Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್
4ರ ಬದಲು 8 ಮಂದಿಗೆ ಸೇವೆಯ ಅವಕಾಶ
Team Udayavani, May 5, 2024, 6:50 AM IST
ಬಂಟ್ವಾಳ: ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ 23 ಸಾವಿರಕ್ಕೂ ಅಧಿಕ ಕೋಲ ಸೇವೆಗಳ ಬುಕ್ಕಿಂಗ್ ಇರುವುದರಿಂದ ಭಕ್ತರಿಗೆ ಶೀಘ್ರ ಸೇವೆ ಸಂದಾಯದ ಅವಕಾಶದ ಹಿನ್ನೆಲೆಯಲ್ಲಿ ಪ್ರತೀ ದಿನ ನಡೆಯುತ್ತಿದ್ದ ಕೋಲ ಸೇವೆಯಲ್ಲಿ 4 ಬದಲಿಗೆ 8 ಮಂದಿಗೆ ಸೇವೆ ಸಂದಾಯಕ್ಕೆ ಮೇ 3ರಿಂದ ಅವಕಾಶ ನೀಡಲಾಗಿದೆ.
ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಹಾಗೂ ಕೋಲ ಸೇವೆಗಳು ವಿಶೇಷವಾಗಿದ್ದು, ವಾರದ 3 ದಿನ ಅಗೇಲು ಹಾಗೂ ವಾರದ 5 ದಿನ ಕೋಲ ಸೇವೆ ಸಂದಾಯವಾಗುತ್ತದೆ. ಬೆಳಗ್ಗೆ ನಿಗದಿತ ಸಮಯದೊಳಗೆ ಬಂದವರಿಗೆ ಎಷ್ಟು ಬೇಕಾದರೂ ಅಗೇಲು ಸೇವೆ ನೀಡುವುದಕ್ಕೆ ಅವಕಾಶವಿದ್ದು, ಆದರೆ ಈ ಹಿಂದೆ ದಿನವೊಂದಕ್ಕೆ ಕೋಲ ಸೇವೆ ನೀಡುವುದಕ್ಕೆ ಬರೀ ನಾಲ್ವರಿಗೆ ಮಾತ್ರ ಅವಕಾಶವಿತ್ತು.
ಆದರೆ ಕೋಲ ಸೇವೆಗಳ ಬುಕ್ಕಿಂಗ್ ಹೆಚ್ಚಿದ್ದು, ಲೆಕ್ಕಾಚಾರ ಹಾಕಿದರೆ ಅದು ಪೂರ್ಣಗೊಳುವುದಕ್ಕೆ ಕನಿಷ್ಠ 35 ವರ್ಷ ಬೇಕಾಗುತ್ತದೆ ಎಂದು ಅಂದಾಜಿಸಲಾಗಿತ್ತು. ಸೋಮವಾರ ಹಾಗೂ ಶನಿವಾರ ಹೊರತುಪಡಿಸಿ ವಾರದಲ್ಲಿ 5 ದಿನ ಕೋಲ ಸೇವೆಗೆ ಅವಕಾಶವಿದ್ದರೂ ತುಳುವಿನ ಆಟಿ ತಿಂಗಳು, ಅಮಾವಾಸ್ಯೆ, ಷಷ್ಠಿ, ಸಜೀಪ ಮಾಗಣೆಯ ಜಾತ್ರೆ, ಉತ್ಸವ ಮೊದಲಾದ ಸಂದರ್ಭ ಕೋಲ ಸೇವೆ ಇರುವುದಿಲ್ಲ. ಹೀಗಾಗಿ ವರ್ಷಕ್ಕೆ 600-700 ಮಂದಿಗೆ ಮಾತ್ರ ಕೋಲ ಸೇವೆಗೆ ಅವಕಾಶ ಸಿಗುತ್ತಿತ್ತು.
ಹೀಗಾಗಿ ಭಕ್ತರಿಗೆ ಶೀಘ್ರ ಸೇವೆಗೆ ಅವಕಾಶ ಸಿಗುವ ದೃಷ್ಟಿಯಿಂದ ದೈವದ ಬಳಿ ಹರಕೆ ಮಾಡಿ ಮಾಗಣೆಯ ದೈವದ ಅಪ್ಪಣೆ ಪಡೆದು ದಿನಕ್ಕೆ 4 ಕೋಲ ಸೇವೆ ನೀಡಿದರೂ ಪ್ರತೀ ಕೋಲದಲ್ಲಿ ಇಬ್ಬರಿಗೆ ಪ್ರಸಾದದಂತೆ 8 ಮಂದಿಗೆ ಪ್ರಸಾದ ನೀಡುವುದಕ್ಕೆ ನಿರ್ಧರಿಸಲಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಕೋಲ ಸೇವೆ ನೀಡಲು ಬುಕ್ಕಿಂಗ್ ಮಾಡಿದವರಿಗೆ ಶೀಘ್ರ ಅವಕಾಶ ಸಿಗಲಿದೆ ಎಂದು ಪಣೋಲಿಬೈಲು ಕ್ಷೇತ್ರದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.