ಸ್ಪೀಕರ್‌ಗೆ ಹಂಚಿಕೆ ಆಗಿರುವ ಮನೆಯತ್ತ ಸಿದ್ದರಾಮಯ್ಯ ಚಿತ್ತ


Team Udayavani, Oct 23, 2019, 3:07 AM IST

speakarge

ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸರ್ಕಾರಿ ಬಂಗಲೆ ಪಡೆಯುವ ಪ್ರಯತ್ನ ಇನ್ನೂ ಅಂತ್ಯ ಕಂಡಿಲ್ಲ. ಕಾವೇರಿ ಕೈ ತಪ್ಪಲಿರುವುದರಿಂದ ಈಗ ತಾವು ಹಿಂದೆ ಪ್ರತಿಪಕ್ಷದ ನಾಯಕರಾಗಿದ್ದಾಗ ವಾಸವಾಗಿದ್ದ ಕುಮಾರಕೃಪಾ ಪೂರ್ವದಲ್ಲಿರುವ ಮೊದಲನೇ ಮನೆಯನ್ನು ತಮಗೆ ನೀಡುವಂತೆ ಮತ್ತೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಈಗಾಗಲೇ ತಾವು ವಾಸಿಸುತ್ತಿದ್ದ ಕಾವೇರಿ ನಿವಾಸದಲ್ಲಿಯೇ ಮುಂದುವರಿಯಲು ಬಯಸಿದ್ದರೂ, ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಕಾವೇರಿ ನಿವಾಸ ಹಂಚಿಕೆ ಮಾಡಿ, ಕಾವೇರಿ ನಿವಾಸವನ್ನು ಖಾಲಿ ಮಾಡುವಂತೆ ಸಿದ್ದರಾಮಯ್ಯ ಅವರಿಗೆ ಸೂಚಿಸಲಾಗಿತ್ತು. ಅದರ ಬದಲು ರೇಸ್‌ ಕೋರ್ಸ್‌ ರಸ್ತೆಯಲ್ಲಿರುವ ರೇಸ್‌ ವ್ಯೂ ಕಾಟೇಜ್‌- 2ನ್ನು ಸಿದ್ದರಾಮಯ್ಯ ಅವರಿಗೆ ಹಂಚಿಕೆ ಮಾಡಲಾಗಿತ್ತು.

ಆದರೆ, ಸಿದ್ದರಾಮಯ್ಯ ರೇಸ್‌ ವ್ಯೂ ಕಾಟೇಜ್‌ -2 ಗೆ ತೆರಳಲು ಹಿಂದೇಟು ಹಾಕುತ್ತಿದ್ದು, 2009ರಲ್ಲಿ ಪ್ರತಿಪಕ್ಷದ ನಾಯಕ ರಾಗಿ ಆಯ್ಕೆಯಾಗಿದ್ದ ಸಂದರ್ಭದಲ್ಲಿ ಕುಮಾರಕೃಪಾ ಪೂರ್ವ ಭಾಗದಲ್ಲಿರುವ ಸರ್ಕಾರಿ ನಿವಾಸಗಳಲ್ಲಿ ಮೊದಲನೆಯ ಮನೆಯಲ್ಲಿ ಸಿದ್ದರಾ ಮಯ್ಯ ವಾಸವಾಗಿದ್ದರು. ಈಗ ಮತ್ತೆ ತಮಗೆ ಅದೇ ಮನೆಯನ್ನು ನೀಡುವಂತೆ ಸರ್ಕಾರಕ್ಕೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ರೇವಣ್ಣ ವಾಸ: ಕುಮಾರಕೃಪಾ ಪೂರ್ವ ಭಾಗದ ಮನೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಲೋಕೋಪಯೋಗಿ ಸಚಿವರಾಗಿದ್ದ ಎಚ್‌.ಡಿ. ರೇವಣ್ಣ ಅವರಿಗೆ ನೀಡಲಾಗಿತ್ತು. ಅವರ ಅವಧಿಯಲ್ಲಿ ಮನೆಯನ್ನು ವಾಸ್ತು ಪ್ರಕಾರ ನವೀಕರಣಗೊಳಿಸಿದ್ದರು. ಈಗಲೂ ಈ ನಿವಾಸದಲ್ಲಿ ರೇವಣ್ಣ ವಾಸವಾಗಿದ್ದು, ಅವರು ತಮ್ಮ ಸ್ವಂತ ನಿವಾಸಕ್ಕೆ ತೆರಳಲು ಸಿದ್ಧತೆ ಮಾಡಿಕೊಂಡಿದ್ದಾರೆ.

ಆದರೆ, ಕಾರ್ತಿಕ ಮಾಸದಲ್ಲಿ ಪೂಜೆ ಮಾಡಿ ಗೃಹ ಪ್ರವೇಶ ಮಾಡಬೇಕು ಎನ್ನುವ ಕಾರಣಕ್ಕೆ ರೇವಣ್ಣ ಇನ್ನೂ ಸರ್ಕಾರಿ ಬಂಗಲೆಯಲ್ಲಿಯೇ ಉಳಿದುಕೊಂಡಿದ್ದಾರೆಂದು ಹೇಳಲಾಗುತ್ತಿದೆ. ಕುಮಾರಕೃಪಾ ಪೂರ್ವ ಭಾಗದ ಮನೆಯನ್ನು ಸರ್ಕಾರ ಈಗಾಗಲೇ ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಹಂಚಿಕೆ ಮಾಡಿದೆ. ಎಚ್‌.ಡಿ. ರೇವಣ್ಣ ಮನೆ ಖಾಲಿ ಮಾಡದೇ ಇರುವುದರಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು,

ಆದಷ್ಟು ಬೇಗ ಮನೆ ಖಾಲಿ ಮಾಡಿಕೊಡುವಂತೆ ವಿಧಾನಸಭೆ ಅಧಿವೇಶನದ ಸಂದರ್ಭದಲ್ಲಿಯೇ ಮನವಿ ಮಾಡಿದ್ದರು. ಈಗ ಸಿದ್ದರಾಮಯ್ಯ ಅವರು ಈ ಮನೆಗೆ ಬೇಡಿಕೆ ಇಟ್ಟಿರುವು ದರಿಂದ ಸರ್ಕಾರ ಅವರ ಮನವಿಗೆ ಸ್ಪಂದಿಸಿ ಹಂಚಿಕೆ ಮಾಡುತ್ತಾ ಅಥವಾ ಈಗಾಗಲೇ ಅವರಿಗೆ ಹಂಚಿಕೆ ಮಾಡಿರುವ ರೇಸ್‌ ಕೋರ್ಸ್‌ ರಸ್ತೆಯಲ್ಲಿರುವ ರೇಸ್‌ ವ್ಯೂ ಕಾಟೇಜ್‌ 2 ಕ್ಕೆ ಸ್ಥಳಾಂತರಗೊಳ್ಳುವಂತೆ ಸೂಚನೆ ನೀಡಲಾಗುತ್ತದೆಯಾ ಎನ್ನುವುದು ಕುತೂ ಲಹಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

Yathnal-eshwarappa

Waqf: ಕಾಂಗ್ರೆಸ್‌ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್‌ ಆಸ್ತಿ ಕಬಳಿಕೆ: ಯತ್ನಾಳ್‌

10-rabakavi

Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

Jharkhand contest between pro-people and pro-prime government: Congress

Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್‌

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

5-udupi

Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

New Delhi: BSNL invites tender for 5G service

New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್‌ ಆಹ್ವಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yathnal-eshwarappa

Waqf: ಕಾಂಗ್ರೆಸ್‌ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್‌ ಆಸ್ತಿ ಕಬಳಿಕೆ: ಯತ್ನಾಳ್‌

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Court-1

Puttur: ರಸ್ತೆ ಅಪಘಾತದಲ್ಲಿ ಸಾವು; ಆರೋಪಿ ಚಾಲಕ ಖುಲಾಸೆ

2

Kasaragod: ರೈಲು ಹಳಿಯಲ್ಲಿ ಬಾಟಲಿ, ನಾಣ್ಯ ಇರಿಸಿ ದುಷ್ಕೃತ್ಯಕ್ಕೆ ಸಂಚು

Yathnal-eshwarappa

Waqf: ಕಾಂಗ್ರೆಸ್‌ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್‌ ಆಸ್ತಿ ಕಬಳಿಕೆ: ಯತ್ನಾಳ್‌

10-rabakavi

Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

Jharkhand contest between pro-people and pro-prime government: Congress

Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.