ಶ್ರೀಕಿ ನಿವಾಸಕ್ಕೆ SIT ದಾಳಿ
Team Udayavani, Sep 13, 2023, 12:49 AM IST
ಬೆಂಗಳೂರು: ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿದ್ದ ಬಿಟ್‌ಕಾಯಿನ್ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿಯ ವಿಶೇಷ ತನಿಖಾ ದಳ (ಎಸ್‌ಐಟಿ) ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ನಿವಾಸದ ಮೇಲೆ ದಾಳಿ ನಡೆಸಿದೆ.
ಕೋರ್ಟ್‌ನಿಂದ ಸರ್ಚ್ ವಾರಂಟ್ ಪಡೆದು ಈ ಕ್ರಮ ಕೈಗೊಳ್ಳಲಾಗಿದೆ. ಒಟ್ಟು ಮೂವರ ಮನೆಗಳಲ್ಲಿ ಶೋಧ ನಡೆಸಲಾಗಿದೆ.
ಜಯನಗರದಲ್ಲಿರುವ ಶ್ರೀಕೃಷ್ಣನ ಮನೆ, ಕೃತ್ಯದಲ್ಲಿ ಆತನಿಗೆ ಸಹಕಾರ ನೀಡಿದ ಆರೋಪದ ಮೇಲೆ ಸಂಜಯನಗರ ನಿವಾಸಿ ಸುನೀಶ್ ಹೆಗ್ಡೆ, ಸದಾಶಿವನಗರದಲ್ಲಿರುವ ಪ್ರಸಿದ್ಧ್ ಶೆಟ್ಟಿ ಮನೆಗಳ ಮೇಲೆ ದಾಳಿ ನಡೆಸಲಾಗಿದ್ದು, ಕೆಲವು ದಾಖಲೆಗಳು ಸಿಕ್ಕಿವೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.