Neha Hiremath Case: ಹಂತಕನನ್ನು ಗುಂಡಿಟ್ಟು ಕೊಲ್ಲಿ: ಕೆ.ಎಸ್.ಈಶ್ವರಪ್ಪ
Team Udayavani, Apr 20, 2024, 11:14 PM IST
ಶಿವಮೊಗ್ಗ,: ಹುಬ್ಬಳ್ಳಿಯಲ್ಲಿ ಹಿಂದೂ ಯುವತಿಯ ಕೊಂದವನಿಗೆ ಕಠಿನ ಶಿಕ್ಷೆ ಆಗಬೇಕು. ಸರಕಾರ ಅವನನ್ನು ನೇಣಿಗೆ ಹಾಕಬೇಕು, ಅಥವಾ ಗುಂಡಿಟ್ಟು ಕೊಲ್ಲಬೇಕು. ಹಾಗೆ ಮಾಡಿದರೆ ಮಾತ್ರ ಹಿಂದೂಗಳಿಗೆ ಸ್ವಲ್ಪ ಸಮಾಧಾನ ಆಗುತ್ತದೆ ಎಂದು ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಲೆ ಮಾಡಿದರೂ, ಯಾರಿಗೆ ಚಾಕು ಹಾಕಿದರೂ ಕಾಂಗ್ರೆಸ್ ಸರಕಾರ ನಮಗೆ ರಕ್ಷಣೆ ಕೊಡುತ್ತದೆ ಎಂಬ ಧೈರ್ಯ ಮುಸ್ಲಿಂ ಗೂಂಡಾಗಳಿಗೆ ಬಂದಿದೆ. ಇದರಿಂದಾಗಿಯೇ ಅವರು ಅಟ್ಟಹಾಸ ಮೆರೆಯುತ್ತಿದ್ದಾರೆ. ಆದರೆ ಹಿಂದೂ ಸಮಾಜ ಜಾಗೃತವಾದರೆ ಈ ಸರಕಾರ ಉಳಿಯದು ಎಂದರು.
ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ಹತ್ಯೆಯಾಗಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ಸರಕಾರ ನಿರ್ಲಕ್ಷ್ಯ ದ ಉತ್ತರ ನೀಡುತ್ತಿದೆ. ರಾಜ್ಯದಲ್ಲಿ ಈ ರೀತಿಯ ದುರ್ಘಟನೆಗಳು ನಡೆದಾಗ ರಾಜ್ಯ ಸರಕಾರ ಹಿಂದೂ ವಿರೋಧಿ ಎಂಬಂತೆ ವರ್ತಿಸುತ್ತಿದೆ. ಹಿಂದೂ ಸಮಾಜ ಹರಿಸುವ ಒಂದು ಹನಿ ರಕ್ತವೂ ನಿಮ್ಮ ಅಧಿ ಕಾರವನ್ನೇ ಕಿತ್ತುಕೊಳ್ಳಬಹುದು ಎಂದು ಖಡಕ್ ಎಚ್ಚರಿಕೆ ನೀಡಿದರು.
ಹುಬ್ಬಳ್ಳಿ, ಬೆಂಗಳೂರು, ಚನ್ನಗಿರಿ ಪ್ರಕರಣವನ್ನು ಖಂಡಿಸಿ ರಾಷ್ಟ್ರಭಕ್ತರ ಬಳಗದಿಂದ ಎ.22ರಂದು ಬೆಳಗ್ಗೆ 10ಕ್ಕೆ ನಗರದ ದೈವಜ್ಞ ಕಲ್ಯಾಣ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದೂ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.