

Team Udayavani, Nov 18, 2023, 10:47 PM IST
ದಾವಣಗೆರೆ: ರಾಜ್ಯ ಸರಕಾರದಿಂದ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯದೆ ಇರುವುದರಿಂದ ಕಾಂಗ್ರೆಸ್ ಶಾಸಕರು ಬೇಸರಗೊಂಡಿದ್ದು, ಕೆಲವರು ರಾಜೀನಾಮೆ ಕೊಡಲೂ ಮುಂದಾಗಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರಕಾರ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸ ಲಾಗುತ್ತಿಲ್ಲ. ಹಾಗೆಯೇ ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ತಲುಪಿಲ್ಲ. ಅಭಿವೃದ್ಧಿಗಾಗಿ ಶಾಸಕರಿಗೆ ಅನುದಾನವೂ ಸಿಕ್ಕಿಲ್ಲ. ಶಾಸಕರಿಗೆ ಕೇವಲ 50 ಲಕ್ಷ ರೂ. ಅನುದಾನ ನೀಡಲಾಗಿದೆ ಎನ್ನಲಾಗುತ್ತಿದೆಯಾದರೂ ಅದು ಎಲ್ಲರಿಗೂ ದೊರಕಿಲ್ಲ. ಒಟ್ಟಾರೆ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ ಎಂದರು.
ಅನ್ನಭಾಗ್ಯ ಯೋಜನೆಯಲ್ಲಿ ಕೊಡುತ್ತಿರುವ 5 ಕೆ.ಜಿ. ಅಕ್ಕಿ ಕೇಂದ್ರ ಸರಕಾರದ್ದಾಗಿದೆ. ಗೃಹಲಕ್ಷ್ಮಿ ಹಣ ಎಲ್ಲ ಮಹಿಳೆಯರಿಗೆ ದೊರಕಿಲ್ಲ. ಯುವನಿಧಿ ಜಾರಿಯಾಗಿಲ್ಲ. ಕಾಂಗ್ರೆಸ್ ಪ್ರಣಾಳಿಕೆಯ ಬಹುತೇಕ ಅಂಶಗಳು ಸಾಕಾರಗೊಂಡಿಲ್ಲ ಎಂದು ಸರಕಾರದ ವಿರುದ್ಧ ವಾಗ್ಧಾಳಿ ನಡೆಸಿದರು.
You seem to have an Ad Blocker on.
To continue reading, please turn it off or whitelist Udayavani.