ನಡುಗಡ್ಡೆಯಲ್ಲಿ ಸಿಲುಕಿದ ನಗರಗಡ್ಡಿ ಶ್ರೀ ಶಿವಶಾಂತವೀರ ಸ್ವಾಮೀಜಿ
ಮಠದ ಜಾನುವಾರು ರಕ್ಷಣೆಗೆ ತೆರಳಿದ ಸ್ವಾಮೀಜಿ
Team Udayavani, Aug 11, 2019, 7:11 PM IST
ಕೊಪ್ಪಳ: ಜಾನುವಾರುಗಳ ರಕ್ಷಣೆಗೆಂದು ತೆರಳಿದ ನಗರಗಡ್ಡಿ ಮಠದ ಶ್ರೀ ಶಿವಶಾಂತವೀರ ಸ್ವಾಮೀಜಿಗಳು ತುಂಗಭದ್ರಾ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯಲು ಬಿಟ್ಟ ಪರಿಣಾಮ ತಾಲೂಕಿನ ಶಿವಪುರ ಸಮೀಪದ ನಡುಗಡ್ಡೆಯಲ್ಲಿ ಸಿಲುಕಿದ್ದಾರೆ.
ನಗರಗಡ್ಡಿ ಮಠವು ತುಂಗಭದ್ರಾ ನೀರು ಹರಿಯುವ ಮಧ್ಯದ ಗುಡ್ಡದ ಪ್ರದೇಶವಾಗಿದೆ .ಜಲಾಶಯದ ನೀರನ್ನು ನದಿಗೆ ಬಿಟ್ಟ ಪರಿಣಾಮ ಈ ಪ್ರದೇಶವು ನಡುಗಡ್ಡೆಯಂತಾಗಿರುತ್ತದೆ. ಈ ಬಾರಿ ನೀರನ್ನು ಹೆಚ್ಚಿನ ಪ್ರಮಾಣದಲ್ಲಿ ಹರಿ ಬಿಟ್ಟ ಹಿನ್ನೆಲೆಯಲ್ಲಿ ಮಠವು ನಡುಗಡ್ಡೆಯಾಗಿದೆ.
ಶನಿವಾರ ಸಂಜೆ ಮಠದಲ್ಲಿನ ಏಳು ಜಾನುವಾರುಗಳನ್ನು ರಕ್ಷಣೆ ಮಾಡಲು ತೆರಳಿದ್ದ ಸ್ವಾಮೀಜಿಗಳು ನದಿಯ ನೀರು ಹೆಚ್ಚಾಗಿದ್ದರಿಂದ
ಭಾನುವಾರ ತೆರಳೋಣವೆಂದು ಮಠದಲ್ಲಿಯೇ ಉಳಿದುಕೊಂಡಿದ್ದರು. ಆದರೆ ಮಠದ ಸುತ್ತಲೂ ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿಯುತ್ತಿರುವುದರಿಂದ ನಡುಗಡ್ಡೆಯಲ್ಲೇ ಸಿಲುಕಿದ್ದಾರೆ.
ಮಠವು ಗುಡ್ಡದಲ್ಲಿ ಎತ್ತರ ಪ್ರದೇಶದಲ್ಲಿರುವುದರಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಈ ಕುರಿತಂತೆ ಕೊಪ್ಪಳ ತಹಸೀಲ್ದಾರ್ ಜೆ.ಬಿ. ಮಜ್ಜಗಿ ಸೇರಿದಂತೆ ಮುನಿರಾಬಾದ್ ಪೊಲೀಸ್ ಠಾಣೆಯ ಪಿಎಸ್‌ಐ ಮಠಕ್ಕೆ ತೆರಳಿ ಸುರಕ್ಷಿತ ಸ್ಥಳಕ್ಕೆ ಧಾವಿಸುವಂತೆ ಶ್ರೀಗಳಿಗೆ ಮನವಿ ಮಾಡಿದ್ದರು.
ಆದರೆ ಜಾನುವಾರು ಸಮೇತ ಬರುವುದಾಗಿ ಸ್ವಾಮೀಜಿ ಹೇಳಿದ್ದರು. ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಪ್ರಸ್ತುತ ಮಠದಲ್ಲಿಯೇ ಶ್ರೀಗಳು ಸುರಕ್ಷಿತವಾಗಿ ಉಳಿದುಕೊಂಡಿದ್ದಾರೆ. ನೀರಿನ ಹರಿವಿನ ಪ್ರಮಾಣ ಕಡಿಮೆಯಾದ ಬಳಿಕವಷ್ಟೆ ಶ್ರೀಗಳಿಗೆ ಜನವಸತಿ ಪ್ರದೇಶಕ್ಕೆ ಸಂಪರ್ಕ ಸಿಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.