Father Muller: ಫಾದರ್‌ ಮುಲ್ಲರ್‌ ಮೆಡಿಕಲ್‌ ಕಾಲೇಜಿನ ಬೆಳ್ಳಿಹಬ್ಬ ವರ್ಷಾಚರಣೆ

ನೈತಿಕ ಮೌಲ್ಯ, ಸೇವಾಭಾವ ಬೆಳೆಸುವ ಸಂಸ್ಥೆ: ಡಿವೈಎಸ್‌ಪಿ ಡಾ| ಗಾನಾ ಪಿ. ಕುಮಾರ್‌

Team Udayavani, Oct 17, 2023, 12:59 AM IST

fmmc

ಮಂಗಳೂರು: ಫಾದರ್‌ ಮುಲ್ಲರ್‌ ಸಂಸ್ಥೆ ಅನೇಕ ಯುವ ಹಾಗೂ ಉತ್ಸಾಹಿ ವೈದ್ಯರನ್ನು ಸಮಾಜಕ್ಕೆ ನೀಡಿದೆ. ಸಂಸ್ಥೆಯ ಸೇವೆ ದೇಶ ವಿದೇಶಗಳಲ್ಲಿ ವ್ಯಾಪಿಸಿದ್ದು, ಸಹಸ್ರಾರು ರೋಗಿಗಳಿಗೆ ನೆರವಾಗಿದೆ. ಇದು ವೈದ್ಯಕೀಯ ಶಿಕ್ಷಣದ ಜತೆಗೆ ನೈತಿಕ ಮೌಲ್ಯ, ಸೇವಾ ಮನೋಭಾವ ಬೆಳೆಸುವ ಸಂಸ್ಥೆಯಾಗಿದೆ ಎಂದು ಪುತ್ತೂರು ಉಪ ವಿಭಾಗದ ಡಿವೈಎಸ್‌ಪಿ ಡಾ| ಗಾನಾ ಪಿ. ಕುಮಾರ್‌ ಹೇಳಿದರು.

ಕಂಕನಾಡಿ ಫಾದರ್‌ ಮುಲ್ಲರ್‌ ಕನ್ವೆನ್ಶನ್‌ ಸೆಂಟರ್‌ನಲ್ಲಿ ಸೋಮವಾರ ನಡೆದ ಫಾದರ್‌ ಮುಲ್ಲರ್‌ ಮೆಡಿಕಲ್‌ ಕಾಲೇಜಿನ ಬೆಳ್ಳಿಹಬ್ಬ ವರ್ಷಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾಲೇಜು ಜೀವನ ಭವಿಷ್ಯಕ್ಕೆ ಬುನಾದಿ. ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಎಂಬಿಬಿಎಸ್‌ ಪದವಿ ಹಂತದಲ್ಲಿ ಯುವ ವೈದ್ಯರು ವೃತ್ತಿ ಶಿಕ್ಷಣದ ಜತೆಗೆ ವ್ಯಕ್ತಿತ್ವ ರೂಪಿಸಿಕೊಳ್ಳಲು ಅವಕಾಶವಿದೆ. ಅತ್ಯುತ್ತಮ ಸೇವೆಯ ಮೂಲಕ ರೋಗಿಯನ್ನು ಗುಣಪಡಿ ಸುವುದೇ ಶ್ರೇಷ್ಠ ಸಾಧನೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಬಿಷಪ್‌ ರೈ| ರೆ| ಡಾ| ಪೀಟರ್‌ ಪಾವ್ಲ್‌ ಸಲ್ಡಾನ್ಹಾ ಮಾತನಾಡಿ, ಹೊಸ ವಿಚಾರಗಳನ್ನು ತಿಳಿದುಕೊಳ್ಳುವ ಕುತೂಹಲ ವಿದ್ಯಾರ್ಥಿಗಳಲ್ಲಿ ಇರಬೇಕು. ಶಿಕ್ಷಕರ ಬೋಧನೆಗಿಂತಲೂ ಹೆಚ್ಚಿನ ವಿಷಯ ಸಂಗ್ರಹ, ಗ್ರಹಿಕೆ ಅಗತ್ಯ ಎಂದರು. ಗುಣಮಟ್ಟದ ಸೇವೆಯಿಂದ ಪ್ರಸಿದ್ಧಿ ಗಳಿಸಿರುವ ಸಂಸ್ಥೆ ಕುಷ್ಠರೋಗ ನಿರ್ಮೂಲನೆಯಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಶ್ಲಾ ಸಿದರು.

ಸಂಸ್ಥೆಯ ಡೀನ್‌ ಡಾ| ಆ್ಯಂಟನಿ ಸಿಲ್ವನ್‌ ಡಿ’ಸೋಜಾ ಬೆಳ್ಳಿಹಬ್ಬ ವರ್ಷದಲ್ಲಿ ಕೈಗೊಳ್ಳಲಿರುವ ಕಾರ್ಯಕ್ರಮಗಳ ವಿವರ ನೀಡಿದರು. ಫಾದರ್‌ ಮುಲ್ಲರ್‌ ಚಾರಿಟೆಬಲ್‌ ಸಂಸ್ಥೆಯ ನಿರ್ದೇಶಕ ವಂ| ರಿಚರ್ಡ್‌ ಅಲೋಶಿಯಸ್‌ ಕುವೆಲ್ಹೊ ಸ್ವಾಗತಿಸಿದರು.

ಫಾದರ್‌ ಮುಲ್ಲರ್‌ ಮೆಡಿಕಲ್‌ ಕಾಲೇಜು ಆಡಳಿತಾಧಿಕಾರಿ ವಂ| ಅಜಿತ್‌ ಬಿ. ಮಿನೇಜಸ್‌, ಫಾದರ್‌ ಮುಲ್ಲರ್‌ ಮೆಡಿಕಲ್‌ ಕಾಲೇಜು ಆಸ್ಪತ್ರೆ ಆಡಳಿತಾಧಿಕಾರಿ ವಂ| ಜಾರ್ಜ್‌ ಜೀವನ್‌ ಸಿಕ್ವೇರ, ಸಹಾಯಕ ಆಡಳಿತಾಧಿಕಾರಿ ವಂ| ನೆಲ್ಸನ್‌ ಧೀರಜ್‌ ಪಾಸ್‌, ತುಂಬೆ ಫಾದರ್‌ ಮುಲ್ಲರ್‌ ಆಸ್ಪತ್ರೆಯ ಆಡಳಿತಾಧಿಕಾರಿ ವಂ| ಸಿಲ್ವೆಸ್ಟರ್‌, ವೈದ್ಯಕೀಯ ಅಧೀಕ್ಷಕ ಡಾ| ಉದಯ್‌ ಕುಮಾರ್‌ ಕೆ., ಫಾದರ್‌ ಮುಲ್ಲರ್‌ ಹೋಮಿಯೋಪಥಿ ಮೆಡಿಕಲ್‌ ಕಾಲೇಜು ಪ್ರಾಂಶುಪಾಲ ಡಾ| ಪ್ರಭು ಕಿರಣ್‌, ಕಾಲೇಜ್‌ ಆಫ್‌ ಅಲೈಡ್‌ ಹೆಲ್ತ್‌ ಸೈನ್ಸಸ್‌ ಪ್ರಾಂಶುಪಾಲೆ ಡಾ| ಹಿಲ್ಡಾ, ಫಿಸಿಯೋಥೆರಫಿ ಕಾಲೇಜು ಪ್ರಾಂಶುಪಾಲೆ ಪ್ರೊ| ಚರಿಷ್ಮಾ, ಕಾಲೇಜ್‌ ಆಫ್‌ ನರ್ಸಿಂಗ್‌ ಪ್ರಾಂಶುಪಾಲೆ ಸಿ| ಜೆಸಿಂತಾ, ನರ್ಸಿಂಗ್‌ ಕಾಲೇಜು ಪ್ರಾಂಶುಪಾಲೆ ಸಿ| ಧನ್ಯಾ ದೇವಸ್ಯ, ಫಾದರ್‌ ಮುಲ್ಲರ್‌ ಸ್ಪೀಚ್‌ ಆ್ಯಂಡ್‌ ಲ್ಯಾಂಗ್ವೇಜ್‌ ಪೆಥಾಲಜಿ ಕಾಲೇಜಿ ಪ್ರಾಂಶುಪಾಲೆ ಸಿ| ಸಿಂಥಿಯಾ ಸಾಂತುಮಾಯರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರಿಗೆ ಬೆಂಕಿ…

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಕುಟುಂಬ ಸದಸ್ಯರಿಗೆ ಆಘಾತ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರಿಗೆ ಬೆಂಕಿ…

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ

10

Puttur: ರಸ್ತೆಯಲ್ಲಿ ಕಾರ್ಮಿಕನ ಮೃತದೇಹ; ಮೂವರ ಮೇಲೆ ಪ್ರಕರಣ ದಾಖಲು; ಓರ್ವ ವಶಕ್ಕೆ

SUBHODH

Bantwala: ಕೆದಿಲ: ಸಿಡಿಲಿಗೆ ಮೃತಪಟ್ಟ ಬಾಲಕನಿಗೆ ಕಣ್ಣೀರ ವಿದಾಯ

Ullala-Swim-1

Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ

Arrest

Mangaluru: ಮದ್ಯ ಅಕ್ರಮ ದಾಸ್ತಾನು: ಮನೆ ಮೇಲೆ ಅಬಕಾರಿ ದಾಳಿ; ಮದ್ಯ ಸಹಿತ ಇಬ್ಬರು ವಶಕ್ಕೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

‌Max Movie: ಬಿಗ್‌ ಬಾಸ್‌ ವೇದಿಕೆಯಲ್ಲಿ  ʼಮ್ಯಾಕ್ಸ್‌ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್

‌Max Movie: ಬಿಗ್‌ ಬಾಸ್‌ ವೇದಿಕೆಯಲ್ಲಿ ʼಮ್ಯಾಕ್ಸ್‌ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರಿಗೆ ಬೆಂಕಿ…

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ

6

Accident: ಆರೋಪಿ ಸೆರೆಗೆ 200 ಕ್ಯಾಮೆರಾ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.