ಸಿದ್ದರಾಮಯ್ಯ ಪ್ರತಿಪಕ್ಷದ ನಾಯಕ
Team Udayavani, Jul 27, 2019, 5:57 AM IST
ಬೆಂಗಳೂರು: ಮೈತ್ರಿ ಸರ್ಕಾರ ಪತನಗೊಂಡು ಆಡಳಿತ ಮತ್ತು ಪ್ರತಿಪಕ್ಷಗಳು ಅದಲು, ಬದಲಾಗಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರೇ ತಕ್ಷಣಕ್ಕೆ ಪ್ರತಿಪಕ್ಷದ ನಾಯಕರಾಗಲಿದ್ದಾರೆ.
ಅಧಿಕಾರ ಕಳೆದುಕೊಂಡು ಕಾಂಗ್ರೆಸ್ ಪ್ರತಿಪಕ್ಷದ ಸ್ಥಾನದಲ್ಲಿ ಕೂಡುವ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಪ್ರತಿಪಕ್ಷದ ನಾಯಕರು ಯಾರಾಗ ಬೇಕು ಎನ್ನುವ ಜಿಜ್ಞಾಸೆ ಕಾಂಗ್ರೆಸ್‌ನಲ್ಲಿ ಚರ್ಚಿತವಾಗುತ್ತಿದೆ.
ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮುಂದುವರಿಸಿಕೊಂಡು, ಪ್ರತಿಪಕ್ಷದ ನಾಯಕರನ್ನಾಗಿ ಬೇರೆಯವರನ್ನು ಮಾಡಬೇಕು ಎನ್ನುವ ಚರ್ಚೆ ಕಾಂಗ್ರೆಸ್‌ನಲ್ಲಿ ಆರಂಭವಾಗಿದೆ. ಆದರೆ,ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ ಬಹುಮತ ಸಾಬೀತು ಪಡಿಸಲು ಅಧಿವೇಶನ ಕರೆಯಲಾಗಿದ್ದು, ಇದೇ ಸಂದರ್ಭದಲ್ಲಿ ಮಹತ್ವದ ಹಣಕಾಸು ವಿಧೇಯಕ ಮಂಡನೆಯಾಗಿ,
ಅಂಗೀಕಾರವಾಗಬೇಕಿದೆ.
ಹೀಗಾಗಿ, ತಕ್ಷಣಕ್ಕೆ ಹೊಸ ನಾಯಕನ ಹುಡುಕಾಟ ನಡೆಸುವ ಬದಲು ಈಗಾಗಲೇ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರನ್ನೇ ಪ್ರತಿಪಕ್ಷದ ನಾಯಕರನ್ನಾಗಿ ಮುಂದುವರಿಸಿ, ಅಗತ್ಯ ಬಿದ್ದರೆ, ಮುಂದಿನ ದಿನಗಳಲ್ಲಿ ಹೊಸ ಪ್ರತಿಪಕ್ಷದ ನಾಯಕನನ್ನು ಆಯ್ಕೆ ಮಾಡುವ ಬಗ್ಗೆ ಕಾಂಗ್ರೆಸ್ ಹೈ
ಕಮಾಂಡ್ ಚಿಂತನೆ ನಡೆಸಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.