“ಪತ್ರಕರ್ತರಿಗೆ ಸಾಮಾಜಿಕ ಹೊಣೆಗಾರಿಕೆ ಮುಖ್ಯ’
ಜಿಲ್ಲಾ ಪತ್ರಕರ್ತರ ಸಮ್ಮೇಳನದ ಸಮಾರೋಪದಲ್ಲಿ ಡಿಸಿ ಡಾ| ರಾಜೇಂದ್ರ
Team Udayavani, Dec 29, 2021, 5:30 AM IST
ಮಂಗಳೂರು: ಪತ್ರಕರ್ತರು ಸಾಮಾಜಿಕ ಹೊಣೆಗಾರಿಕೆಯನ್ನು ಅರಿತು ಕಾರ್ಯ ನಿರ್ವಹಿಸಿದರೆ ಸಮಾಜಕ್ಕೆ ಸಿಗುವ ಫಲಿತಾಂಶ ಉತ್ತಮ ವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಹೇಳಿದ್ದಾರೆ.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಮಂಗಳವಾರ ಜರಗಿದ ಜಿಲ್ಲಾ ಪತ್ರಕರ್ತರ ಸಮ್ಮೇಳನದ ಸಮಾರೋಪ ದಲ್ಲಿ ಮುಖ್ಯ ಅತಿಥಿಯಾಗಿದ್ದ ಅವರು, ಮಾಧ್ಯಮವು ಆಡಳಿತ ವ್ಯವಸ್ಥೆಯ ಕಣ್ಣು ಹಾಗೂ ಕಿವಿಯಾಗಿದ್ದು ಜನಪರ ಆಡಳಿತದಲ್ಲಿ ಅದು ನಿರ್ವಹಿಸುವ ಪಾತ್ರ ಮಹತ್ತರವಾದುದು. ಮಾಧ್ಯ ಮಗಳ ಮೇಲೆ ಜನತೆ ಹೊಂದಿರುವ ನಂಬಿಕೆಯನ್ನು ಪತ್ರಕರ್ತರು ಉಳಿಸಿ ಕೊಳ್ಳಬೇಕು ಎಂದರು.
ಜಿಲ್ಲಾ ಎಸ್ ಪಿ ಹೃಷಿಕೇಶ್ ಸೋನಾವಣೆ ಮಾತನಾಡಿ, ಪತ್ರ ಕರ್ತರು ವೃತ್ತಿಯಲ್ಲಿ ಕ್ರಿಯಾಶೀಲತೆ ಜತೆಗೆ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.
ನಗರ ಪೊಲೀಸ್ ಉಪ ಆಯುಕ್ತ ಹರಿರಾಂ ಶಂಕರ್, ಅದಾನಿ ಸಂಸ್ಥೆಯ ಅಧ್ಯಕ್ಷ ಕಿಶೋರ್ ಆಳ್ವ, ಕೆನರಾ ಬ್ಯಾಂಕಿನ ಮಂಗಳೂರು ವೃತ್ತಕಚೇರಿಯ ಜಿಎಂ ಯೋಗೀಶ್ ಆಚಾರ್ಯ ಮಾತನಾಡಿದರು.
ಸಮ್ಮೇಳನ ಸರ್ವಾಧ್ಯಕ್ಷ, ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಅವರ ಭಾವಚಿತ್ರ ಯಾನ ಕೃತಿಯನ್ನು ಬಿಡುಗಡೆಗೊಳಿಸಲಾಯಿತು.
ಇದನ್ನೂ ಓದಿ:ನೀಟ್ ಪಿಜಿ 2021ರ ಕೌನ್ಸೆಲಿಂಗ್ ವಿಳಂಬ : ರಸ್ತೆಗಿಳಿದು ಪ್ರತಿಭಟನೆಗೆ ಮುಂದಾದ ವೈದ್ಯರು
ದ.ಕ. ಜಿಲ್ಲೆ ಭೌಗೋಳಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಅನನ್ಯತೆ ಹೊಂದಿದೆ. ಹಾಗೆಯೇ ಇಲ್ಲಿಯ ಪತ್ರಕರ್ತರೂ ವೃತ್ತಿ ಜತೆ ಸಮಾಜಮುಖಿ ಕೆಲಸಗಳಲ್ಲಿ ತೊಡಗಿ ದ್ದಾರೆ ಎಂದು ಮನೋಹರ ಪ್ರಸಾದ್ ಹೇಳಿದರು.
ಮನೋಹರ ಪ್ರಸಾದ್ ಹಾಗೂ ಹಿರಿಯ ಪತ್ರಕರ್ತರಾದ ಬಾಲಕೃಷ್ಣ ಪುತ್ತಿಗೆ, ಭಾಸ್ಕರ ರೈ ಕಟ್ಟ, ಸಾಂತೂರು ಶ್ರೀನಿವಾಸ ತಂತ್ರಿ ಮತ್ತಿತರರನ್ನು ಸಮ್ಮಾನಿಸಲಾಯಿತು. ಕರಾವಳಿ ಅಭಿವೃದ್ಧಿ ಹಾಗೂ ಮಾಧ್ಯಮ- ಸಾಮಾಜಿಕ ಹೊಣೆಗಾರಿಕೆ ಬಗ್ಗೆ ಗೋಷ್ಠಿಗಳು ಜರಗಿದವು. ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ, ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಬಾಳ ಜಗನ್ನಾಥ ಶೆಟ್ಟಿ, ಮಂಗಳೂರು ಪ್ರಸ್‌ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.