಚೋದಿಸಿ ಐಸಿಸ್/ಅಲ್ ಹಿಂದ್ ಸಂಘಟನೆಗಳಿಗೆ ಸೇರಿಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?
ಹಿಂದೂ ಅತ್ಯಂತ ಪುರಾತನವಾದ ಧರ್ಮ: ಡಾ.ನಿರ್ಮಲಾ ನಂದನಾಥ ಸ್ವಾಮೀಜಿ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
MUST WATCH
ಹೊಸ ಸೇರ್ಪಡೆ
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.