ದೇಶದ ಜನರ ಕಷ್ಟ ಆಲಿಸಬೇಕಾದ ವಿಚಾರದಲ್ಲಿ ಮೋದಿ ಸಂಪೂರ್ಣ ವಿಫಲ: ಸಿದ್ದರಾಮಯ್ಯ ವಾಗ್ದಾಳಿ
Team Udayavani, Jan 3, 2020, 1:05 PM IST
ಬೆಂಗಳೂರು: ದೇಶದ ಜನರ ಕಷ್ಟ ಆಲಿಸಬೇಕಾದ್ದು ಪ್ರಧಾನಿಯಾದವರ ಕರ್ತವ್ಯ. ಆದರೆ ಈ ವಿಚಾರದಲ್ಲಿ ನರೇಂದ್ರ ಮೋದಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶುಕ್ರವಾರ ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ, ಈ ಹಿಂದೆ ಕಂಡು ಕೇಳರಿಯದಂತಹ ಭೀಕರ ಪ್ರವಾಹ ಸಂಭವಿಸಿತ್ತು. ಪ್ರವಾಹದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ರಾಜ್ಯಕ್ಕೆ ಬರಲಿಲ್ಲ. ರಾಜ್ಯದ ಜನರು ಕಷ್ಟ, ನಷ್ಟಗಳಿಂದ ತತ್ತರಿಸಿದ್ದಾರೆ. ಪ್ರಧಾನಿಯವರು ಸಣ್ಣ ಸಣ್ಣ ವಿಷಯಗಳಿಗೂ ಟ್ವೀಟ್ ಮಾಡುತ್ತಾರೆ. ಹೀಗಿರುವಾಗ ರಾಜ್ಯಕ್ಕೆ ಬಗ್ಗೆ ಬರುವುದಿರಲಿ, ಟ್ವೀಟ್ ಮಾಡಬಹುದಾಗಿತ್ತು ಎಂದರು.
ಕಳೆದ 2009ರಲ್ಲಿ ಸಂಭವಿಸಿದ್ದ ಪ್ರವಾಹದ ವೇಳೆ ಮನವೋಹನ್ ಸಿಂಗ್ ಭೇಟಿ ನೀಡಿದ್ದರು. ಆಗಲೂ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದರು. ಆಗ ಮನಮೋಹನ್ ಸಿಂಗ್ ವೈಮಾನಿಕ ಸಮೀಕ್ಷೆ ನಡೆಸಿ ಒಂದೂವರೆ ಸಾವಿರ ಕೋಟಿ ಮಧ್ಯಂತರ ಪರಿಹಾರ ನೀಡಿದರು. ಆದರೆ ಈ ಬಾರಿ ಪ್ರವಾಹದಿಂದ ಒಂದು ಲಕ್ಷಕ್ಕೂ ಹೆಚ್ಚು ಕೋಟಿ ನಷ್ಟವಾಗಿದೆ. ರಾಜ್ಯ ಸರ್ಕಾರ ಕೇಂದ್ರಕ್ಕೆ 38 ಸಾವಿರ ಕೋಟಿ ನಷ್ಟದ ವರದಿ ಕಳುಹಿಸಿತ್ತು. ಕೇಂದ್ರ ಆಗ ಕೊಟ್ಟಿದ್ದು ಕೇವರ 1200 ಕೋಟಿ ಮಾತ್ರ ಎಂದು ಟೀಕಿಸಿದರು.
ಚಂದ್ರಯಾನ ವೀಕ್ಷಣೆಗೆ ಪ್ರಧಾನಿ ಮೋದಿ ರಾಜ್ಯಕ್ಕೆ ಬಂದರೂ ಯಾರ ಭೇಟಿಗೂ ಅವಕಾಶ ನೀಡಲಿಲ್ಲ. ಪ್ರವಾಹದ ಬಗ್ಗೆ ಸೌಜನ್ಯಕ್ಕಾದರೂ ಮಾತನಾಡ ಬಹುದಾಗಿತ್ತು ಅದನ್ನೂ ಮಾತನಾಡಲೇ ಇಲ್ಲ ಎಂದರು.
ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ಮುಂದುವರಿಸಿದ ಸಿದ್ದರಾಮಯ್ಯ, ಈ ಹಿಂದೆ ಮೋದಿ ರಾಜ್ಯಕ್ಕೆ ಭೇಟಿ ನೀಡಿದ್ದಾಗ ಏನೇನು ಭರವಸೆ ನೀಡಿದ್ದರು ಎಂಬುದನ್ನ ನೆನಪಿಸಿಕೊಳ್ಳಲಿ. ಫುಡ್ ಪಾರ್ಕ್ ನಿಂದ ಸಾವಿರಾರು ಉದ್ಯೋಗ ಸೃಷ್ಟಿಯ ಭರವಸೆ ನೀಡಿದ್ದರು. ಅದ್ಯಾವುದೂ ಆಗಲೇ ಇಲ್ಲ. ಅದೆಲ್ಲ ಕೇವಲ ಹೇಳಿಕೆಗಳಿಗಷ್ಟೇ ಸೀಮಿತವಾಗಿದೆ ಎಂದರು.
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವಂತೆ ಕರ್ನಾಟಕದಲ್ಲೂ ಅದೇ ಸರ್ಕಾರ ಇದ್ದರೆ ರಾಜ್ಯದ ಭಾಗ್ಯದ ಬಾಗಿಲು ತೆರೆಯಲಿದೆ ಎಂದು ಹಿಂದೆ ಬಿಜೆಪಿ ನಾಯಕರು ಹೇಳಿಕೆ ನೀಡಿದ್ದರು. ಆದರೆ ರಾಜ್ಯ ಬಿಜೆಪಿ ನಾಯಕರಿಗೆ ಮೋದಿ ಮನೆಯ ಬಾಗಿಲನ್ನೇ ತೆರೆಯಲಿಲ್ಲ ಎಂದು ಟೀಕಿಸಿದರು.
ನರೇಂದ್ರ ಮೋದಿ ಬಳಿ ಏನನ್ನೂ ಕೇಳಲು ಬಿಜೆಪಿ ನಾಯಕರು ಭಯ ಬೀಳುತ್ತಾರೆ. ಅದಕ್ಕೆ ಯಡಿಯೂರಪ್ಪ ದುರ್ಬಲ ಸಿಎಂ ಅಂತಾ ಹೇಳಿದ್ದೆ. ನಿನ್ನೆ ತುಮಕೂರಿನಲ್ಲಿ ಯಡಿಯೂರಪ್ಪ ಪರಿಹಾರಕ್ಕೆ ಗೋಗರೆದಿದ್ದಾರೆ. ಇದಕ್ಕೆ ಮೋದಿ ಪ್ರತಿಕ್ರಿಯೆಯನ್ನೇ ನೀಡಲಿಲ್ಲ. ಕನಿಷ್ಠ ಪಕ್ಷ ಪರಿಶೀಲಿಸುತ್ತೇನೆ ಅಂತಲಾದ್ರೂ ಹೇಳಬಹುದಾಗಿತ್ತು. ಯಾವುದಕ್ಕೂ ಪ್ರತಿಕ್ರಿಯೆಯನ್ನೇ ಕೊಟ್ಟಿಲ್ಲ. ಇದನ್ನೆಲ್ಲಾ ನೋಡಿದಾಗ ಮೋದಿಗೆ ಕರ್ನಾಟಕದ ಬಗ್ಗೆ ಎಷ್ಟು ನಿರ್ಲಕ್ಷ್ಯ ಇದೆ ಎಂಬುದು ಗೊತ್ತಾಗುತ್ತೆ ಎಂದರು.
ಇಲ್ಲಿನ ಬಿಜೆಪಿ ನಾಯಕರು ನಮಗೆ ಓಟು ಕೊಡಬೇಡಿ ಮೋದಿಗೆ ಕೊಡಿ ಅಂತಿದ್ದರು. ರಾಜ್ಯದಿಂದ ಹೆಚ್ಷು ಸಂಸದರ ಕಾರಣಕ್ಕಾದರೂ ಸ್ಪಂದಿಸಬೇಕಿತ್ತು. ಸಿದ್ದಗಂಗಾ ಮಠಕ್ಕೆ ಹೋಗಿ ರಾಜಕೀಯ ಭಾಷಣ ಮಾಡಿದ್ದಾರೆ. ಮಕ್ಕಳ ಮುಂದೆ ಪಾಕಿಸ್ತಾನ, ಸಿಎಎ, ಎನ್ ಆರ್ ಸಿ ಬಗ್ಗೆ ಮಾತನಾಡುವುದು ಬೇಕಿತ್ತಾ ಎಂದು ಪ್ರಶ್ನಿಸಿದರು.
ದೇಶದ ಆರ್ಥಿಕ ಪರಿಸ್ಥಿತಿ ಬಗ್ಗೆ ಏನೂ ಮಾತನಾಡುತ್ತಿಲ್ಲ. ನಿರುದ್ಯೋಗ, ರೈತರ ಸಮಸ್ಯೆ ಬಗ್ಗೆ ಮಾತನಾಡುತ್ತಿಲ್ಲ. ರೈತರ ಸಾಲಮನ್ನಾ ಮಾಡಿ ಅಂದರೆ ಮಾಡಲಿಲ್ಲ. ಚುನಾವಣೆ ಸಂದರ್ಭದಲ್ಲಿ ಮಾತ್ರ ಮಾತನ್ನಾಡ್ತಾರೆ. ಮಹದಾಯಿ ಸಮಸ್ಯೆ ಬಗೆಹರಿಸಲಿಲ್ಲ. ಮೋದಿ, ಯಡಿಯೂರಪ್ಪ, ಜಾವ್ಡೇಕರ್ ಎಲ್ಲರೂ ಸುಳ್ಳು ಹೇಳ್ತಾರೆ ಎಂದು ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.