ಏಕಕಾಲಕ್ಕೆ 9,201ಶ್ರದ್ಧಾ ಕೇಂದ್ರಗಳ ಶುಚಿತ್ವ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
Team Udayavani, Jan 16, 2022, 6:35 AM IST
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆ ಅವರ ಆಶಯದಂತೆ ಮಕರ ಸಂಕ್ರಾಂತಿಯಂದು “ನಮ್ಮೂರು ನಮ್ಮ ಶ್ರದ್ಧಾಕೇಂದ್ರ’ ಕಾರ್ಯಕ್ರಮದಡಿ ರಾಜ್ಯದ 9,201ಕ್ಕೂ ಹೆಚ್ಚು ಧಾರ್ಮಿಕ ಶ್ರದ್ಧಾಕೇಂದ್ರಗಳ ಸ್ವಚ್ಛತೆಯ ಮಹಾ ಅಭಿಯಾನವನ್ನು ಯಶಸ್ವಿಗೊಳಿಸಿದೆ ಎಂದು ಯೋಜನೆಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ| ಎಲ್.ಎಚ್. ಮಂಜುನಾಥ ಅವರು ತಿಳಿಸಿದ್ದಾರೆ.
ಧಾರ್ಮಿಕ ಕೇಂದ್ರಗಳು ಮನುಕುಲಕ್ಕೆ ಬದುಕುವ ರೀತಿಯನ್ನು ತಿಳಿಸುವ ಕೇಂದ್ರಗಳೂ ಆಗಿವೆ.ಸ್ವಚ್ಛತೆಯ ಪರಿಕಲ್ಪನೆ ಇಲ್ಲಿಂದ ಆರಂಭಗೊಂಡರೆ ರಾಜ್ಯದ ಪ್ರತೀ ಮನೆಯಲ್ಲಿಯೂ ಜಾಗೃತಿ ಮೂಡಿಸಬಹುದೆಂದು ಡಾ| ಹೆಗ್ಗಡೆಯವರು 2016ರಲ್ಲಿ “ಸ್ವಚ್ಛ ಶ್ರದ್ಧಾ ಕೇಂದ್ರ’ ಪರಿಕಲ್ಪನೆಗೆ ಚಾಲನೆ ನೀಡಿದ್ದರು. 5 ವರ್ಷಗಳಿಂದ ವರ್ಷಕ್ಕೆ 2 ಬಾರಿಯಂತೆ ಸಾಮುದಾಯಿಕ ಸ್ವಚ್ಛತಾ ಕಾರ್ಯಕ್ರಮವನ್ನು ರಾಜ್ಯಾದ್ಯಂತ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಸಹಸ್ರಾರು ಮಂದಿ ಸಹಕಾರ
ಅಭಿಯಾನದಲ್ಲಿ ಶ್ರದ್ಧಾ ಕೇಂದ್ರಗಳ ಆಡಳಿತ ಮಂಡಳಿಗಳು, ಒಕ್ಕೂಟದ ಪದಾಧಿಕಾರಿಗಳು, ಸ್ಥಳೀಯ ಜನಜಾಗೃತಿ ಸದಸ್ಯರು, ಸ್ವಚ್ಛತಾ ಸೇನಾನಿಗಳು, ಶೌರ್ಯ ವಿಪತ್ತು ನಿರ್ವಹಣೆಯ ಸ್ವಯಂ ಸೇವಕರು, ನವಜೀವನ ಸಮಿತಿ ಸದಸ್ಯರು, ಊರ ಗಣ್ಯರು, ಗ್ರಾಮ ಪಂಚಾಯತ್ ಸದಸ್ಯರು, ಸಂಘ-ಸಂಸ್ಥೆಗಳ ಸದಸ್ಯರು, ಗ್ರಾಮಾಭಿವೃದ್ಧಿ ಯೋಜನೆಯ ಎಲ್ಲ ಕಾರ್ಯಕರ್ತರು ಕೈ ಜೋಡಿಸಿದ್ದರು.
ಇದನ್ನೂ ಓದಿ:ರೈತರಿಗಿದೆ ಸರ್ಕಾರದ ಸಾಲ ತೀರಿಸುವ ಸಾಮರ್ಥ್ಯ
ಅಭಿಯಾನದಲ್ಲಿ ..
-ದೇವಸ್ಥಾನದ ಸುತ್ತಲಿನ ಗಿಡಗಂಟಿ ತೆರವು
-ಮಂದಿರ, ಚರ್ಚ್, ಮಸೀದಿಗಳ ಒಳಾಂಗಣ ಆವರಣ ಸ್ವಚ್ಛತೆ
-ದೇವಸ್ಥಾನದ ಕಲ್ಯಾಣಿ, ಸಭಾಭವನ, ಅಶ್ವತ್ಥ ಕಟ್ಟೆ/ಅರಳಿಕಟ್ಟೆ ಸ್ವಚ್ಛ
-ಸ್ನಾನಕಟ್ಟೆ, ನದಿ ತೀರ ಪ್ಲಾಸ್ಟಿಕ್, ಬಟ್ಟೆಬರೆ ಕಸ ಎಸೆಯದಂತೆ ಜಾಗೃತಿ
-ಸಾರ್ವಜನಿಕ ಶೌಚಾಲಯ, ನಗರ ಸ್ವಚ್ಛತೆ, ಬೀದಿ ಸ್ವಚ್ಛತೆಗೆ ಒತ್ತು
-ವಸ್ತ್ರದ ಚೀಲ ಬಳಸುವಂತೆ ಜಾಗೃತಿ
-ಜಾತ್ರೆ, ವಿಶೇಷ ಕಾರ್ಯಕ್ರಮದಲ್ಲಿ ಸ್ವಚ್ಛತೆಗೆ ತಂಡ
-ತ್ಯಾಜ್ಯ ಎಸೆಯಲು ಬಿದಿರಿನ ಬುಟ್ಟಿ, ಡಸ್ಟ್‌ಬಿನ್, ತಗಡಿನ ಡಬ್ಬ ಸೂಚನೆ ಫಲಕ ಅಳವಡಿಕೆ
ಶ್ರದ್ಧಾ ಕೇಂದ್ರಗಳು
– ದೇವಸ್ಥಾನ 8,824
-ಚರ್ಚ್ 68 ಮಸೀದಿ 151
– ಬಸದಿ 20 ಇತರ 138
ಒಟ್ಟು 9,201
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.