ಮೈತ್ರಿ ಅಳಿವು-ಉಳಿವಿನ ಚರ್ಚೆಯಲ್ಲಿ ಸಿದ್ದು ಕೇಂದ್ರ ಸ್ಥಾನ
Team Udayavani, May 14, 2019, 3:10 AM IST
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ 2 ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶದ ಮೇಲೆ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಭವಿಷ್ಯ ನಿಂತಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ. ಮುಂದಾಗಬಹುದಾದ ಬೆಳವಣಿಗೆಯಲ್ಲಿ ಮಾತ್ರ ಮಾಜಿ ಸಿಎಂ ಸಿದ್ದರಾಮಯ್ಯ ಹೆಸರು ಪ್ರತಿಬಾರಿ ತಳಕು ಹಾಕಿಕೊಳ್ಳುತ್ತಿರುವುದು ಇತ್ತೀಚೆಗೆ ಕಂಡುಬಂದಿದೆ.
ಲೋಕಸಭೆ ಚುನಾವಣೆ ಪ್ರಕ್ರಿಯೆಗೂ ಮುಂಚೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತ ಕಾಂಗ್ರೆಸ್‌ನ ಹಲವು ಮಾಜಿ ಸಚಿವರು ಹಾಗೂ ಶಾಸಕರು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿ, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಬಳಿ ಟಿಕೆಟ್‌ಗೆ ಮನವಿ ಮಾಡಿದ್ದರು. ಆ ಸಂದರ್ಭದಲ್ಲಿ ಲೋಕಸಭೆ ಚುನಾವಣೆ ಬಿಟ್ಟು ವಿಧಾನಸಭೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ಸಿದ್ದರಾಮಯ್ಯ ತಮ್ಮ ಆಪ್ತರಿಗೆ ಹೇಳಿದ್ದರು ಎನ್ನಲಾಗಿದೆ.
ಆ ಸಂದರ್ಭದಲ್ಲಿ ಡಿಸೆಂಬರ್‌ನಲ್ಲಿ ವಿಧಾನಸಭೆ ಚುನಾವಣೆಗೆ ಸಿದ್ಧರಾಗುವಂತೆಯೂ ಪರೋಕ್ಷ ಸೂಚನೆ ನೀಡಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ. ಲೋಕಸಭೆ ಟಿಕೆಟ್ ಪಡೆಯಲು ಒತ್ತಡ ಹೇರಿದವರಿಗೆ ಸಮಾಧಾನಪಡಿಸಲು ಸಿದ್ದರಾಮಯ್ಯ ಆ ರೀತಿ ಹೇಳಿರುವ ಸಾಧ್ಯತೆ ಇದೆಯೇ ಅಥವಾ ನಿಜವಾಗಿಯೂ ಲೋಕಸಭೆ ಚುನಾವಣೆ ಬಳಿಕ ಮೈತ್ರಿ ಸರ್ಕಾರ ಪತನವಾಗಲಿದೆಯೇ ಎಂಬ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ನಡೆಸಿದೆ.
ಇದರ ಜತೆಗೆ ರಾಜ್ಯದ ಮೈತ್ರಿ ಸರ್ಕಾರದ ಭವಿಷ್ಯ ಡೋಲಾಯಮಾನವಾಗಿದೆ ಎಂಬ ಸಂದೇಶವನ್ನು ಸಿದ್ದರಾಮಯ್ಯ ನೀಡಿದ್ದಾರೆ ಎನ್ನಲಾಗುತ್ತಿದೆ. ರಾಜ್ಯದಲ್ಲಿ ಜೆಡಿಎಸ್ ಜತೆಗೆ ಮೈತ್ರಿ ಸರ್ಕಾರ ಮಾಡುವುದಕ್ಕೆ ಆರಂಭದಿಂದಲೂ ವಿರೋಧ ವ್ಯಕ್ತಪಡಿಸುತ್ತಿದ್ದ ಸಿದ್ದರಾಮಯ್ಯ ಅವರನ್ನೇ ಮುಂದಿಟ್ಟುಕೊಂಡು ಪಕ್ಷದ ಹೈಕಮಾಂಡ್ ರಾಷ್ಟ್ರ ಮಟ್ಟದ ರಾಜಕೀಯ ಹಿತದೃಷ್ಠಿಯಿಂದ ಕರ್ನಾಟಕದಲ್ಲಿ ಮೈತ್ರಿ ಅನಿವಾರ್ಯ ಎಂದು ಜೆಡಿಎಸ್ ಜತೆ ಕೈ ಜೋಡಿಸುವಂತೆ ಸೂಚಿಸಿತ್ತು.
ಸಮ್ಮಿಶ್ರ ಸರ್ಕಾರದ ಆರಂಭದಿಂದಲೂ ಮೈತ್ರಿ ಸರ್ಕಾರದ ಪ್ರತಿಪಕ್ಷದ ನಾಯಕರಂತೆ ಬಿಂಬಿತವಾಗಿರುವ ಸಿದ್ದರಾಮಯ್ಯ ಅವರ ನಡೆಯ ಬಗ್ಗೆ ಕಾಂಗ್ರೆಸ್ ಪಕ್ಷದ ಒಂದು ವಲಯದಲ್ಲಿ ಈಗಲೂ ಅನುಮಾನಗಳಿವೆ. ಅಲ್ಲದೇ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ಜತೆ ಸ್ಪರ್ಧೆ ಮಾಡುವುದಕ್ಕೂ ಕೂಡ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.
ರಾಜ್ಯದಲ್ಲಿ ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡಿರುವುದರಿಂದ ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಅಸ್ತಿತ್ವಕ್ಕೆ ಧಕ್ಕೆಯಾಗುತ್ತಿದ್ದು, ಕೆಲವು ಜಿಲ್ಲೆಗಳಲ್ಲಿ ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರ ಅಸ್ತಿತ್ವಕ್ಕೆ ಧಕ್ಕೆಯಾಗುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ಗೆ ಕ್ಷೇತ್ರಗಳನ್ನು ಬಿಟ್ಟುಕೊಡುವುದರಿಂದ ಸುಮಾರು 60ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಸ್ತಿತ್ವಕ್ಕೆ ಧಕ್ಕೆಯಾಗುತ್ತದೆ.
ಅದು ಮುಂದಿನ ವಿಧಾನಸಭೆ ಚುನಾವಣೆಗಳಲ್ಲಿ ಏಕಾಂಗಿಯಾಗಿ ಅಧಿಕಾರಕ್ಕೆ ಬರಲು ಕಷ್ಟವಾಗುತ್ತದೆ. ಹೀಗಾಗಿ ಈಗಿರುವ ಮೈತ್ರಿ ಹೊರತಾಗಿ ಇತರ ಚುನಾವಣೆಗಳಲ್ಲಿ ಮೈತ್ರಿ ಬೇಡ ಎಂಬ ಅಭಿಪ್ರಾಯವನ್ನು ಸಿದ್ದರಾಮಯ್ಯ ವ್ಯಕ್ತಪಡಿಸಿದ್ದರು ಎಂಬ ಮಾತು ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿವೆ.
ಫಲಿತಾಂಶ ಬಳಿಕ ಉತ್ತರ: ಈಗಿರುವ ರಾಜಕೀಯ ಪರಿಸ್ಥಿತಿಯಲ್ಲಿ ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಮೈತ್ರಿ ಪಕ್ಷಗಳಲ್ಲಿ ಗೊಂದಲ ಅಥವಾ ಬಿಜೆಪಿ ಆಪರೇಷನ್ ಕಮಲದ ಮೂಲಕ ಸರ್ಕಾರ ಕೆಡವಲು ಮುಂದಾದರೆ, ಸರ್ಕಾರ ಉಳಿಸಿಕೊಳ್ಳಲು ಬೇಕಾದ ಕಾರ್ಯತಂತ್ರ ರೂಪಿಸುವುದು.
ಒಂದು ವೇಳೆ, ರಮೇಶ್ ಜಾರಕಿಹೊಳಿ ಹಾಗೂ ಅವರೊಂದಿಗೆ ಗುರುತಿಸಿಕೊಂಡ ಶಾಸಕರು ರಾಜೀನಾಮೆ ನೀಡಿದರೆ, ಸರ್ಕಾರದ ಬಹುಮತಕ್ಕೆ ಧಕ್ಕೆ ಬರುವ ಸಾಧ್ಯತೆ ಇದೆ. ಆ ಸಂದರ್ಭದಲ್ಲಿ ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ನೀಡದೇ, ಮೈತ್ರಿ ಸರ್ಕಾರವನ್ನು ವಿಸರ್ಜಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಲು ಮುಖ್ಯಮಂತ್ರಿಗೆ ಒತ್ತಡ ತರುವ ಬಗ್ಗೆಯೂ ಒಂದು ವರ್ಗ ಚಿಂತಿಸಿದೆ.
ಆದರೆ, ಸರ್ಕಾರ ವಿಸರ್ಜನೆಯನ್ನು ಮುಖ್ಯಮಂತ್ರಿ ಸಂಪುಟ ಸಭೆಯಲ್ಲಿ ನಿರ್ಧರಿಸಬೇಕು ಮತ್ತು ಕುಮಾರಸ್ವಾಮಿ ತಮ್ಮ ಸರ್ಕಾರವನ್ನು ವಿಸರ್ಜಿಸುತ್ತಾರೆಯೇ ಅಥವಾ ಸರ್ಕಾರ ಉಳಿಸಲು ಯತ್ನ ಮುಂದುವರಿಸುವರೇ ಎಂಬುದಕ್ಕೆ ಲೋಕಸಭೆ ಚುನಾವಣೆ ಫಲಿತಾಂಶ ಬಳಿಕ ಉತ್ತರ ಸಿಗಲಿದೆ.
* ಶಂಕರ ಪಾಗೋಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.