ಸೋನಿಯಾ ಅವರೇ ಮುಂದುವರಿಕೆ; ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧಾರ
ಪಂಚರಾಜ್ಯಗಳ ಫಲಿತಾಂಶ ಅತ್ಯಂತ ಕಳವಳಕಾರಿ
Team Udayavani, Mar 14, 2022, 7:10 AM IST
ನವದೆಹಲಿ: ಉತ್ತರ ಪ್ರದೇಶ ಸೇರಿದಂತೆ ಪಂಚರಾಜ್ಯಗಳಲ್ಲಿನ ಸೋಲಿನ ಹಿನ್ನೆಲೆಯಲ್ಲಿ ಬಹುಮಹತ್ವದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆದಿದ್ದು, ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೇ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ.
ಇಲ್ಲಿನ ಎಐಸಿಸಿ ಕಚೇರಿಯಲ್ಲಿ ಸತತ ನಾಲ್ಕು ಗಂಟೆಗಳ ಕಾಲ ಸಭೆ ನಡೆಯಿತು. ಐದು ರಾಜ್ಯಗಳಲ್ಲಿನ ಕಾಂಗ್ರೆಸ್ ಸೋಲು ಅತ್ಯಂತ ಕಳವಳಕಾರಿ ಎಂಬ ಬಗ್ಗೆಯೂ ನಾಯಕರು ಆತಂಕ ವ್ಯಕ್ತಪಡಿಸಿದರು.
ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್ ಮತ್ತು ಮಣಿಪುರದ ಸೋಲಿನ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಗಿದೆ. ಆದರೆ, ಜಿ23 ನಾಯಕರ ಆಗ್ರಹದಂತೆ ನಾಯಕತ್ವ ಬದಲಾವಣೆಗೆ ಒಪ್ಪಿಗೆ ನೀಡಿಲ್ಲ. ಅಲ್ಲದೆ, ಸೋನಿಯಾ ಗಾಂಧಿ ಅವರೇ ಅಧ್ಯಕ್ಷರಾಗಿ ಮುಂದುವರಿಯಲಿ ಎಂದು ಎಲ್ಲ ನಾಯಕರು ಕೇಳಿಕೊಂಡರು. ಕಡೆಗೆ ಸೋನಿಯಾ ಗಾಂಧಿ ಅವರು ಒಪ್ಪಿಗೆ ನೀಡಿದರು ಎಂದು ಪಕ್ಷದ ನಾಯಕ ರಾಜೀವ್ ಶುಕ್ಲಾ ಹೇಳಿದರು.
ಎಲ್ಲರ ಸಲಹೆಗಳಿಗೆ ಮಣೆ
ಸಭೆ ನಂತರ ಮಾತನಾಡಿದ ರಂದೀಪ್ ಸುರ್ಜೇವಾಲ ಅವರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ಸಂಘಟನೆ ಸಂಬಂಧ ಸಭೆಯಲ್ಲಿ ಸೇರಿದ್ದ ಎಲ್ಲರ ಮಾತುಗಳನ್ನೂ ಆಲಿಸಿದರು. ಜತೆಗೆ, ಸಂಘಟನಾತ್ಮಕವಾಗಿ ಬದಲಾವಣೆ ಮಾಡಲು ಒಪ್ಪಿಗೆ ನೀಡಿದರು ಎಂದರು.
ಮತ್ತೂಬ್ಬ ನಾಯಕ ಕೆ.ಸಿ.ವೇಣುಗೋಪಾಲ್ ಅವರು, ಬಜೆಟ್ ಅಧಿವೇಶನ ಮುಗಿದ ಕೂಡಲೇ ಚಿಂತನ ಶಿಬಿರವನ್ನು ಆಯೋಜಿಸುವುದಾಗಿ ಪ್ರಕಟಿಸಿದರು. ಹಾಗೆಯೇ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರು, ತಮ್ಮ ರಾಜ್ಯದಲ್ಲೇ ಚಿಂತನ ಶಿಬಿರವನ್ನು ಆಯೋಜಿಸುವಂತೆ ಶಿಫಾರಸು ಮಾಡಿದರು.
ರಾಹುಲ್ ಬಗ್ಗೆಯೇ ಒಲವು
ಕಾಂಗ್ರೆಸ್‌ನ ಪ್ರತಿಯೊಬ್ಬ ನಾಯಕ ಕೂಡ ರಾಹುಲ್ ಗಾಂಧಿ ಅವರೇ ಅಧ್ಯಕ್ಷರಾಗಬೇಕು ಎಂದು ಬಯಸುತ್ತಿದ್ದಾರೆ ಎಂದು ರಣದೀಪ್ ಸುಜೇìವಾಲ ಹೇಳಿದರು. ಆದರೆ, ಇದನ್ನು ಈಗ ನಿರ್ಧಾರ ಮಾಡುವುದಿಲ್ಲ. ಸಂಘಟನಾತ್ಮಕ ಚುನಾವಣೆ ಮುಗಿದ ಮೇಲೆ ಇದು ನಿರ್ಧಾರವಾಗುತ್ತದೆ ಎಂದರು. ಸಭೆಗೂ ಮುನ್ನವೇ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಹುಲ್ ಗಾಂಧಿ ಅವರೇ ಎಐಸಿಸಿ ಅಧ್ಯಕ್ಷರಾಗಲಿ ಎಂದು ಆಗ್ರಹಿಸಿದರು.
ಜಿ23ನ ಮೂವರು ಭಾಗಿ
ಕಾಂಗ್ರೆಸ್ ನಾಯಕತ್ವದ ವಿರುದ್ಧ ಸಿಡಿದೆದ್ದಿರುವ ಜಿ23ನ ಗುಲಾಂ ನಬಿ ಆಜಾದ್, ಆನಂದ್ ಶರ್ಮ ಮತ್ತು ಮುಕುಲ್
ವಾಸ್ನಿಕ್ ಅವರು ಈ ಸಭೆಯಲ್ಲಿ ಭಾಗಿಯಾಗಿದ್ದರು. ಉಳಿದಂತೆ ಸಭೆಯಲ್ಲಿ ಇದ್ದವರೆಲ್ಲೂ ಗಾಂಧಿ ಕುಟುಂಬದ ನಿಷ್ಠೆಯುಳ್ಳವರಾಗಿದ್ದರು. ಅಲ್ಲದೆ, ಅನಾರೋಗ್ಯ ಕಾರಣದಿಂದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಎ.ಕೆ.ಆ್ಯಂಟನಿ ಅವರು ಸಭೆಯಲ್ಲಿ ಭಾಗಿಯಾಗಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.