ಗರಿಗೆದರಿದ ಚಿತ್ರರಂಗ

ಸಿನಿಮಂದಿ ಮೊಗದಲ್ಲಿ ಮಂದಹಾಸ

Team Udayavani, May 25, 2020, 4:15 AM IST

cini start

ಬರೋಬ್ಬರಿ ಎರಡು ತಿಂಗಳ ಬಳಿಕ ಚಿತ್ರರಂಗ ಮೆಲ್ಲನೆ ಗರಿಗೆದರಿದೆ. ಚಿತ್ರರಂಗದ ಒಂದಷ್ಟು ಸಿನಿಮಾ ಚಟುವಟಿಕೆಗಳು ಶುರುವಾಗಿವೆ. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಚಿತ್ರೀಕರಣ ಸೇರಿದಂತೆ ಹಲವು ಸಿನಿಮಾ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಇದರಿಂದಾಗಿ ಇಡೀ ಚಿತ್ರರಂಗದಲ್ಲಿ ದುಡಿಯುವ ಕಾರ್ಮಿಕರು, ತಂತ್ರಜ್ಞರು, ಕಲಾವಿದರು ಸಂಕಷ್ಟಕ್ಕೆ ಸಿಲುಕಿದ್ದರು. ಯಾವಾಗ ಈ ಲಾಕ್‌ಡೌನ್‌ ಮುಗಿಯುತ್ತೋ ಅಂತ ಕಾದು ಕುಳಿತಿದ್ದರು.

ಆದರೆ, ಈಗ ಕೊಂಚ ಸಡಿಲ ಸಿಕ್ಕಿದ್ದರಿಂದ ಚಿತ್ರರಂಗದ ಕೆಲಸಗಳಾದ ಸಂಕಲನ, ಗ್ರಾಫಿಕ್ಸ್‌, ಹಿನ್ನೆಲೆ ಸಂಗೀತ, ಡಬ್ಬಿಂಗ್‌ ಸೇರಿದಂತೆ ಇತರೆ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಶುರುವಾಗಿವೆ. ಈ ಹಿನ್ನೆಲೆಯಲ್ಲಿ ದಂಗುಬಡಿದ್ದಿದ್ದ ಚಿತ್ರರಂಗ ತುಸು ಉತ್ಸಾಹಗೊಂಡಿದೆ. ಸಿನಿಮಾರಂಗವನ್ನೇ ನಂಬಿಕೊಂಡು ಬದುಕುತ್ತಿದ್ದ ತಂತ್ರಜ್ಞರು ಸ್ವಲ್ಪ ಮಟ್ಟಿಗೆ ಖುಷಿಗೊಂಡಿದ್ದಾರೆ. ಸಂಕಲನಕಾರರು, ಹಲವು ಚಿತ್ರಗಳಿಗೆ ಕತ್ತರಿ ಪ್ರಯೋಗ ಶುರುಮಾಡಿದರೆ, ಡಬ್ಬಿಂಗ್‌ ಕೆಲಸ ನಿರ್ವಹಿಸುವ ಎಂಜಿನಿಯರ್‌ಗಳಿಗೂ ಕೆಲಸ ಸಿಕ್ಕಿದೆ. ಉಳಿದಂತೆ ಪೋಸ್ಟರ್‌ ಡಿಸೈನ್‌ ಮಾಡುವ, ಗ್ರಾಫಿಕ್ಸ್‌ ಮಾಡುವ ತಂತ್ರಜ್ಞರು ಈಗ ಕೆಲಸದಲ್ಲಿ ನಿರತರಾಗಿದ್ದಾರೆ.

ಡಬ್ಬಿಂಗ್‌ ಕಲಾವಿದರು ಎಂದಿನಂತೆಯೇ ಒಂದಷ್ಟು ಪಾತ್ರಗಳಿಗೆ ವಾಯ್ಸ ಕೊಡುವ ಉತ್ಸಾಹದಲ್ಲಿದ್ದರೆ, ಸಂಗೀತ ನಿರ್ದೇಶಕರೂ ಕೂಡ ತಮ್ಮ ಕೀಬೋರ್ಡ್‌ ಮೇಲೆ ಬೆರಳುಗಳನ್ನಾಡಿಸುತ್ತಿದ್ದಾರೆ. ಇನ್ನು, ಹಲವು ನಿರ್ಮಾಪಕರು ಕೂಡ ಇದುವರೆಗೆ ನಿಲ್ಲಿಸಿದ್ದ ತಮ್ಮ ಸಿನಿಮಾಗಳ ಕೆಲಸಕ್ಕೆ ಚಾಲನೆ ಕೊಟ್ಟಿದ್ದಾರೆ. ಆದಷ್ಟು ಬೇಗ ಪೋಸ್ಟ್‌ ಪ್ರೊಡಕ್ಷನ್ಸ್‌ ಕೆಲಸಗಳನ್ನು ಮುಗಿಸಿಕೊಂಡು ಲಾಕ್‌ಡೌನ್‌ ಬಳಿಕ ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಗೆ ಅನುಮತಿ ಸಿಕ್ಕರೆ, ಬಿಡುಗಡೆ ಮಾಡಲು ರೆಡಿಯಾಗುತ್ತಿದ್ದಾರೆ.

ಸದ್ಯಕ್ಕೆ ಹಲವು ಸಂಕಷ್ಟಗಳಿಗೆ ಸಿಲುಕಿದ್ದ ಸಿನಿಮಮಂದಿ ಕೂಡ ಈಗ ಒಂದಷ್ಟು ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಲ್ಲಿ ನಿರತರಾಗುವ ಮೂಲಕ ಬದುಕು ಹಸನು ಮಾಡಿಕೊಳ್ಳುವಲ್ಲಿ ಮುಂದಾಗಿದ್ದಾರೆ. ಈಗಾಗಲೇ ಹಲವು ಸಿನಿಮಾಗಳ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಶುರುವಾಗಿದ್ದು, ನೂರಾರು ತಂತ್ರಜ್ಞರು ಕೆಲಸದಲ್ಲಿ ಮುಳುಗಿದ್ದಾರೆ. ಈಗಾಗಲೇ ಒಂದಷ್ಟು ಸಿನಿಮಾಗಳು ಬಿಡುಗಡೆಗೂ ಸಜ್ಜಾಗಿವೆ. ಪೂರ್ಣ ಲಾಕ್‌ಡೌನ್‌ ಮುಗಿದ ಬಳಿಕ ಪ್ರೇಕ್ಷಕರ ಮುಂದೆ ಬರಲು ಅಣಿಯಾಗುತ್ತಿವೆ. ಆದರೆ, ಚಿತ್ರಮಂದಿರಗಳಿಗೆ ಜನರು ಬರುತ್ತಾರೋ, ಇಲ್ಲವೋ ಅನ್ನುವುದೇ ಈಗ ಯಕ್ಷಪ್ರಶ್ನೆ.

ಟಾಪ್ ನ್ಯೂಸ್

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

SUBHODH

Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

Forest: ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

WhatsApp Image 2024-11-17 at 21.01.59

Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.