ಮಾರ್ಚ್ 1ರಿಂದ ನಂದಿಯಲ್ಲಿ ರಾಜ್ಯ ಮಟ್ಟದ ಶಿವೋತ್ಸವ ಕಾರ್ಯಕ್ರಮ : ಸಚಿವ ಡಾ.ಕೆ.ಸುಧಾಕರ್

Team Udayavani, Feb 23, 2022, 8:29 PM IST

ಮಾರ್ಚ್ 1ರಿಂದ ನಂದಿಯಲ್ಲಿ ರಾಜ್ಯ ಮಟ್ಟದ ಶಿವೋತ್ಸವ ಕಾರ್ಯಕ್ರಮ : ಸಚಿವ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ : ಮೈಸೂರು ದಸರಾ ಹಾಗೂ ಹಂಪಿ ಉತ್ಸವ ರೀತಿ ಚಿಕ್ಕಬಳ್ಳಾಪುರ ತಾಲೂಕಿನ ನಂದಿಯಲ್ಲಿ ಶಿವರಾತ್ರಿ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಏರ್ಪಡಿಸಿದ್ದ ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿಯ ಭೋಗ ನಂದೀಶ್ವರ ಜಾತ್ರೆ ಆಯೋಜನೆ ಕುರಿತ ಪೂರ್ವಭಾವಿ ಸಿದ್ಧತೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಮಾರ್ಚ್01 ರಿಂದ ನಂದಿಯಲ್ಲಿ ಶಿವರಾತ್ರಿಯಂದು ಶಿವೋತ್ಸವ ಕಾರ್ಯಕ್ರಮವನ್ನು ರಾಜ್ಯ ಮಟ್ಟದ ಕಾರ್ಯಕ್ರಮವನ್ನಾಗಿ ಮೈಸೂರು ದಸರಾ ಹಾಗೂ ಹಂಪಿ ಉತ್ಸವದ ರೀತಿ ಆಚರಿಸಲಾಗುವುದು ಇದಕ್ಕೆ ಪೂರ್ವ ಭಾವಿಯಾಗಿ ಈ ಸಾಲಿನಲ್ಲಿಯೂ ಹಲವು ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ವಿಜೃಂಭಣೆ ಹಾಗೂ ಭಕ್ತಿಪೂರ್ವಕವಾಗಿ ಆಚರಿಸಲು ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ ಎಂದರು.

ಮಾರ್ಚ್ 01 ರಂದು ಸಂಜೆ 6 ಗಂಟೆಗೆ ಕಾರ್ಯಕ್ರಮಗಳು ಆರಂಭವಾಗಿ ರಾತ್ರಿಯಿಡೀ ನಡೆಯಲಿವೆ ಅಂದು ಸರಿಗಮಪ ಖ್ಯಾತಿಯ ಹೆಸರಾಂತ ಕಲಾವಿದರು ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಹೆಸರಾಂತ ಹಾಸ್ಯ ಕಲಾವಿದರಿಂದ ನಗೆ ಹಬ್ಬ ನಡೆಯಲಿದೆ. ಕೇರಳದ ಖ್ಯಾತ ಚಂಡೆವಾದಕರಿಂದ ವಾದನ ಕಾರ್ಯಕ್ರಮ ಇರಲಿದೆ ಜೊತೆಗೆ ಹರಿಕಥೆ, ಭಜನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಂದಿಯಲ್ಲಿ ಮೇಳೈಸಲಿವೆ. ಇದಲ್ಲದೆ ಸ್ಥಳೀಯ ಕಲೆಗಳನ್ನು ಪೆÇ್ರೀತ್ಸಾಹಿಸಲು ಹೆಚ್ಚು ಒತ್ತು ನೀಡಿ, ಶಿವರಾತ್ರಿ ದಿನದ ಜಾಗರಣೆಯಂದು ಸ್ಥಳೀಯ ಕಲಾತಂಡಗಳಿಂದಲೂ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದಿನಂತೆ ದನಗಳ ಜಾತ್ರೆ ನಡೆಸಿ ರಾಸು ಪ್ರದರ್ಶನಕ್ಕೂ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದರು.

ಇದನ್ನೂ ಓದಿ : ಅಭಿವೃದ್ಧಿ ಹೆಸರಿನಲ್ಲಿ ಜನರ ದಿಕ್ಕು ತಪ್ಪಿಸುವ ಕೆಲಸವಾಗುತ್ತಿದೆ : ವಿನಯ್ ಶ್ಯಾಮ್ ವಾಗ್ದಾಳಿ

ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ ಗ್ರಾಮದಲ್ಲಿ ಮಾರ್ಚ್ 01 ಮತ್ತು 02 ರಂದು ನಡೆಯುವ ಶಿವರಾತ್ರಿ ಪ್ರಯುಕ್ತ ಭೋಗ ನಂದೀಶ್ವರ ಜಾತ್ರೆಯು ಜಿಲ್ಲೆಗೆ ಮಹತ್ವದಾಗಿದ್ದು, ನಂದಿ ಎಂಬುದು ಪ್ರಾಚೀನ ದೇವಸ್ಥಾನವಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯನ್ನು ಪಡೆದಿದೆ. ಇಂತಹ ಐತಿಹ್ಯವುಳ್ಳ ಜಾತ್ರೆಯನ್ನು ಸಡಗರದಿಂದ ಆಚರಿಸಲು ದೇವಾಲಯಕ್ಕೆ ವಿಶೇಷ ದೀಪಾಲಂಕಾರ, ಹಣ್ಣು ಹಾಗೂ ಹೂವಿನ ಅಲಂಕಾರ ಮಾಡಲಾಗುತ್ತದೆ ಎಂದರು.

ಶಿವೋತ್ಸವ ಜಾತ್ರೆಯಲ್ಲಿ ಭಕ್ತಾಧಿಗಳಿಗಾಗಿ ಕುಡಿಯುವ ನೀರಿನ ಪೂರೈಕೆ, ಅನ್ನ ಸಂತರ್ಪಣೆ ಸೇರಿದಂತೆ ಸ್ವಚ್ಛತೆಗೆ ಯಾವುದೇ ಲೋಪವಾಗದಂತೆ ಕ್ರಮ ತೆಗದುಕೊಳ್ಳಬೇಕು, ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ಜಾತ್ರಾ ಪ್ರಯುಕ್ತ ಹೆಚ್ಚಿನ ಬಸ್‍ಗಳ ವ್ಯವಸ್ಥೆ ಮಾಡಬೇಕು. ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಹಾಗೂ ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಪ್ರದರ್ಶನಕ್ಕಾಗಿ ಮತ್ತು ವಿವಿಧ ಮಹಿಳಾ ಸ್ವಸಹಾಯ ಸಂಘಗಳು ತಯಾರಿಸುವ ಆಹಾರೋತ್ಪನ್ನಗಳನ್ನು ಪ್ರದರ್ಶಿಸುವ ಉದ್ದೇಶಕ್ಕಾಗಿ ವಿವಿಧ ರೀತಿಯ ಮಳಿಗೆಗಳನ್ನು ತೆರೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಅವರು, ನಂದಿ ಜಾತ್ರೆಯನ್ನು ಈ ಬಾರಿ ಸುಸಜ್ಜಿತವಾಗಿ ಹಾಗೂ ಭಕ್ತಿಪೂರ್ವಕವಾಗಿ ಆಯೋಜಿಸಲು ಹಲವು ಸಮಿತಿಗಳನ್ನು ರಚಿಸಿ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಾರ್ಯಾಭಾರ ಹಂಚಿಕೆ ಮಾಡಿದರು. ಆಹಾರ, ಪ್ರಚಾರ, ರಿಸೆಪ್ಷನ್, ಹೂವು ಮತ್ತು ದೀಪಾಂಕಾರ, ಸನ್ಮಾನ, ಹೆಲ್ಪ್ ಡೆಸ್ಕ್ ,ಸಾರಿಗೆ ವ್ಯವಸ್ಥೆ ,ವೇದಿಕೆ ಸಿದ್ಧತೆಗಾಗಿ ವಿವಿಧ ಸಮಿತಿಗಳನ್ನು ರಚಿಸಿ ಸಮಿತಿಗೆ ಒಬ್ಬರನ್ನು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಮುಖ್ಯಸ್ಥರನ್ನಾಗಿ ನೇಮಕ ಮಾಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಎಚ್.ಅಮರೇಶ್, ಡಿವೈಎಸ್ಪಿ ವಾಸುದೇವ್, ಉಪವಿಭಾಗಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್,ಜಿಲ್ಲಾ ಆರೋಗ್ಯಾಧಿಕಾರಿ ಡಾ.ಇಂದಿರಾ ಆರ್ ಕಬಾಡೆ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು. ಸಭೆಯಲ್ಲಿ ಫೆಬ್ರವರಿ 27 ರಂದು ನಡೆಯಲಿರುವ ಪೋಲಿಯೋ ಲಸಿಕಾಕರಣ ಸಂಬಂಧ ಕರಪತ್ರಗಳನ್ನು ಸಚಿವರು ಬಿಡುಗಡೆ ಮಾಡಿದರು.

ಟಾಪ್ ನ್ಯೂಸ್

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.