ಸಂತ್ರಸ್ತರಿಗೆ ಸ್ಪಂದಿಸಲು ಪುತ್ರನನ್ನು ಕಳುಹಿಸಿಕೊಟ್ಟ ಸಿದ್ದು
Team Udayavani, Aug 10, 2019, 5:02 AM IST
ಬೆಂಗಳೂರು: ಸ್ವ ಕ್ಷೇತ್ರ ಬಾದಾಮಿ ಸೇರಿ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಸಂತ್ರಸ್ತರ ನೆರವಿಗೆ ಸ್ಪಂದಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪುತ್ರ ಯತೀಂದ್ರ ಅವರನ್ನು ಕಳುಹಿಸಿದ್ದಾರೆ.
‘ನಾಲ್ಕು ದಿನದ ಹಿಂದೆ ನಾನು ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ವೈದ್ಯರು ಕೆಲವು ದಿನಗಳ ಕಡ್ಡಾಯ ವಿಶ್ರಾಂತಿ ಸೂಚಿಸಿದ್ದಾರೆ. ಈ ನಡುವೆ, ಉತ್ತರ ಕರ್ನಾಟಕ ಭಾಗ ಪ್ರವಾ ಹಕ್ಕೆ ಸಿಲುಕಿ ನಲುಗಿ ಹೋಗಿದೆ. ಅಲ್ಲಿ ಹೋಗಿ ಪರಿಹಾರ ಕಾರ್ಯಗಳಲ್ಲಿ ಭಾಗವಹಿಸ ಬೇಕೆಂದು ಮನಸ್ಸು ತುಡಿಯುತ್ತಿದ್ದರೂ ನನ್ನ ದುರಾದೃಷ್ಟಕ್ಕೆ ಅದು ಸಾಧ್ಯವಾಗುತ್ತಿಲ್ಲ. ನಾನು ಆಡಳಿತ ಪಕ್ಷದಲ್ಲೇ ಇರಲಿ, ವಿರೋಧ ಪಕ್ಷದಲ್ಲೇ ಇರಲಿ. ಜನರ ಸಂಕಷ್ಟಕ್ಕೆ ನೆರವಾಗುವುದು ಆದ್ಯ ಕರ್ತವ್ಯವೆಂದು ನಂಬಿ ರಾಜಕಾರಣ ಮಾಡುತ್ತಾ ಬಂದವನು. ಈ ಕಾರಣಕ್ಕಾಗಿಯೇ ನನ್ನ ಬದಲು ನನ್ನ ಮಗ, ವರುಣಾ ಕ್ಷೇತ್ರದ ಶಾಸಕರಾದ ಯತೀಂದ್ರ ಅವರನ್ನು ಪ್ರವಾಹ ಸಂತ್ರಸ್ತರಿಗೆ ನೆರವಾಗುವಂತ ಕಳುಹಿಸಿದ್ದೇನೆ’ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ದೆಹಲಿ ಭೇಟಿ ಸಾಧ್ಯತೆ?: ವಿಶ್ರಾಂತಿ ಯಲ್ಲಿರುವ ಸಿದ್ದರಾಮಯ್ಯ ಅವರು ಶನಿವಾರ ದೆಹಲಿಗೆ ತೆರಳಲಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಭೆ ಹಾಗೂ ಎಲ್ಲ ರಾಜ್ಯಗಳ ಶಾಸಕಾಂಗ ಪಕ್ಷದ ನಾಯಕರ ಸಭೆ ಕರೆದಿದ್ದು, ಅದರಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಈ ಮಧ್ಯೆ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು, ಶನಿವಾರ ಹುಬ್ಬಳ್ಳಿಗೆ ತೆರಳಲಿದ್ದು, ಹುಬ್ಬಳ್ಳಿ-ಧಾರವಾಡ ಸೇರಿ ಉತ್ತರ ಕರ್ನಾಟಕ ಭಾಗದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.