Somalia: ಹಡಗು ಹೈಜಾಕ್ ತಡೆದ ಭಾರತೀಯ ನೌಕಾಪಡೆ
ಗಲ್ಫ್ ಆಫ್ ಈಡೆನ್ನಲ್ಲಿ ಕಾರ್ಯಾಚರಣೆ
Team Udayavani, Dec 17, 2023, 12:32 AM IST
ಹೊಸದಿಲ್ಲಿ: ಸೋಮಾಲಿಯಾ ಸಮುದ್ರ ವ್ಯಾಪ್ತಿಯಲ್ಲಿ ಮಾಲ್ಟಾ ದೇಶದ ಹಡಗನ್ನು ಅಪಹರಿಸಲು ಕಡಲ್ಗಳ್ಳರು ನಡೆಸಿದ ಪ್ರಯತ್ನವನ್ನು ಭಾರತೀಯ ನೌಕಾಪಡೆ ವಿಫಲಗೊಳಿಸಿದೆ. ನೌಕಾಪಡೆಯ ವಿಚಕ್ಷಣಾ ಪಡೆಯು ವಿರೋಚಿತ ಕಾರ್ಯಾಚರಣೆ ಮಾಡಿ, ಆರು ಮಂದಿ ಕಿಡಿಗೇಡಿಗಳ ತಂಡದ ಪ್ರಯತ್ನವನ್ನು ಹಿಮ್ಮೆಟ್ಟಿಸಿದೆ.
ಗಲ್ಫ್ ಆಫ್ ಈಡೆನ್ ಪ್ರದೇಶದಲ್ಲಿ ಗುರುವಾರ ಈ ಘಟನೆ ನಡೆದಿದೆ ಎಂದು ನೌಕಾಪಡೆಯ ವಕ್ತಾರರು ಟ್ವೀಟ್ ಮಾಡಿದ್ದಾರೆ. ಮಾಲ್ಟಾದ ಹಡಗಿನ ಮೇಲೆ ಶಸ್ತ್ರ ಸಜ್ಜಿತ ಆರು ಮಂದಿ ದಾಳಿ ನಡೆಸಿದ್ದಾರೆ ಎಂಬ ಬಗ್ಗೆ ಕಡಲ್ಗಾವಲು ನೌಕೆ ಎಂ.ವಿ.ರುನ್ಗೆ ಸಂದೇಶ ರವಾನೆ ಯಾಯಿತು. ಕೂಡಲೇ ತೊಂದರೆಗೆ ಒಳಗಾದ ಹಡಗಿನತ್ತ ವಿಶೇಷ ವಿಮಾನವನ್ನು ಹಡಗಿನತ್ತ ಕಳುಹಿಸಲಾಯಿತು.
ಡಿ.15 ನಮ್ಮ ದೇಶದ ವಿಮಾನ ಗಲ್ಫ್ ಆಫ್ ಈಡೆನ್ನಲ್ಲಿ ಕಡಲ್ಗಳ್ಳರ ಪ್ರಯತ್ನವನ್ನು ಹಿಮ್ಮೆಟ್ಟಿಸಿತು. ಈ ಸಂದರ್ಭದಲ್ಲಿ ಆರು ಮಂದಿ ಕಡಲ್ಗಳ್ಳರು ಪರಾರಿಯಾಗಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ. ಸದ್ಯ ಈ ಪ್ರದೇಶದಲ್ಲಿ ಭಾರತೀಯ ನೌಕಾಪಡೆ ಪರಿಸ್ಥಿತಿಯ ಮೇಲೆ ನಿಗಾ ಇರಿಸಿದೆ ಎಂದು ಅವರು ಹೇಳಿದ್ದಾರೆ.
ಇದರ ಜತೆಗೆ ಯುನೈಟೆಡ್ ಕಿಂಗ್ಡಮ್ನ ಕಡಲು ರಕ್ಷಣ ಪಡೆಯು ಕೂಡ ಈ ಪ್ರದೇಶದಲ್ಲಿ ಸಂಚರಿಸುವ ಹಡಗುಗಳಿಗೆ ಮುನ್ನೆಚ್ಚರಿಕೆ ನೀಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.