ಮೈ ಮರೆತು ದಂಗಾದ ಕಾಂಗ್ರೆಸ್‌ ನಾಯಕರು

Team Udayavani, Jul 2, 2019, 3:07 AM IST

congress-logo

ಬೆಂಗಳೂರು: ಇಬ್ಬರು ಪಕ್ಷೇತರರನ್ನು ಸಂಪುಟಕ್ಕೆ ಸೇರಿಸಿಕೊಂಡು ಸರ್ಕಾರ ಭದ್ರಪಡಿಸಿದ್ದೇವೆ ಎಂದು ಹೆಮ್ಮೆಯಿಂದ ಮೈ ಮರೆತು ತಿರುಗಾಡುತ್ತಿದ್ದ ಕಾಂಗ್ರೆಸ್‌ ನಾಯಕರಿಗೆ ಅಪಶಕುನ ಶುರುವಾದಂತಿದೆ. ಇದರ ಬೆನ್ನಲ್ಲೇ ಪಕ್ಷದಲ್ಲಿಯೇ ಅನುಮಾನದ ಹೊಗೆಯೂ ಆಡುತ್ತಿದೆ.

ಪಕ್ಷದಲ್ಲಿ ಕಳೆದ ಆರು ತಿಂಗಳಿನಿಂದ ಬಂಡಾಯ ಶಾಸಕರು ಮೇಲಿಂದ ಮೇಲೆ ರಾಜೀನಾಮೆ ಎಚ್ಚರಿಕೆ ನೀಡುತ್ತಿದ್ದರೂ, ಅತೃಪ್ತರನ್ನು ಕಡೆಗಣಿಸಿ, ಪಕ್ಷೇತರ ಶಾಸಕರಿಗೆ ಮಣೆ ಹಾಕಿದ್ದು, ಅತೃಪ್ತ ಶಾಸಕರಲ್ಲಿ ಅಸಮಾಧಾನ ಹೆಚ್ಚಾಗುವಂತೆ ಮಾಡಿತ್ತು.

ಆದರೆ, ತಕ್ಷಣವೇ ನಾಯಕರ ತಂತ್ರಕ್ಕೆ ಪ್ರತಿ ತಂತ್ರ ರೂಪಿಸದೇ ತೆರೆ ಮರೆಯಲ್ಲಿಯೇ ಕಾರ್ಯತಂತ್ರ ರೂಪಿಸಿರುವ ಅತೃಪ್ತ ಶಾಸಕರು ರಾಜಿನಾಮೆ ಪರ್ವ ಆರಂಭಿಸಿರುವುದು, ಮೈತ್ರಿ ಸರ್ಕಾರದ ಭವಿಷ್ಯವನ್ನು ಡೋಲಾಯಮಾನದಲ್ಲಿ ಇಡುವಂತೆ ಮಾಡಿದೆ.

5 ತಿಂಗಳ ಹಿಂದೆ ಬಜೆಟ್‌ ಅಧಿವೇಶನದ ಸಂದರ್ಭದಲ್ಲಿಯೇ ರಮೇಶ್‌ ಜಾರಕಿಹೊಳಿ ನೇತೃತ್ವದಲ್ಲಿ ಹತ್ತಕ್ಕೂ ಹೆಚ್ಚು ಶಾಸಕರು ಪಕ್ಷದ ನಾಯಕರ ವಿರುದ್ಧ ಬಂಡಾಯವೆದ್ದು ರಾಜೀನಾಮೆ ನೀಡಲು ಮುಂದಾಗಿದ್ದರು. ಆಗ ಮೇಲಿಂದ ಮೇಲೆ ವಿಪ್‌ ಜಾರಿ ಮಾಡಿ, ಬಜೆಟ್‌ ಅನುಮೋದನೆಯ ದಿನ ಅಧಿವೇಶನಕ್ಕೆ ಹಾಜರಾಗುವಂತೆ ಮಾಡುವಲ್ಲಿ ಮೈತ್ರಿ ಪಕ್ಷಗಳ ನಾಯಕರು ಯಶಸ್ವಿಯಾಗಿದ್ದರು.

ಆ ನಂತರ ರಮೇಶ್‌ ಜಾರಕಿಹೊಳಿ ಜೊತೆಗೆ ಗುರುತಿಸಿಕೊಳ್ಳುವ ಶಾಸಕರನ್ನು ಪ್ರತ್ಯೇಕವಾಗಿ ಕರೆದು ಅವರ ಬೇಡಿಕೆಗೆ ಸ್ಪಂದಿಸುವ ಭರವಸೆ ನೀಡುತ್ತ ಕಾಲ ಹರಣ ಮಾಡುತ್ತ ಬಂದರು. ಇದಾದ ನಂತರ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳು ಹೀನಾಯ ಸೋಲು ಕಂಡಾಗ ಸರ್ಕಾರ ಪತನವಾಗುವ ಭೀತಿಯಿಂದ ಸಂಪುಟ ಪುನಾರಚನೆಯ ಪ್ರಯತ್ನಕ್ಕೆ ಕೈ ಹಾಕಿ,

ಇಬ್ಬರು ಪಕ್ಷೇತರರನ್ನು ಮಾತ್ರ ಸೇರಿಸಿಕೊಂಡು ಬಿಜೆಪಿಯ ಆಪರೇಷನ್‌ ಕಮಲಕ್ಕೆ ಬ್ರೇಕ್‌ ಹಾಕಿದ್ದೇವೆ ಎಂದು ರಾಜಕೀಯ ಜಾಣ್ಮೆ ಪ್ರದರ್ಶನ ಮಾಡಿದ್ದೇವೆಂದು ಬೆನ್ನು ತಟ್ಟಿಕೊಂಡಿದ್ದರು. ಕಾಂಗ್ರೆಸ್‌ ನಾಯಕರ ಈ ನಡೆ ಅತೃಪ್ತ ಶಾಸಕರಲ್ಲಿ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು.

ಹೀಗಾಗಿ ಪಕ್ಷದ ನಾಯಕರ ವಿರುದ್ಧ ಸಿಡಿದೇಳಲು ಸೂಕ್ತ ಸಮಯಕ್ಕಾಗಿ ಕಾಯುತ್ತಿದ್ದರು. ಬಂಡಾಯಗಾರರು ರಾಜೀನಾಮೆಗೆ ನಿರ್ಧರಿಸುವ ಮೊದಲೇ ಆನಂದ್‌ಸಿಂಗ್‌ ರಾಜಿನಾಮೆ ನೀಡುವ ಮೂಲಕ ಕೈ ನಾಯಕರಿಗೆ ಶಾಕ್‌ ನೀಡಿದ್ದು, ಇದು ಕಾಂಗ್ರೆಸ್‌ ಪಾಳಯದಲ್ಲಿ ಹಲವು ರೀತಿಯ ಚರ್ಚೆಗೆ ಗ್ರಾಸವಾಗಿದೆ.

ಕನಿಷ್ಠ ಆರು ತಿಂಗಳು ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ ಎಂದುಕೊಂಡಿದ್ದ ಕಾಂಗ್ರೆಸ್‌ ನಾಯಕರಿಗೆ ದಿಢೀರ್‌ ಬೆಳವಣಿಗೆ ಮಳೆಗಾಲದ ಅಧಿವೇಶನಕ್ಕೂ ಮುನ್ನವೇ ಸರ್ಕಾರದ ಪತನಕ್ಕೆ ನಾಂದಿ ಹಾಡಲಿದೆಯಾ ಎಂಬ ಚರ್ಚೆಗೆ ಗ್ರಾಸವಾಗಿದೆ. ಆದರೆ, ಬಿಜೆಪಿಗೆ ಬೇಕಾದಷ್ಟು ಶಾಸಕರು ರಾಜೀನಾಮೆ ನೀಡುವುದಿಲ್ಲ ಎನ್ನುವ ಸಮಾಧಾನದ ನಡುವೆಯೇ ಕೈ ನಾಯಕರು ಅತೃಪ್ತರನ್ನು ಉಳಿಸಿಕೊಳ್ಳುವ ಕಸರತ್ತು ಆರಂಭಿಸಿದ್ದಾರೆ.

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಮತ್ತು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಬಿಟ್ಟರೆ ಬೇರೆ ಯಾರಿಗೂ ಮೈತ್ರಿ ಸರ್ಕಾರ ಮುಂದುವರೆಯುವುದು ಬೇಕಾಗಿಲ್ಲ ಎಂಬ ಅಭಿಪ್ರಾಯ ಕಾಂಗ್ರೆಸ್‌ ವಲಯದಲ್ಲಿ ಕೇಳಿ ಬರುತ್ತಿದೆ. ಸರ್ಕಾರ ಮುಂದುವರೆಸಿದಷ್ಟು ಪಕ್ಷಕ್ಕೆ ಹಾನಿಯೇ ಹೆಚ್ಚು ಎಂಬ ಅಭಿಪ್ರಾಯ ಬಹುತೇಕ ನಾಯಕರಲ್ಲಿ ಮೂಡಿದ್ದು,

ಇತ್ತೀಚೆಗೆ ನಡೆದ ಪಕ್ಷದ ಹಿರಿಯ ನಾಯಕರ ಸಭೆಯಲ್ಲಿಯೂ ಈ ರೀತಿಯ ಅಭಿಪ್ರಾಯ ವ್ಯಕ್ತವಾಗಿತ್ತು. ಅದೇ ಕಾರಣಕ್ಕೆ ಶಾಸಕರ ರಾಜಿನಾಮೆ ಪರ್ವಕ್ಕೆ ಚಾಲನೆ ದೊರೆತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಸದ್ಯ ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವದ ಸಮಸ್ಯೆ ಎದುರಾಗಿದ್ದು, ಸಿದ್ದರಾಮಯ್ಯ ಮತ್ತೆ ಪಕ್ಷವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳಲು ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಅದರ ಒಂದು ಭಾಗವಾಗಿಯೇ ಶಾಸಕರ ರಾಜಿನಾಮೆ ಪರ್ವ ಆರಂಭವಾಗಿದೆ ಎನ್ನಲಾಗಿದ್ದು, ಅತೃಪ್ತರನ್ನು ಉಳಿಸಿಕೊಳ್ಳುವ ನೆಪದಲ್ಲಿ ಸಿದ್ದರಾಮಯ್ಯ ಎಲ್ಲವನ್ನೂ ತಮ್ಮ ಹಿಡಿತಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂಬ ಮಾತುಗಳು ಕಾಂಗ್ರೆಸ್‌ ವಲಯದಲ್ಲಿ ಕೇಳಿ ಬರುತ್ತಿವೆ.

* ಶಂಕರ ಪಾಗೋಜಿ

ಟಾಪ್ ನ್ಯೂಸ್

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

GParameshwar

ಹೈಕಮಾಂಡ್‌ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್‌

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.