“ಇಂದ್ರಸೇನʼನಾದ ಶಿವರಾಜಕುಮಾರ್

Team Udayavani, Jun 6, 2020, 8:09 AM IST

shivuraj indra’

ನಟ ಶಿವರಾಜಕುಮಾರ್ ಸದ್ದಿಲ್ಲದೇ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ಈಗಾಗಲೇ ಆ ಚಿತ್ರದ ಪೋಸ್ಟರ್ ಬಿಡುಗಡೆಯಾಗಿ ಅಭಿಮಾನಿಗಳ ಮೆಚ್ಚುಗೆ ಪಡೆದಿದೆ. ಅಷ್ಟಕ್ಕೂ ಯಾವುದು ಆ ಸಿನಿಮಾ ಎಂದು ನೀವು ಕೇಳಬಹುದು. ಅದಕ್ಕೆ ಉತ್ತರ ಇಂದ್ರಸೇನ. ಹೌದು, ಶಿವಣ್ಣ ಇಂದ್ರಸೇನ ಎಂಬ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಮುರಳಿ ಮೋಹನ್ ಈ ಚಿತ್ರದ ನಿರ್ದೇಶಕರು.

ಇಂದ್ರಸೇನ ಚಿತ್ರದ ಮೂಲಕ ಮುರಳಿ ಮೋಹನ್ ಮತ್ತೆ ನಿರ್ದೇಶನಕ್ಕೆ ಮರಳುತ್ತಿದ್ದಾರೆ. ಈ ಹಿಂದೆ ನಾಗರಹಾವು, ಸಂತ ಸೇರಿದಂತೆ ಕೆಲವು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ ಮುರಳಿ, ಇತ್ತೀಚಿನ ವರ್ಷಗಳಲ್ಲಿ ನಿರ್ದೇಶನದಿಂದ ದೂರವೇ ಉಳಿದಿದ್ದರು. ಆದರೆ ಈಗ ಇಂದ್ರಸೇನ ಚಿತ್ರದ ಮೂಲಕ ಮತ್ತೆ ಬರುತ್ತಿದ್ದಾರೆ. ಎಲ್ಲಾ ಓಕೆ, ಈ ಚಿತ್ರದ ಕಥೆ ಏನು ಎಂದು ನೀವು ಕೇಳಬಹುದು.

ಒಂದಷ್ಟು ನೈಜ ಅಂಶಗಳನ್ನಿಟ್ಟುಕೊಂಡು ಅದಕ್ಕೆ ಸಿನಿರೂಪ ಕೊಡುತ್ತಿದ್ದಾರಂತೆ. ಶತ್ರುಗಳು ಹೊರಗಿಲ್ಲ, ಒಳಗೆಯೇ ಇದ್ದಾರೆ. ಹೊರಗಿನ ಶತ್ರುಗಳಿಗಿಂತ ನಮ್ಮ ಬೆನ್ನ ಹಿಂದೆ ಇರುವ ಶತ್ರುಗಳು ತುಂಬಾ ಅಪಾಯಕಾರಿ. ಈ ಹಿಂದೆ ನಾವು ಬ್ರಿಟಿಷರ ವಿರುದ್ಧ ಹೋರಾಡಬೇಕಾಗಿತ್ತು. ಆ ನಂತರ ನಮ್ಮೊಳಗಿನ ಶತ್ರುಗಳ ಜೊತೆಯೇ ಹೋರಾಡುವಂತಾಯಿತು.

ಗಾಂಧೀಜಿ ತಂದುಕೊಟ್ಟ ಭಾರತವನ್ನು ಉಳಿಸಲು ಯಾರು ಬರಬೇಕು ಎಂಬ ಹಿನ್ನೆಲೆಯೊಂದಿಗೆ ಈ ಸಿನಿಮಾ ಸಾಗುತ್ತದೆಯಂತೆ. ಹಾಗಂತ ಚಿತ್ರದಲ್ಲಿ ಕಮರ್ಷಿಯಲ್ ಅಂಶಗಳಿಗೇನು ಕೊರತೆಯಿಲ್ಲ.ಅಭಿಮಾನಿಗಳು ಇಷ್ಟಪಡುವ ಎಲ್ಲಾ ಅಂಶಗಳು ಈ ಚಿತ್ರದಲ್ಲಿವೆಯಂತೆ. ಸದ್ಯ ಶಿವರಾಜ್ ಕುಮಾರ್ ಅವರ ಭಜರಂಗಿ 2 ಬಹುತೇಕ ಚಿತ್ರೀಕರಣ ಪೂರ್ಣಗೊಂಡಿದೆ.

ಈ ನಡುವೆಯೇ ಆರ್‍ಡಿಎಕ್ಸ್ ಚಿತ್ರಕ್ಕೆ ಮುಹೂರ್ತ ನಡೆದಿದೆ. ಸಿನಿಮಾ ಚಿತ್ರೀಕರಣಕ್ಕೆ ಅನುಮತಿ ಸಿಗುತ್ತಿದ್ದಂತೆ ಶಿವರಾಜ್ ಕುಮಾರ್ ಅವರ ಮತ್ತಷ್ಟು ಚಿತ್ರಗಳು ಚಿತ್ರೀಕರಣಕ್ಕೆ ಅಣಿಯಾಗಲಿದೆ. ಸದ್ಯ ಶಿವರಾಜ್ ಕುಮಾರ್ ಮನೆಯಲ್ಲಿ ವರ್ಕೌಟ್, ವೆಬ್ ಸೀರಿಸ್ ಮೂಲಕ ಟೈಂ ಪಾಸ್ ಮಾಡುತ್ತಿದ್ದಾರೆ. ಜೊತೆಗೆ ಅವರನ್ನು ಹುಡುಕಿಕೊಂಡು ಹೊಸ ಕಥೆಗಳು ಕೂಡಾ ಬರುತ್ತಿವೆ.

ಟಾಪ್ ನ್ಯೂಸ್

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.