ಅಗತ್ಯ ವಸ್ತುಗಳ ಬೆಲೆ ದೀಢೀರ್ ಏರಿಕೆ: ಸರಿಯಾದ ಕ್ರಮಕ್ಕೆ ಸಿದ್ದರಾಮಯ್ಯ ಒತ್ತಾಯ
Team Udayavani, Apr 8, 2020, 3:31 PM IST
ಬೆಂಗಳೂರು: ಲಾಕ್ ಡೌನ್ ನಿಂದ ಬಡವರು ಹಾಗೂ ಮಧ್ಯಮ ವರ್ಗದ ಜನತೆ ತೊಂದರೆಯಲ್ಲಿದ್ದಾರೆ. ಈ ಸನ್ನಿವೇಶವನ್ನು ದುರ್ಬಳಕೆ ಮಾಡಿಕೊಂಡು ಕೆಲ ವ್ಯಾಪಾರಸ್ತರು ಅಗತ್ಯ ವಸ್ತುಗಳ ಬೆಲೆಯನ್ನು ದಿಢೀರ್ ಏರಿಕೆ ಮಾಡಿದ್ದಾರೆ. ಸರ್ಕಾರ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆಯ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಅಗತ್ಯ ವಸ್ತುಗಳ ಬೆಲೆಯನ್ನು ಶೇ. 20-30ರಷ್ಟು ಏರಿಕೆ ಮಾಡಿದರೆ ಈಗಾಗಲೇ ಕಷ್ಟದಲ್ಲಿರುವ ಬಡವರಿಗೆ ಇನ್ನಷ್ಟು ತೊಂದರೆಯಾಗುತ್ತದೆ. ಅಕ್ಕಿ, ಬೇಳೆ ಬೆಲೆ ಹೆಚ್ಚಾದರೆ ಖರೀದಿ ಮಾಡುವುದಾದರೂ ಹೇಗೆ? ಈಗಲೇ ಅವರಿಗೆ ದುಡಿಮೆ ಇಲ್ಲ, ಹಣವೂ ಇಲ್ಲ. ಈ ಕುರಿತು ಗಮನ ಹರಿಸಿ, ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಯವರು ಆಹಾರ ಇಲಾಖೆ ಅಧಿಕಾರಿಗಳಿಗೆ ಆದೇಶ ನೀಡಬೇಕು ಎಂದಿದ್ದಾರೆ.
ಹಣ್ಣು, ತರಕಾರಿ ಸೇರಿದಂತೆ ತಾವು ಬೆಳೆದಿರುವ ಕೃಷಿ ಉತ್ಪನ್ನಗಳನ್ನು ಖರೀದಿ ಮಾಡುವವರೇ ಇಲ್ಲ ಎಂದು ಅನೇಕ ರೈತರು ದೂರವಾಣಿ ಕರೆ ಮಾಡಿ ಹೇಳುತ್ತಿದ್ದಾರೆ. ಅದೇ ರೀತಿ ಭತ್ತ, ರಾಗಿಯನ್ನೂ ಖರೀದಿಸುತ್ತಿಲ್ಲ ಎನ್ನುತ್ತಿದ್ದಾರೆ. ಈ ಕುರಿತೂ ಸರ್ಕಾರ ಗಮನ ಹರಿಸಬೇಕು ಎಂದರು.
ವೇತನ ಕಡಿತಕ್ಕೆ ಸಹಮತ
ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿನ್ನೆ ದೂರವಾಣಿ ಕರೆ ಮಾಡಿ, ಶಾಸಕರು, ಸಂಸದರ ವೇತನ ಕಡಿತ ಮಾಡುವುದಾಗಿ ಹೇಳಿದ್ದಾರೆ. ಅದಕ್ಕೆ ನಮ್ಮ ಸಹಮತವೂ ಇದೆ. ಸಂಕಷ್ಟದ ಸಂದರ್ಭದಲ್ಲಿ ಸರ್ಕಾರದ ಕ್ರಮಕ್ಕೆ ಪ್ರತಿಪಕ್ಷಗಳು ಸಹಕರಿಸಬೇಕಾಗುತ್ತದೆ. ಇದಕ್ಕೆ ನಮ್ಮ ಒಪ್ಪಿಗೆಯೂ ಇದೆ ಎಂದರು.
ಸರ್ಕಾರಿ ನೌಕರರ ವೇತನ ಕಡಿತ ಬೇಡ
ಸಕಾರಿ ನೌಕರರ ವೇತನ ನಿಲ್ಲಿಸುವ ಅಥವಾ ಕಡಿತ ಮಾಡುವ ನಿರ್ಧಾರ ಸರಿಯಲ್ಲ. ಈಗಾಗಲೇ ಅವರು ಒಂದು ದಿನದ ವೇತನವನ್ನು ದೇಣಿಯಾಗಿ ನೀಡಿದ್ದಾಗೆ. ಅದು ಸಾಕು ಎಂಬುದು ನನ್ನ ಭಾವನೆ. ಬೇಕಾದರೆ ಸಂಸದರು, ಶಾಸಕರ ವೇತನವನ್ನು ಇನ್ನಷ್ಟು ವೇತನ ಕಡಿತ ಮಾಡಲಿ. ಅದಕ್ಕೆ ನಮ್ಮ ವಿರೋಧ ಇಲ್ಲ ಎಂದಿದ್ದಾರೆ.
ಲಾಕ್‍ಡೌನ್ ಮುಂದುವರಿದರೆ ಸಹಕಾರ
ಒಂದು ವೇಳೆ ಲಾಕ್‍ಡೌನ್ ಮುಂದುವರಿಸುವ ಅನಿವಾರ್ಹ ಪರಿಸ್ಥಿತಿ ಎದುರಾದರೆ ರಾಜ್ಯದ ಜನತೆ ಅದಕ್ಕೆ ಸಹಕಾರ ನೀಡಬೇಕು. ನಾವೂ ಸಹಕಾರ ನೀಡುತ್ತೇವೆ. ಅಗತ್ಯ ವಸ್ತುಗಳನ್ನು ಖರೀದಿ ಮಾಡುವುದು ಹಾಗೂ ಮಾರಾಟ ಮಾಡುವುದನ್ನು ಹೊರತುಪಡಿಸಿ ಲಾಕ್ ಡೌನ್ ಬಿಗಿ ಮಾಡಬೇಕು ಎಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.