ಇತಿಹಾಸ ಪ್ರಸಿದ್ಧ ಸೂಡಾ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ ಸಂಪನ್ನ
Team Udayavani, Dec 9, 2021, 6:44 PM IST
ಶಿರ್ವ : ಉಡುಪಿ ಜಿಲ್ಲೆಯ ಇತಿಹಾಸ ಪ್ರಸಿದ್ಧ ಸೂಡಾ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ವಾರ್ಷಿಕ ಮಹೋತ್ಸವದೊಂದಿಗೆ ಡಿ. 9 ರಂದು ಷಷ್ಠಿ ಮಹೋತ್ಸವ ಮತ್ತು ರಥೋತ್ಸವ ಸಾಂಪ್ರದಾಯಿಕವಾಗಿ ಸಂಪನ್ನಗೊಂಡಿತು. ಉಡುಪಿ ಪುತ್ತೂರು ವೇ|ಮೂ| ಹಯವದನ ತಂತ್ರಿಯವರ ನೇತೃತ್ವದಲ್ಲಿ ಅರ್ಚಕ ವೇ|ಮೂ| ಶ್ರೀಶ ಭಟ್ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಡಿ. 12 ರಂದು ಶ್ರೀಸುಬ್ರಹ್ಮಣ್ಯ ದೇವರ ಮಹಾ ರಥೋತ್ಸವ ಜರಗಲಿದೆ.
ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಡಿ.3 ರಂದು ಆರಂಭಗೊಂಡಿದ್ದು,ಡಿ. 8 ರಂದು ಧ್ವಜಾರೋಹಣದೊಂದಿಗೆ ವಾರ್ಷಿಕ ಮಹೋತ್ಸವಕ್ಕೆ ಚಾಲನೆ ನೀಡಲಾಗಿತ್ತು. ಡಿ. 9ರಂದು ಮುಂಜಾನೆ ಪಂಚಾಮೃತಾಭಿಷೇಕ, ಕಲಶಾಭಿಷೇಕ, ಮಹಾಪೂಜೆ,ಬಲಿ, ಷಷ್ಠಿ ಮಹೋತ್ಸವದ ರಥೋತ್ಸವ ನಡೆಯಿತು.
ಸಾವಿರಾರು ಭಕ್ತರು ಭಾಗಿ
ಕೋವಿಡ್ ಸುರಕ್ಷಾ ಮುನ್ನೆಚ್ಚರಿಕೆಯನ್ನು ಪಾಲಿಸಿಕೊಂಡು ಮುಂಜಾನೆಯಿಂದಲೇ ಸರತಿಯ ಸಾಲಿನಲ್ಲಿ ನಿಂತು ಸುಮಾರು 35 ಸಾವಿರಕ್ಕೂ ಹೆಚ್ಚು ಭಕ್ತರು ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಮಧ್ಯಾಹ್ನ ಪಲ್ಲಪೂಜೆ ನಡೆದು ಮಹಾ ಅನ್ನ ಸಂತರ್ಪಣೆಯಲ್ಲಿ 10 ಸಾವಿರಕ್ಕೂ ಹೆಚ್ಚು ಭಕ್ತರು ಅನ್ನ ಪ್ರಸಾದ ಸ್ವೀಕರಿಸಿದರು.
ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶಿರ್ವ ಕೋಡು ಜಯಶೀಲ ಹೆಗ್ಡೆ, ಶ್ರೀನಿವಾಸ ಭಟ್, ಕುಕ್ಕೆಹಳ್ಳಿ ದೊಡ್ಡಬೀಡು ಸುಧಾಕರ ಹೆಗ್ಡೆ,ಶಿರ್ವ ಕೋಡು ಜಯಪ್ರಕಾಶ್ ಹೆಗ್ಡೆ, ಶಿರ್ವ ಕೋಡು ದಿನೇಶ್ ಹೆಗ್ಡೆ,ಶ್ರೀನಾಥ ಹೆಗ್ಡೆ ಪಡುಬಿದ್ರಿ,ಡಾ| ಅನೂಪ್ ಹೆಗ್ಡೆ, ಪ್ರಶಾಂತ್ ಶೆಟ್ಟಿ ಸೂಡ,ರಿತೇಶ್ ಶೆಟ್ಟಿ,ಎಸ್.ಕೆ.ಸಾಲಿಯಾನ್ ಬೆಳ್ಮಣ್, ಹೇಮನಾಥ ಶೆಟ್ಟಿ,,ಪಾಂಡುರಂಗ ಶೆಟ್ಟಿ ಬಾರ್ಕೂರು, ಶಂಕರ ಕುಂದರ್ ಸೂಡ,ಪ್ರಕಾಶ್ ಶೆಟ್ಟಿ ಶಿರ್ವ, ಭಾಸ್ಕರ ಆಚಾರ್ಯ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.