Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
ಕಾಂಗ್ರೆಸ್ ಹೆಚ್ಚು ಮತ ಗಳಿಸಿದ್ದು , ನಾನು 2ನೇ ಬಾರಿ ಸಿಎಂ ಆದದ್ದು ಕಾರಣ
Team Udayavani, Jul 27, 2024, 7:00 AM IST
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ನಮಗೆ ಹಿಂದಿನ ಬಾರಿ ಗಿಂತ ಹೆಚ್ಚು ಸ್ಥಾನ ಬಂದಿರುವುದಷ್ಟೇ ಅಲ್ಲದೆ ಶೇ. 13ರಷ್ಟು ಹೆಚ್ಚು ಮತ ಗಳಿಸಿದ್ದೇವೆ. ಇದರಿಂದ ಹತಾಶರಾಗಿ ಬಿಜೆಪಿ ಮತ್ತು ಜೆಡಿಎಸ್ ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್‌ಗೆ ಕಡಿಮೆ ಸ್ಥಾನ ಬಂದಿದೆ. ಹೀಗಾಗಿ ಮುಖ್ಯಮಂತ್ರಿಯ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ನಾನು ಎರಡನೇ ಬಾರಿ ಸಿಎಂ ಆಗಿರುವುದನ್ನು ಅವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನನ್ನ ವಿರುದ್ಧ ಷಡ್ಯಂತ್ರ ಮಾಡುತ್ತಿವೆ ಎಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ವಾಗ್ಧಾಳಿ ನಡೆಸಿದರು.
ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ಪ್ರತೀ ಪುಟವೂ ಪಾರದರ್ಶಕ ಮತ್ತು ಪ್ರಾಮಾಣಿಕ. ಸಣ್ಣದೊಂದು ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯದ ಪಾವಿತ್ರ್ಯ ಕಾಪಾಡಿಕೊಂಡಿದ್ದೇನೆ. ಆದರೆ ವಿಪಕ್ಷಗಳು ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಸಂಚು ನಡೆಸಿವೆ ಎಂದು ಸಿಎಂ ಆಪಾದಿಸಿದರು.
ವಿಪಕ್ಷ ನಾಯಕರು ಹತಾಶರಾಗಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ನಾವು 135 ಸ್ಥಾನ ಗೆದ್ದ ಬಳಿಕ ರಾಜಕೀಯ ಪ್ರೇರಿತ ಹೇಳಿಕೆ ಕೊಡುತ್ತಿದ್ದಾರೆ. ನಾನು ಸಚಿವನಾಗಿ 40 ವರ್ಷ ಆಯಿತು.
ಡಿಸಿಎಂ, ವಿಪಕ್ಷ ನಾಯಕ, ಮುಖ್ಯ ಮಂತ್ರಿಯಾಗಿ ಈ ವರೆಗೆ ನನ್ನ ಮೇಲೆ ಸಣ್ಣ ಕಪ್ಪುಚುಕ್ಕೆ ಇಲ್ಲ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ಆದರೆ ಜನರ ವಿಶ್ವಾಸ ಕಳೆದುಕೊಂಡಿರುವ ಬಿಜೆಪಿ ಹಾಗೂ ಜೆಡಿಎಸ್ ಸದನದೊಳಗೆ ಹಾಗೂ ಹೊರಗೆ ನನ್ನ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಅಧಿವೇಶನದಲ್ಲಿ ಎರಡು ವಾರ ವಾಲ್ಮೀಕಿ ನಿಗಮದ ಒಂದೇ ವಿಷಯ ಪ್ರಸ್ತಾವ ಆಗಿದೆ. ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ವಿಪಕ್ಷದವರು ಚರ್ಚೆ ಮಾಡಬೇಕಿತ್ತು. ಆದರೆ ಆ ಬಗ್ಗೆ ಅವರು ಗಮನ ನೀಡದೆ ಇದ್ದುದರಿಂದ ಪ್ರವಾಹದಿಂದ ಸೃಷ್ಟಿಯಾದ ಸಮಸ್ಯೆಗಳ ಬಗ್ಗೆ ಆಡಳಿತ ಪಕ್ಷದವರು ಬೆಳಕು ಚೆಲ್ಲಿದರು. ನೆಪ ಮಾತ್ರಕ್ಕೂ ರಾಜ್ಯದ ಜನರ ಸಂಕಷ್ಟಗಳ ಬಗ್ಗೆ ವಿಪಕ್ಷ ಸದಸ್ಯರು ಚಕಾರ ಎತ್ತಲಿಲ್ಲ. ಅಧಿವೇಶನದಲ್ಲಿ ವಿಪಕ್ಷ ಸದಸ್ಯರು ಹೊಣೆಗೇಡಿತನ ಪ್ರದರ್ಶನ ಮಾಡಿದ್ದಾರೆ ಎಂದು ಆರೋಪಿಸಿದರು.
ಅರ್ಹತೆ ಇರುವವರಿಂದ ಸಿಎಂ ಸ್ಥಾನಕ್ಕೆ “ಟವೆಲ್’
ನಮ್ಮ ಪಕ್ಷದಲ್ಲಿ ಅರ್ಹತೆ ಇರು ವವ ರೆಲ್ಲ ಮುಖ್ಯಮಂತ್ರಿ ಕುರ್ಚಿಯ ಮೇಲೆ “ಟವೆಲ್’ ಹಾಕುತ್ತಾರೆ ಎಂದು ಸಿದ್ದರಾಮಯ್ಯ ಹಾಸ್ಯ ಚಟಾಕಿ ಹಾರಿಸಿದರು. ಸಿಎಂ ಕುರ್ಚಿ ಮೇಲೆ ಟವೆಲ್ ಹಾಕಿದವರು ವಾಲ್ಮೀಕಿ ಪ್ರಕರಣ ಬೆಳಕಿಗೆ ಬರುವುದರ ಹಿಂದೆ ಇದ್ದಾರೆ ಎಂಬ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಆರೋಪದ ಬಗ್ಗೆ ಉತ್ತರಿಸಿದ ಅವರು, “ನಮ್ಮಲ್ಲಿ ಅರ್ಹರು ತುಂಬಾ ಜನ ಇದ್ದಾರೆ. ಅವರೆಲ್ಲರೂ ಟವೆಲ್ ಹಾಕುತ್ತಾರೆ’ ಎಂದು ಡಿಸಿಎಂ ಡಿಕೆಶಿ ಮುಖ ನೋಡಿ ನಕ್ಕು, “ನೀನು ಏನಾದ್ರೂ ಮಾತಾಡ್ತಿಯೇನಯ್ನಾ?’ ಎಂದು ಪ್ರಶ್ನಿಸಿದರು.
ಎಚ್‌ಡಿಕೆಗೂ ಸೈಟ್: ಸಚಿವ ಬೈರತಿ
ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೇರಿ ಜೆಡಿಎಸ್-ಬಿಜೆಪಿ ನಾಯಕರಿಗೂ ಮುಡಾದಲ್ಲಿ ಪರ್ಯಾಯ ನಿವೇಶನ ನೀಡಲಾಗಿದೆ. ಜಿ.ಟಿ. ದೇವೇಗೌಡ, ಸಾ.ರಾ. ಮಹೇಶ್‌ಗೂ ನಿವೇಶನ ಸಿಕ್ಕಿದೆ ಎಂದು ಸಚಿವ ಬೈರತಿ ಸುರೇಶ್ ಹೇಳಿದರು.
ರಾಜ್ಯ ಸರಕಾರದ ವಿರುದ್ಧ
ದಿಲ್ಲಿಯಲ್ಲಿ ಬಿಜೆಪಿ ಪ್ರತಿಭಟನೆ
ಹೊಸದಿಲ್ಲಿ: ವಾಲ್ಮೀಕಿ, ಮುಡಾ ಹಗರಣಗಳ ವಿರುದ್ಧ ಸಂಸತ್ತಿನ ಒಳಗೆ, ಹೊರಗೆ ರಾಜ್ಯ ಬಿಜೆಪಿ ಸಂಸದರು ಪ್ರತಿಭಟನೆ ನಡೆಸಿದ್ದಾರೆ. ರಾಜ್ಯಸಭೆಯಲ್ಲಿ ಈ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಎಂದೂ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.