ಮಹಾಲಿಂಗಪುರ ಶಾಸಕ ಸಿದ್ದು ಸವದಿ ವರ್ತನೆಗೆ ಜಿಲ್ಲಾ ಕಾಂಗ್ರೆಸ್ ಕೆಂಡಾಮಂಡಲ
Team Udayavani, Nov 13, 2020, 1:22 PM IST
ಬಾಗಲಕೋಟೆ: ಜಿಲ್ಲೆಯ ಮಹಾಲಿಂಗಪುರ ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯ ವೇಳೆ ಮಹಿಳಾ ಜನಪ್ರತಿನಿಧಿಗಳ
ಮೇಲೆ ನಡೆದ ದೌರ್ಜನ್ಯ ಖಂಡಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ನಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.
ಮಹಿಳಾ ಕಾಂಗ್ರೆಸ್ ಅಧ್ಯಕ್ಷ ರಕ್ಷಿತಾ ಭರತಕುಮಾರ ಈಟಿ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಗೆ ಗೌರವಯುತ ಸ್ಥಾನವಿದೆ. ಪುರುಷ ಪ್ರಧಾನವಾಗಿದ್ದ ಸಮಾಜದಲ್ಲಿ ಈಗ ಮಹಿಳೆಗೆ ಸರಿಸಮಾನ ಹಕ್ಕು ನೀಡಲಾಗಿದೆ. ಅದಕ್ಕಾಗಿಯೇ ದೇಶ, ರಾಜ್ಯದ ಪ್ರತಿಯೊಂದು ನಗರ-ಸ್ಥಳೀಯ ಸಂಸ್ಥೆಗಳ ಸದಸ್ಯ ಸ್ಥಾನಗಳಿಗೆ ಮಹಿಳಾ ಮೀಸಲಾತಿಯನ್ನು ಸಂವಿಧಾನಬದ್ಧವಾಗಿ ನೀಡಿದ್ದು, ಅನೇಕ ಮಹಿಳೆಯರು ಅಧಿಕಾರಕ್ಕೆ ಬಂದಿದ್ದಾರೆ. ಜಿಲ್ಲೆಯ ಮಹಾಲಿಂಗಪುರ ಪುರಸಭೆಯಲ್ಲೂ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದಿಂದ ಹಲವು ಮಹಿಳೆಯರು ಸದಸ್ಯೆಯರಾಗಿ ಆಯ್ಕೆಗೊಂಡು, ಸಮಾಜ ಸೇವೆಯಲ್ಲಿ ತೊಡಗಿದ್ದಾರೆ. ನ. 9ರಂದು ನಡೆದ ಅಲ್ಲಿನ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಆಡಳಿತಾರೂಢ ಹಾಗೂ ಸಂಸ್ಕೃತಿ, ಶಿಸ್ತು ಎಂದು ಹೇಳಿಕೊಳ್ಳುವ ಬಿಜೆಪಿ ಪಕ್ಷದ ಶಾಸಕರು, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆಗಿರುವ ಸಿದ್ದು ಸವದಿ ಹಾಗೂ ಅವರ ಪಕ್ಷದ ಕೆಲ ಪ್ರಮುಖರು, ಮಹಿಳಾ ಜನ ಪ್ರತಿನಿಧಿಗಳ ಮೇಲೆಹೀನಾಯವಾಗಿ ನಡೆದುಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಮಸ್ಕಿ ಉಪಚುನಾವಣೆಯಲ್ಲಿ ಬಿಜೆಪಿ ಗೆಲವು ಖಚಿತ: ಎನ್. ರವಿಕುಮಾರ್
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನಬದ್ಧವಾಗಿ ಆಯ್ಕೆಯಾದ ಜನಪ್ರತಿನಿಧಿಗಳಾಗಲಿ, ಸಾಮಾನ್ಯ ಮಹಿಳೆಯರಾಗಲಿ ಯಾವುದೇ ನಿರ್ಧಾರಗಳಿಗೆ ಸ್ವತಂತ್ರರಾಗಿದ್ದಾರೆ. ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಮೂವರು ಮಹಿಳಾ ಸದಸ್ಯರಲ್ಲಿ ಓರ್ವ ಮಹಿಳಾ ಸದಸ್ಯೆಯನ್ನು ಪುರಸಭೆ ಕಚೇರಿಯ ಮುಖ್ಯ ಗೇಟ್‌ನಿಂದಲೇ ಬಿಜೆಪಿಯವರು ಅಪಹರಿಸಿ, ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸದಂತೆ ಮಾಡಿದ್ದಾರೆ.
ಆ ಮೂಲಕ ಆ ಮಹಿಳಾ ಸದಸ್ಯೆಯ ಸಂವಿಧಾನಬದ್ಧ ಹಕ್ಕಿಗೆ ಚ್ಯುತಿ ತಂದಿದ್ದಾರೆ. ಇನ್ನಿಬ್ಬರು ಮಹಿಳೆಯರು ಪುರಸಭೆ ಕಚೇರಿಯೊಳಗೆ ಪ್ರವೇಶ ಮಾಡುವಾಗ ಸ್ವತಃ ಉನ್ನತ ಹುದ್ದೆಯಲ್ಲಿರುವ ಶಾಸಕ ಸಿದ್ದು ಸವದಿ ಹಾಗೂ ಬಿಜೆಪಿ ಮುಖಂಡರು, ಅನುಚಿತವಾಗಿ ನಡೆದುಕೊಂಡಿದ್ದಾರೆ. ಮಹಿಳಾ ಜನಪ್ರತಿನಿಧಿಗಳಾ ಸವಿತಾ ಹುರಕಡ್ಲಿ ಮತ್ತು ಚಾಂದಿನಿ ನಾಯಕ ಅವರನ್ನು
ಎಳೆದಾಡಿ, ಒಳಗೆ ಪ್ರವೇಶ ಮಾಡದಂತೆ ತಡೆಯೊಡ್ಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಕೃತ್ಯ ಸಹಿಸಲು ಸಾಧ್ಯವಿಲ್ಲ. ಅದರಲ್ಲೂ ಚಾಂದಿನಿ ನಾಯಕ ಮೂರು ತಿಂಗಳ ಗರ್ಭಿಣಿ ಇದ್ದು, ಅಂತಹ ಮಹಿಳೆಯನ್ನು ತಳ್ಳಾಡಿ, ನೂಕಿರುವುದು ಅಪರಾಧ ಎಂದರು.
ಈ ಘಟನೆ ನಡೆದಾಗ ಸಿಪಿಐ, ಪಿಎಸ್‌ಐ ಸಹಿತ ಹಲವಾರು ಪೊಲೀಸರು ಎದುರಿಗಿದ್ದಾರೆ. ಇಂತಹ ಕೃತ್ಯವನ್ನು ತಕ್ಷಣ ತಡೆದು, ಮಹಿಳೆಯರಿಗೆ ಸೂಕ್ತ ರಕ್ಷಣೆ ಕೊಡಬೇಕಿತ್ತು. ಘಟನೆ ನಡೆದ ದಿನವೇ ಸಂಬಂಧಿಸಿದವರ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕಿತ್ತು. ಆದರೆ, ಈ ಘಟನೆ ಕುರಿತು ಮಾಧ್ಯಮಗಳಲ್ಲಿ ವರದಿಯಾದ ಬಳಿಕ ಪ್ರಕರಣ ದಾಖಲಿಸಲಾಗಿದೆ. ಹೀಗಾಗಿ ಈ ಘಟನೆಯಲ್ಲಿ ಮಹಾಲಿಂಗಪುರ ಠಾಣೆಯ ಪೊಲೀಸರ ವೈಫಲ್ಯವೂ ಎದ್ದು ಕಾಣುತ್ತದೆ ಎಂದು ಹೇಳಿದ್ದಾರೆ.
ಈ ಪ್ರಕರಣದಲ್ಲಿ ಎಷ್ಟೇ ಪ್ರಭಾವಿಗಳಿದ್ದರೂ ಯಾರೇ ತಪ್ಪು ಮಾಡಿದರೂ ತಕ್ಷಣ ಕಠಿಣ ಕ್ರಮ ಕೈಗೊಂಡು, ನೊಂದ ಮಹಿಳೆಯರಿಗೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದರು. ಮಹಿಳಾ ಘಟಕದ ಪ್ರಮುಖರಾದ ರೇಣುಕಾ ನ್ಯಾಮಗೌಡ, ಜಯಶ್ರೀ ಗುಳಬಾಳ, ರೇಣುಕಾ ನಾರಾಯಣಕರ, ನಗರಸಭೆ ಸದಸ್ಯ ಹಾಜಿಸಾಬ ದಂಡಿನ, ಪಕ್ಷದ ಜಿಲ್ಲಾ ವಕ್ತಾರ ನಾಗರಾಜ
ಹದ್ಲಿ, ಎಸ್.ಸಿ ಘಟಕದ ಜಿಲ್ಲಾ ಅಧ್ಯಕ್ಷ ರಾಜು ಮನ್ನಿಕೇರಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.